ಕನ್ನಡದ ಕಿರಿಕ್ ಪಾರ್ಟಿ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ರಶ್ಮಿಕಾ ಮಂದಣ್ಣ, ಈಗ ಟಾಲಿವುಡ್, ಕಾಲಿವುಡ್, ಬಾಲಿವುಡ್ನಲ್ಲೂ ಮಿಂಚುತ್ತಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಸದಾ ಆಕ್ಟೀವ್ ಇರುವ ರಶ್ಮಿಕಾ, ಆಗಾಗ ತಮ್ಮ ಕ್ಯೂಟ್ ಫೋಟೋಗಳನ್ನ ಅಭಿಮಾನಿಗಳೊಂದಿಗೆ ಶೇರ್ ಮಾಡಿಕೊಳ್ಳುತ್ತಿರುತ್ತಾರೆ. ಇದೀಗ ಕಿರಿಕ್ ಬ್ಯೂಟಿ ಶೇರ್ ಮಾಡಿರುವ ಕೆಲ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ.

2023ನೇ ಸಾಲಿನ ಐಪಿಎಲ್ ಉದ್ಘಾಟನಾ ಸಮಾರಂಭ ಇತ್ತೀಚೆಗಷ್ಟೇ ನಡೆಯಿತು. ಕಾರ್ಯಕ್ರಮದಲ್ಲಿ ರಶ್ಮಿಕಾ ಮಂದಣ್ಣ ಕುಣಿದು ಕುಪ್ಪಳಿಸಿದ್ದರು.

ಕಾರ್ಯಕ್ರಮದ ವೇಳೆ ತೆಗೆಸಿಕೊಂಡ ಫೋಟೋಗಳನ್ನ ರಶ್ಮಿಕಾ ಇದೀಗ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿದ್ದು, ಆ ದಿನದ ಹ್ಯಾಂಗೋವರ್ನಿಂದ ಹೊರಬರೋಕೆ ಆಗ್ತಿಲ್ಲ ಅಂತ ಕ್ಯಾಪ್ಷನ್ ಬರೆದುಕೊಂಡಿದ್ಧಾರೆ. ಸದ್ಯ ಈ ಫೋಟೋಗಳು ಸಖತ್ ವೈರಲ್ ಆಗ್ತಿವೆ.













