• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕಿಮ್ಮನೆ ರತ್ನಾಕರ್‌ ಅವರು ಒಬ್ಬ ಸಭ್ಯ ರಾಜಕಾರಣಿ : ಸಿದ್ದರಾಮಯ್ಯ

Any Mind by Any Mind
June 15, 2022
in ಕರ್ನಾಟಕ
0
ಕಿಮ್ಮನೆ ರತ್ನಾಕರ್‌ ಅವರು ಒಬ್ಬ ಸಭ್ಯ ರಾಜಕಾರಣಿ : ಸಿದ್ದರಾಮಯ್ಯ
Share on WhatsAppShare on FacebookShare on Telegram

ಕಿಮ್ಮನೆ ರತ್ನಾಕರ್‌ ಅವರು ಒಬ್ಬ ಸಭ್ಯ ರಾಜಕಾರಣಿ. ರಾಜ್ಯ ಕಂಡ ಅತ್ಯಂತ ಸಭ್ಯತೆಯ, ಬದ್ಧತೆಯ ಕೆಲವೇ ರಾಜಕಾರಣಿಗಳಲ್ಲಿ ಇವರು ಒಬ್ಬರು. ಮಂತ್ರಿಮಂಡಲ ವಿಸ್ತರಣೆ ಸಂದರ್ಭದಲ್ಲಿ ಅವರನ್ನು ಸಂಪುಟದಿಂದ ಕೈಬಿಟ್ಟ ವೇಳೆ ಸ್ವಲ್ಪವೂ ಬೇಸರ ಮಾಡಿಕೊಳ್ಳದೆ ಬೇರೆಯವರಿಗೆ ಅವಕಾಶ ಮಾಡಿಕೊಡಿ ಎಂದಿದ್ದರು. ಇಷ್ಟರ ಮಟ್ಟಿಗೆ ಅವರು ಸಜ್ಜನರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ADVERTISEMENT

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಇಂದು ಕಿಮ್ಮನೆ ರತ್ನಾಕರ್ ಅವರು ಆಯೋಜಿಸಿದ್ದ ಪ್ರತಿಭಟನಾ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮಾತನಾಡಿ, ಇಂದು ನಾವು ನಡೆಸಿರುವ ಪಾದಯಾತ್ರೆ ಯಾವುದೇ ರಾಜಕೀಯ ಲಾಭಕ್ಕಾಗಿ ಮಾಡಿರುವ ಹೋರಾಟ ಅಲ್ಲ. ಇಂದು ಕನ್ನಡದ ಮನಸುಗಳಿಗೆ ನೋವಾಗುವ ಕೆಲಸ ರಾಜ್ಯದಲ್ಲಿ ಆಗುತ್ತಿದೆ. ಕನ್ನಡದ ಅಸ್ಮಿತೆಗೆ ಧಕ್ಕೆಯಾದಾಗ ಕನ್ನಡಪರ ಮನಸುಗಳು ಹೋರಾಟಕ್ಕೆ ಇಳಿಯಬೇಕಾಗುತ್ತದೆ. ಇಂದು ಬಸವಣ್ಣ, ಅಂಬೇಡ್ಕರ್‌, ಕುವೆಂಪು, ನಾರಾಯಣ ಗುರುಗಳಂತಹಾ ಮಹಾಪುರುಷರ ಚರಿತ್ರೆಯನ್ನು ತಿರುಚಲಾಗ್ತಿದೆ. ಈಗಾಗಲೇ ಚರಿತ್ರೆಯನ್ನು ಸಾಕಷ್ಟು ತಿರುಚಲಾಗಿದೆ. ಈ ನಿಟ್ಟಿನಲ್ಲಿ ದೇಶದ ಭವಿಷ್ಯ ನಿರ್ಮಾಣ ಮಾಡುವ ಮಕ್ಕಳಿಗೆ ಎಂತಹಾ ಜ್ಞಾನ ತುಂಬಿಕೊಡಬೇಕು ಎಂಬುದು ಬಹಳ ಮುಖ್ಯ ಎಂದಿದ್ದಾರೆ.

ಬಸವಣ್ಣನವರು ವೈದಿಕ ಧರ್ಮಕ್ಕೆ ಪರ್ಯಾಯವಾದ ಮನುಷ್ಯ ಧರ್ಮದ ಸ್ಥಾಪನೆ ಮಾಡಿದರು. ಅವರು ಎಲ್ಲಾ ಮೌಢ್ಯ, ಕಂದಾಚಾರ, ಜಾತಿ ವ್ಯವಸ್ಥೆಗಳ ವಿರುದ್ಧ ಹೋರಾಟ ಮಾಡಿ ಮನುಷ್ಯ ಮನುಷ್ಯನಾಗಿ ಬಾಳುವ ಅವಕಾಶವಾಗಬೇಕು ದುಡಿದರು. ವೈದಿಕ ಧರ್ಮ ಮನುಷ್ಯ ವಿರೋಧಿಯಾಗಿತ್ತು, ಜಾತಿ ವ್ಯವಸ್ಥೆ, ಅಸ್ಪೃಶ್ಯತೆ ಮುಂತಾದ ಹಲವು ಮನುಷ್ಯ ವಿರೋಧಿ ಆಚರಣೆಗಳು ಇದ್ದವು. ಇಂಥಾ ಜಾತಿ, ಧರ್ಮಗಳ ನಡುವೆ ಕಂದರ ಸೃಷ್ಟಿಯಾಗಬಾರದು ಎಂದು ಹೋರಾಟ ಮಾಡಿದ ಬಸವಣ್ಣನವರ ಆಶಯಗಳಿಗೆ ವಿರುದ್ಧವಾಗಿ ಜನರನ್ನು ಮತ್ತೆ ವೈದಿಕ ಧರ್ಮದ ಕಡೆಗೆ ತೆಗೆದುಕೊಂಡು ಹೋಗುವ ಪ್ರಯತ್ನ ಇಂದು ಮಾಡಲಾಗುತ್ತಿದೆ. ಇದು ಆಗಬಾರದು.

ಅಂಬೇಡ್ಕರ್‌ ಅವರು ಸಂವಿಧಾನ ಕರಡು ಸಮಿತಿಯ ಅಧ್ಯಕ್ಷರಾಗದೇ ಹೋಗಿದ್ದರೆ ಈ ದೇಶಕ್ಕೆ ಇಂತಹಾ ಯೋಗ್ಯ ಸಂವಿಧಾನ ಸಿಗುತ್ತಿರಲಿಲ್ಲ. ಆರ್. ಎಸ್. ಎಸ್‌ ಮತ್ತು ಅಂಗ ಸಂಸ್ಥೆಗಳಿಗೆ ಸಂವಿಧಾನ ರಚನೆಯಾದ ದಿನದಿಂದಲೂ ಅದರ ಬಗ್ಗೆ ಗೌರವ ಇಲ್ಲ. ಕಾರಣ ಸಂವಿಧಾನ ಸಮಾನತೆ, ಜಾತ್ಯಾತೀತತೆಯನ್ನು ಸಾರುತ್ತದೆ, ಎಲ್ಲರಿಗೂ ಸಮಾನ ಅವಕಾಶಗಳನ್ನು ಒದಗಿಸಿಕೊಡುತ್ತದೆ. ಇದು ಮನುವಾದಿಗಳಿಗೆ ಇಷ್ಟವಿಲ್ಲ. ಎಲ್ಲಿ ಸಾಮಾಜಿಕ ಅಸಮಾನತೆ ಇರುತ್ತದೆ ಅಲ್ಲಿ ಮೇಲ್ವರ್ಗದ ಜನರು ಕೆಳವರ್ಗದ ಜನರನ್ನು ಶೋಷಣೆ ಮಾಡಲು ಅವಕಾಶ ಇರುತ್ತದೆ. ಇದು ಅವರ ಉದ್ದೇಶ. ಸಾವಿರಾರು ವರ್ಷಗಳ ಕಾಲ ಅಸಮಾನತೆ, ದೌರ್ಜನ್ಯವನ್ನು, ಗುಲಾಮಗಿರಿಯನ್ನು ಸಹಿಸಿಕೊಂಡು ಬದುಕ್ಕಿದ್ದೇವೆ. ಇದರ ವಿರುದ್ಧ ಧ್ವನಿಯೆತ್ತಿ, ಶಾಂತಿಯುತವಾದ ಪ್ರತಿಭಟನೆಯನ್ನು ಮಾಡಬೇಕಿದೆ. ಇಲ್ಲದಿದ್ದರೆ ಸಮಾನತೆ ಸಿಗುವುದಿಲ್ಲ. ಕಾರಣ ಜಾತಿ ವ್ಯವಸ್ಥೆ ಸಾಮಾಜಿಕವಾಗಿ ಬಹಳ ಆಳವಾಗಿ ಬೇರು ಬಿಟ್ಟಿದೆ. ಅಷ್ಟು ಸುಲಭದಲ್ಲಿ ಅದನ್ನು ನಿರ್ಮೂಲನೆ ಮಾಡಲಾಗಲ್ಲಎಂದು ಹೇಳಿದ್ದಾರೆ.

800 ವರ್ಷಗಳ ಹಿಂದೆ ಬಸವಣ್ಣನವರು ಇವನಾರವ, ಇವನಾರವ, ಇವನಾರವ ಎಂದೆನಿಸದಿರಯ್ಯ, ಇವ ನಮ್ಮವ, ಇವ ನಮ್ಮವ, ಇವ ನಮ್ಮವ ಎಂದೆನಿಸಯ್ಯ, ಎನ್ನ ಮನೆ ಮಗನೆಂದೆನಿಸಯ್ಯ ಕೂಡಲಸಂಗಮದೇವ ಎಂದು ಹೇಳಿದ್ದರು. ಈಗಲೂ ಸಮಾಜದಲ್ಲಿ ಏನಾದರೂ ಬದಲಾವಣೆ ಆಗಿದೆಯಾ? ಅನೇಕ ಜನ ಈ ವಚನ ಹೇಳಿ ಜಾತಿ ಮಾಡುತ್ತಾರೆ. ಇಂತಹಾ ಮನಸುಗಳಿಂದ ದೇಶಭಕ್ತಿ, ಜಾತ್ಯತೀತತೆ, ಮಾನವೀಯ ಮೌಲ್ಯಗಳನ್ನು ಕಲಿಯಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.

ಅಂಬೇಡ್ಕರ್‌ ಅವರು ಸೇರಿ 7 ಜನ ಸಂವಿಧಾನ ಕರಡು ರಚನಾ ಸಮಿತಿ ಸದಸ್ಯರಾಗಿದ್ದರು. ಅದರಲ್ಲಿ ಟಿ.ಟಿ ಕೃಷ್ಣಮಾಚಾರಿ ಕೂಡ ಒಬ್ಬರು. ಬಹಳಷ್ಟು ಮಂದಿ ಕಾನೂನು ತಜ್ಞರಿದ್ದರು, ಆದರೆ ಅಂಬೇಡ್ಕರ್‌ ಅವರಿಗೆ ಈ ದೇಶದ ಜಾತಿ ವ್ಯವಸ್ಥೆ ಮತ್ತು ಸಾಮಾಜಿಕ ವ್ಯವಸ್ಥೆ ಬಗ್ಗೆ ಇದ್ದ ಜ್ಞಾನ ಬೇರೆ ಯಾರಿಗೂ ಇರಲಿಲ್ಲ. ಆದ್ದರಿಂದ ಇವುಗಳಿಗೆ ಸೂಕ್ತ ಪರಿಹಾರ ಕೊಡುವ ಕೆಲಸವನ್ನು ಸಂವಿಧಾನದ ಮೂಲಕ ಅವರು ಮಾಡಿದರು. ಯಾರು ಜಾತಿ ವ್ಯವಸ್ಥೆ, ಅಸಮಾನತೆಯನ್ನು ಹುಟ್ಟುಹಾಕಿದ್ದಾರೆ ಅಂಥವರ ಕೈಯಲ್ಲಿ ಸಂವಿಧಾನ ರಚನೆ ಮಾಡುವ ಅವಕಾಶ ಸಿಕ್ಕಿದ್ದರೆ ನಮಗೆ ಇಂತಹಾ ಸಂವಿಧಾನ ಸಿಗಲು ಸಾಧ್ಯವಿರಲಿಲ್ಲ. ಅಂಬೇಡ್ಕರರನ್ನು ಸಂವಿಧಾನ ಶಿಲ್ಪಿ ಎಂದು ಕರೆದವರು ಟಿ.ಟಿ ಕೃಷ್ಣಮಾಚಾರಿ. ಇದನ್ನು ರೋಹಿತ್‌ ಚಕ್ರತೀರ್ಥನ ಮೂಲಕ ತೆಗಿಸಿದ್ದೀರಲ್ಲ ನಿಮಗೆ ಮಾನ ಮರ್ಯಾದಿ ಇದೆಯಾ? ಎಂದು ಮರುಪ್ರಶ್ನೆ ಮಾಡಿದ್ದಾರೆ.

1949 ನವೆಂಬರ್‌ 26 ರಂದು ಅಂಬೇಡ್ಕರ್‌ ಅವರು ಮಾಡಿದ ಭಾಷಣವನ್ನು ಓದಿದರೆ ನಿಮಗಿರುವ ಎಲ್ಲ ಸಂಶಯಗಳು ನಿವಾರಣೆಯಾಗಲಿದೆ. ದಯಮಾಡಿ ಎಲ್ಲರೂ ಇದನ್ನು ಓದಬೇಕು. ದೇಶದ ಸಾಮಾಜಿಕ ವ್ಯವಸ್ಥೆ ಬಗ್ಗೆ ಅವರಿಗಿದ್ದ ಜ್ಞಾನದ ಮಟ್ಟ ಇದರಿಂದ ಅರ್ಥವಾಗುತ್ತದೆ. ಮುಂದೆ ದೇಶ ಹೇಗಿರಬೇಕು ಎಂಬುದಕ್ಕೆ ಅವರ ಭಾಷಣ ಕೈಗನ್ನಡಿ. ಹಿಂದೂ ಧರ್ಮ, ನಾವು ಹಿಂದೂಗಳು ಎಂದು ಕೆಲವರು ನಾಟಕವಾಡುತ್ತಾರೆ. ಅವರು ಮಾತ್ರ ಹಿಂದೂಗಳ? ನಾವೆಲ್ಲ ಹಿಂದೂಗಳಲ್ಲವೇ? ಕುವೆಂಪು, ಅಂಬೇಡ್ಕರ್‌, ನಾರಾಯಣ ಗುರುಗಳು ಹಿಂದೂಗಳಲ್ಲವೇ? ಮನುಷ್ಯತ್ವ ಇರುವವರು ಹಿಂದೂಗಳು, ಮನುಷ್ಯತ್ವ ಇಲ್ಲದವರು ಹಿಂದೂ ವಿರೋಧಿಗಳು. ನಾಡಿನ ಹೆಮ್ಮೆಯ ದಾರ್ಶನಿಕರಿಗೆ, ಸಂತರಿಗೆ, ಸಮಾಜ ಸುಧಾರಕರಿಗೆ ಅವಮಾನ ಮಾಡುವವರು ಮನುಷ್ಯತ್ವ ವಿರೋಧಿಗಳು.

ಇಂದು ಆರಂಭವಾದ ಕಾರ್ಯಕ್ಕೆ ರಾಜಕೀಯ ರೂಪ ಕೊಡಬಾರದು, ರಾಜಕೀಯ ರೂಪ ಪಡೆಯದೆ ಇದ್ದರೆ ಇದು ಹೆಚ್ಚು ಯಶಸ್ವಿಯಾಗಲು ಸಾಧ್ಯ. ಇಂಥಾ ಕಾರ್ಯಕ್ರಮಗಳಿಗೆ ನಮ್ಮ ಸಂಪೂರ್ಣವಾದ ಬೆಂಬಲ ಇರಲಿದೆ. ಇಂದು ಸಾಂಸ್ಕೃತಿಕ ಭಯೋತ್ಪಾದನೆ ನಡೆಯುತ್ತಿದೆ. ಇದರ ವಿರುದ್ಧ ಕನ್ನಡದ ಮನಸುಗಳು ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ.

ಬಸವರಾಜ ಬೊಮ್ಮಾಯಿ ಪಠ್ಯಪುಸ್ಕರ ಪರಿಷ್ಕರಣಾ ಸಮಿತಿಯನ್ನು ವಿಸರ್ಜನೆ ಮಾಡಿದ್ದಾರೆ, ಆದರೆ ಆ ಸಮಿತಿ ಶಿಫಾರಸು ಮಾಡಿದ್ದ ಪಠ್ಯಗಳನ್ನು ತಿರಸ್ಕಾರ ಮಾಡಿಲ್ಲ. ಶಿಕ್ಷಣ ಸಚಿವ ನಾಗೇಶ್‌ ಅವರ ತಂದೆ ಚಂದ್ರಶೇಖರಯ್ಯ ಅವರು ರಾಮಕೃಷ್ಣ ಹೆಗಡೆ ಅವರ ಶಿಷ್ಯ, ಆದರೆ ಈ ಪುಣ್ಯಾತ್ಮ ನಾಗೇಶ್ ಆರ್. ಎಸ್. ಎಸ್‌ ಸೇರಿಕೊಂಡು ಬರೀ ಸುಳ್ಳು ಹೇಳುತ್ತಾರೆ. ಇಂಥವರು ಮಕ್ಕಳಿಗೆ ವಿದ್ಯೆ ಕಲಿಸಲು ಅರ್ಹರೆ? ಇಲ್ಲಿನ ಶಾಸಕ ಜ್ಞಾನೇಂದ್ರರಿಗೆ ಜ್ಞಾನವೇ ಇಲ್ಲ. ಆತ ಅಜ್ಞಾನಿ. ಕರ್ನಾಟಕ ಕಂಡ ಅತ್ಯಂತ ಅಸಮರ್ಥ ಗೃಹ ಸಚಿವ ಅಂದರೆ ಆರಗ ಜ್ಞಾನೇಂದ್ರ. ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಇಂತಹಾ ಅಸಮರ್ಥ ಗೃಹ ಸಚಿವರನ್ನೇ ನಾನು ನೋಡಿಲ್ಲ ಎಂದು ಹೇಳಿದ್ದಾರೆ.

ಮಕ್ಕಳಿಗೆ ವಿಷ ಉಣಿಸುವ ಇಂಥವರ ವಿರುದ್ಧ ನಾವು ಹೋರಾಟವನ್ನು ಮಾಡಲೇಬೇಕು. ಈ ನಿಟ್ಟಿನಲ್ಲಿ ಇಂಥಾ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ ಎಂದು ಆಶಿಸುತ್ತೇನೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರಾಷ್ಟ್ರಪತಿ ಚುನಾವಣೆ; 17 ವಿಪಕ್ಷಗಳು ಸಭೆಯಲ್ಲಿ ಭಾಗಿ, ಪ್ರಮುಖ ಪಕ್ಷಗಳ ಗೈರು

Next Post

ರಾಷ್ಟ್ರಪತಿ ಚುನಾವಣೆ; ಗಾಂಧಿಯ ಮೊಮ್ಮಗ ವಿಪಕ್ಷ ಅಭ್ಯರ್ಥಿ ?

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025
Next Post
ರಾಷ್ಟ್ರಪತಿ ಚುನಾವಣೆ; ಗಾಂಧಿಯ ಮೊಮ್ಮಗ ವಿಪಕ್ಷ ಅಭ್ಯರ್ಥಿ ?

ರಾಷ್ಟ್ರಪತಿ ಚುನಾವಣೆ; ಗಾಂಧಿಯ ಮೊಮ್ಮಗ ವಿಪಕ್ಷ ಅಭ್ಯರ್ಥಿ ?

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada