ಲಂಚ ಪ್ರಕರಣ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀವ್ರ ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ACB) ತೀವ್ರ ತರಾಟೆ ತೆಗೆದುಕೊಂಡ ನಂತರ ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ರನ್ನು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ.
ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್ ಎಸಿಬಿಯನ್ನು ವಸೂಲಿ ಕೇಂದ್ರ ಹಾಗೂ ಭ್ರಷ್ಟಾಚಾರದ ಕೇಂದ್ರವಾಗಿ ಮಾರ್ಪಟ್ಟಿದೆ ಎಂದು ಕಿಡಿಕಾರಿದ್ದಾರೆ.
ಹೈಕೋರ್ಟ್ ಛೀಮಾರಿ ನಂತರ ತೀವ್ರ ಮುಜುಗರಕ್ಕೀಡಾಗಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಳಂಕಿತ ಅಧಿಕಾರಿಯೊಬ್ಬರಿಗೆ ನೇತೃತ್ವ ವಹಿಸಿರುವುದರಿಂದ ಈಗಾಗಿದೆ ಇದು ನಾಚಿಕೆಗೇಡಿನ ಸಂಗತಿ ಎಂದು ಹರಿಹಾಯ್ದಿದ್ದಾರೆ.
ಸರ್ಕಾರ ಬೇಕಂತಲೇ ಕಳಂಕಿತ ಅಧಿಕಾರಿಗಳನ್ನು ಇಂತಹ ಹುದ್ದೆಗಳಿಗೆ ನೇಮಕ ಮಾಡುತ್ತಿದೆ ಮಾಜಿ ಮುಖ್ಯ ಕಾರ್ಯದರ್ಶಿ ಜಾಧವ್ ಪ್ರಕರಣದಲ್ಲಿ ಏನು ಮಾಡಲಾಗಿದೆ ಎಂಬುದು ನಮ್ಮಗೆ ಚೆನ್ನಾಗಿ ತಿಳಿದಿದೆ. ಹಾಲಿ ತನಿಖಾಧಿಕಾರಿ ಒಬ್ಬ ನಿಷ್ಪ್ರಯೋಜಕ ಎಂದು ನ್ಯಾಯಾಲಯ ಚಾಟಿ ಬೀಸಿದೆ.