ಕನ್ನಡದ ಕಿರಿಕ್ ಪಾರ್ಟಿ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ರಶ್ಮಿಕಾ ಮಂದಣ್ಣ, ಇದೀಗ ಟಾಲಿವುಡ್, ಕಾಲಿವುಡ್, ಬಾಲಿವುಡ್ಗಳಲ್ಲೂ ಬಹುಬೇಡಿಕೆಯ ನಟಿಯಾಗಿ ಹೊರಹೊಮ್ಮಿದ್ದಾರೆ. ಸದಾ ಸೋಶಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿರೋ ರಶ್ಮಿಕಾ, ತಮ್ಮ ದಿನಚರಿ, ಹಾಗೂ ಫೋಟೋಗಳನ್ನ ಅಭಿಮಾನಿಗಳೊಂದಿಗೆ ಶೇರ್ ಮಾಡಿಕೊಳ್ಳುತ್ತಿರುತ್ತಾರೆ.

ಇದೀಗ ರಶ್ಮಿಕಾ ಮಂದಣ್ಣ ಶೇರ್ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿವೆ. ರಶ್ಮಿಕಾ ಹಂಚಿಕೊಂಡಿರೋ ಫೋಟೋದಲ್ಲಿ ಬ್ಲ್ಯಾಕ್ ಕಲರ್ ಡ್ರೆಸ್ ನಲ್ಲಿ ಬೋಲ್ಡ್ ಆಗಿ ಪೋಸ್ ಕೊಟ್ಟಿದ್ದಾರೆ.

ತಮ್ಮ ಇನ್ಸ್ಸ್ಟಾಗ್ರಾಂ ಖಾತೆಯಲ್ಲಿ ಫೋಟೋಗಳನ್ನ ಶೇರ್ ಮಾಡಿರುವ ರಶ್ಮಿಕಾ, ʻಬಾಲಿವುಡ್ ಹಂಗಾಮ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ನಾನು ತೊಟ್ಟ ಉಡುಗೆ ಇದು.. ಇದು ಓಕೆನಾ?ʼ ಅಂತ ಕ್ಯಾಪ್ಷನ್ ಬರೆದುಕೊಂಡಿದ್ದಾರೆ.

ಸದ್ಯ ಕಿರಿಕ್ ಹುಡುಗಿ ಶೇರ್ ಮಾಡಿರೋ ಫೋಟೋಗೆ ಫ್ಯಾನ್ಸ್ ಫಿದಾ ಆಗಿದ್ದು, ಕ್ಯೂಟ್, ಸೂಪರ್ ಅಂತೆಲ್ಲಾ ಕಮೆಂಟ್ ಮಾಡಿದ್ದಾರೆ.







