• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ನನ್ನ ಮೇಲೆ ಆಧಾರರಹಿತ ಆರೋಪ ಮಾಡಿದವರ ವಿರುದ್ಧ ಕಾನೂನು ಕ್ರಮ : ರವಿ ಡಿ ಚನ್ನಣ್ಣವರ್

ಪ್ರತಿಧ್ವನಿ by ಪ್ರತಿಧ್ವನಿ
January 31, 2022
in ಇದೀಗ
0
ನನ್ನ ಮೇಲೆ ಆಧಾರರಹಿತ ಆರೋಪ ಮಾಡಿದವರ ವಿರುದ್ಧ ಕಾನೂನು ಕ್ರಮ : ರವಿ ಡಿ ಚನ್ನಣ್ಣವರ್
Share on WhatsAppShare on FacebookShare on Telegram

ನನ್ನ ಮೇಲೆ ಆಧಾರರಹಿತ ಆರೋಪ ಮಾಡಿದವರ ವಿರುದ್ಧ ಕಾನೂನು ಕ್ರಮ : ರವಿ ಡಿ ಚನ್ನಣ್ಣವರ್

ADVERTISEMENT

ಕೆಲವು ದಿನಗಳಿಂದ ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣವರ್ ವಿರುದ್ಧ ಅನೇಕ ಭ್ರಷ್ಟಾಚಾರ ಮತ್ತು ಅಕ್ರನ ಆಸ್ತಿ ಗಳಿಸಿರುವ ಆರೋಪಗಳು ಕೇಳಿ ಬರುತ್ತಿವೆ. ಆದರೆ ಅವರು ಈ ವರೆಗೂ ಯಾವುದೇ ಪ್ರತಿಕ್ರೀಯೆ ನೀಡಿರಲಿಲ್ಲ. ಇದೀಗ ತಮ್ಮ ಮೇಲಿನ ಎಲ್ಲ ಆರೋಪಗಳ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾಹಿತಿ ನೀಡಿರುವ ಅವರು, ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ವ್ಯಕ್ತಿಗಳು ನನ್ನ ಮೇಲೆ ಮತ್ತು ನನ್ನ ಕುಟುಂಬದ ಮೇಲೆ ಆಧಾರರಹಿತ ಆರೋಪ ಮಾಡಿರುವುದು ನನ್ನ ಗಮನಕ್ಕೆ ಬಂದಿದೆ ಇದೆಲ್ಲವೂ ಸುಳ್ಳು ಎಂದು ಹೇಳಿದ್ದಾರೆ.

ರವಿ ಡಿ ಚನ್ನಣ್ಣನವರ್ ಸ್ಪಷ್ಟಣೆ:-

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ವ್ಯಕ್ತಿಗಳು ನನ್ನ ಮೇಲೆ ಮತ್ತು ನನ್ನ ಕುಟುಂಬದ ಮೇಲೆ ಆಧಾರರಹಿತ ಆರೋಪ ಮಾಡಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಇವೆಲ್ಲವೂ ಸುಳ್ಳಾಗಿದ್ದು, ದುರುದ್ದೇಶದಿಂದ ಕೂಡಿರುತ್ತವೆ. ಸಾಮಾಜಿಕ ಜಾಲತಾಣದಲ್ಲಿ, ನನ್ನ ತಂದೆ-ತಾಯಿಯವರ ಹೆಸರಲ್ಲಿರುವ ಕೆಲ ಪಹಣಿ ಹಾಕಿ, ಆರೋಪಿಸಿದ್ದು, ಅವುಗಳೆಲ್ಲ ಕಾನೂನು ಬದ್ಧವಾಗಿಯೇ ಖರೀದಿಸಿದ್ದು, ಪಿತ್ರಾರ್ಜಿತ ಹಾಗೂ ಸ್ವಯಾರ್ಜಿತ ಆಸ್ತಿ ಗಳಾಗಿವೆ. ಅವುಗಳನ್ನೆಲ್ಲ ಆಯಾ ವರ್ಷವೇ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿರುತ್ತಾರೆ.

ಇವುಗಳನ್ನು ನಾನು ಭ್ರಷ್ಟ ರೀತಿಯಿಂದ ಸಂಪಾದಿಸಿದ್ದೇನೆ ಎಂದು ಸುಳ್ಳು ಸುದ್ದಿಗಳನ್ನು ಹರಡಿ ನನ್ನನ್ನು ತೇಜೋವಧೆ ಮಾಡಬೇಕೆಂದೇ ಸಾಮಾಜಿಕ ಜಾಲತಾಣದಲ್ಲಿ ಬಿಂಬಿಸುತ್ತಿದ್ದು, ನಾನೊಬ್ಬ ಅಖಿಲ ಭಾರತೀಯ ಸೇವಕನಾಗಿದ್ದು, ಸೇವಾ ನಿಯಮಗಳ ಅಡಿ ವರ್ತಿಸಬೇಕಾದ್ದು ನನ್ನ ಕರ್ತವ್ಯ ಆದ್ದರಿಂದ ಈ ಕುರಿತಂತೆ ನಾನು ಇದಾವುದಕ್ಕೂ ನಾನು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸದೇ ಕಾನೂನುಬದ್ಧವಾಗಿ ಈ ಕೆಳಕಂಡಂತೆ ಕ್ರಮ ಕೈಗೊಂಡಿರುತ್ತೆನೆ.

  1. ನಾನು ಈಗಾಗಲೇ ಕಾನೂನಾತ್ಮಕವಾಗಿ ನಮ್ಮ ನ್ಯಾಯವಾದಿಗಳ ಮೂಲಕ ಲೀಗಲ್ ನೋಟಿಸ್ ನೀಡಿರುತ್ತೇನೆ. ಇದಕ್ಕೆ ಉತ್ತರ ಬಂದಿರುವುದಿಲ್ಲ

2.ನಾನು ಈ ಕುರಿತು ಸಂಬಂಧಪಟ್ಟ ಮಾನ್ಯ ನ್ಯಾಯಾಲಯದಲ್ಲಿ , ರೂಪಾಯಿ 3 ಕೋಟಿಗೆ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಲಿದ್ದೇನೆ.

3.ಹಾಗೆಯೇ ಸುಳ್ಳು ಆಪಾದನೆ ಮಾಡಿದ್ದಕ್ಕೆ, ಎರಡು ವರ್ಷ ಜೈಲು ಶಿಕ್ಷೆ ವಿಧಿಸುವಂತೆ ಸಂಬಂಧಪಟ್ಟ ಮಾನ್ಯ ನ್ಯಾಯಾಲಯದಲ್ಲಿ ಕ್ರಿಮಿನಲ್ DEFEMATION ಕೇಸ್ ಹೂಡಲಿದ್ದೇನೆ.

ನನಗೆ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆ ಇದೆ. ನ್ಯಾಯಾಲಯ ತೀರ್ಪು ಕೊಡುವವರಿಗೆ, ಎಲ್ಲಾ ಸುಳ್ಳು ಸುದ್ದಿಗಳನ್ನು ನಂಬದಂತೆ, ಎಲ್ಲ ಆತ್ಮೀಯರಲ್ಲಿ ಮನವಿ ಮಾಡಿಕೊಳ್ಳುತ್ತೇನೆ.

ಮಾಧ್ಯಮಗಳು ಪ್ರಚಾರ ಮಾಡದಂತೆ ತಡೆಯಜ್ಞೆ ತಂದದ್ದು ಅವುಗಳ ಅಭಿವ್ಯಕ್ತಿ ಸತ್ವವನ್ನು ಕುಗ್ಗಿಸಲು ಅಲ್ಲ. ಅನೇಕ ಸಂಕಷ್ಟಗಳ ನಡುವೆ ಬೆಳೆದ ನಾನು ನನ್ನ ಸ್ವಾಭಿಮಾನ ಮತ್ತು ವ್ಯಕ್ತಿತ್ವದ ಬಗ್ಗೆ ಸದಾ ಎಚ್ಚರದಲ್ಲಿ ಇದ್ದೇನೆ. ಕೆಲವು ಸುಳ್ಳು ಸುದ್ದಿಗಳು ನನ್ನ ಬಗ್ಗೆ ಹರಿದಾಡಿದ ಕಾರಣ ನಾನು ತಡೆಯಜ್ಞೆ ತಂದದ್ದನ್ನು ಅನ್ಯತಾ ಭಾವಿಸಬಾರದೆಂದು ಈ ಮೂಲಕ ತಮ್ಮ ಗಮನಕ್ಕೆ ತರಲು ಇಚ್ಚಿಸಿದ್ದೇನೆ.

ಹಾಗೆಯೇ ನನಗೆ ನ್ಯಾಯವಾದಿಗಳ ಬಗ್ಗೆ ಸ್ವಚ್ಛ ವ್ಯವಸ್ಥೆ ಬಯಸುವವರ ಬಗ್ಗೆ, ಅಪಾರ ಗೌರವವಿದೆ, ಈ ಮೂಲಕ ನನ್ನ ಆತ್ಮೀಯರೆಲ್ಲರಿಗೂ ಮನವಿ ಮಾಡುವುದೇನೆಂದರೆ, ತಾವು ದಯಮಾಡಿ ಯಾವುದೇ ಪ್ರತಿಕ್ರಿಯೆ ನೀಡಬಾರದು, ಅಶ್ಲೀಲ ಪದ ಬಳಕೆ, ಹೀಯಾಳಿಸುವುದನ್ನು ಮಾಡಬಾರದು ಎಂದು ಎಲ್ಲಾ ಮಾಧ್ಯಮಗಳ ಮೂಲಕ ಕೇಳಿಕೊಳ್ಳುತ್ತೇನೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ತಮ್ಮ ಮೇಲಿನ ಆರೋಪಗಳಿಗೆ ಸ್ಪಷ್ಟತೆ ನೀಡಿದ್ದಾರೆ.

Tags: BJPCongress PartyCovid 19ಬಿಜೆಪಿಬ್ರಷ್ಟಾಚಾರರವಿ ಡಿ ಚನ್ನಣ್ಣವರ್
Previous Post

ಮೈಸೂರು ಮಹಾರಾಜರು ಒಡವೆ ಮಾರಿ KRS ಕಟ್ಟಿಸಿದ್ರು, ಇವರೇನ್ ಮಾಡಿದಾರೆ : ಶಾಸಕ ನಾಗೇಂದ್ರ ಗರಂ

Next Post

ಟೋಯಿಂಗ್ ವ್ಯವಸ್ಥೆ ಪುನರ್ ಪರಿಶೀಲನೆ : ಸಂಜೆ ಪೋಲಿಸ್ ಅಧಿಕಾರಿಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
ಫೆಬ್ರವರಿ 14 ರಿಂದ ರಾಜ್ಯ ವಿಧಾನಮಂಡಲ ಜಂಟಿ ಅಧಿವೇಶನ, ಮಾರ್ಚ್ನಲ್ಲಿ ಬಜೆಟ್ : ಸಿಎಂ ಬೊಮ್ಮಾಯಿ

ಟೋಯಿಂಗ್ ವ್ಯವಸ್ಥೆ ಪುನರ್ ಪರಿಶೀಲನೆ : ಸಂಜೆ ಪೋಲಿಸ್ ಅಧಿಕಾರಿಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada