ಗಣರಾಜ್ಯೊತ್ಸವ ದಿನದಂದು ದೆಹಲಿಯಲ್ಲಿ ರೈತ ಪರೇಡ್ ವೇಳೆ ನಡೆದ ಅಹಿತಕರ ಬೆಳವಣಿಗೆಯಿಂದ ಬೇಸರಗೊಂಡಿರುವ ರಾಷ್ಟ್ರೀಯ ಕಿಸಾನ್ ಮಜ್ದೂರ್ ಸಂಘಟನೆ ಹೋರಾಟದಿಂದ ಹಿಂದೆ ಸರಿದಿದೆ.
ರಾಷ್ಟ್ರೀಯ ಕಿಸಾನ್ ಮಜ್ದೂರ್ ಸಂಘಟನೆ ಹಾಗೂ ಆಲ್ ಇಂಡಿಯಾ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯ ಮುಖಂಡರೂ ಆಗಿರುವ ವಿ ಎಂ ಸಿಂಗ್ ಇಂದು ಮಾಧ್ಯಮವನ್ನುದ್ದೇಶಿಸಿ ಮಾತನಾಡಿ ಈ ವಿಷಯ ಪ್ರಕಟಿಸಿದ್ದಾರೆ.
ಭಿನ್ನ ಉದ್ದೇಶವಿರುವವರೊಂದಿಗೆ ನಾವು ಹೋರಾಟ ಮುಂದುವರೆಸಲು ಸಾಧ್ಯವಿಲ್ಲವೆಂದು ವಿ ಎಂ ಸಿಂಗ್ ಹೇಳಿದ್ದಾರೆ.
ಮಂಗಳವಾರ ನಡೆದ ಬೆಳವಣಿಗೆಗಳು, ರೈತ ಮುಖಂಡರ ವಿರುದ್ಧ ಎಫ್‌ಐಆರ್ ದಾಖಲೆಯಾಗಿರುವ ಹಿನ್ನೆಲೆಯಲ್ಲಿ ಬುಧವಾರ ಸಂಜೆ 7 ಗಂಟೆಗೆ ಕಿಸಾನ್ ಏಕ್ತಾ ಮೋರ್ಚಾ ಪತ್ರಿಕಾಗೋಷ್ಠಿ ಕರೆದಿದೆ.
ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ