ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಸೇರಿದಂತೆ ೯ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ.
ಸಿಐಡಿ ಎಸ್ ಪಿ ಆಗಿದ್ದ ರವಿ ಡಿ.ಚನ್ನಣ್ಣನವರ್ ಅವರನ್ನು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಕೆಲವು ದಿನಗಳಿಂದ ರವಿ ಡಿ ಚೆನ್ನಣ್ಣವರ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪಗಳು ಕೇಳಿಬರುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಇವರ ವಿರುದ್ಧ ಪರ ವಿರೋಧ ಚರ್ಚೆಗಳು ನಡೆಯುತ್ತಿವೆ.

ತಮ್ಮ ವಿರುದ್ಧ ಭ್ರಷ್ಟಾಚಾರದ ಸುದ್ದಿ ಪ್ರಕಟಿಸದಂತೆ ಕೋರ್ಟ್ ನಿಂದ ಇತ್ತೀಚೆಗೆ ತಡೆಯಾಜ್ಞೆ ತಂದಿದ್ದರು. ಈ ಮಧ್ಯೆಯೇ ಇವರ ವರ್ಗಾವಣೆ ವಿಷಯ ಹಲವಾರು ಅನುಮಾನಗಳಿಗೆ ಕಾರಣವಾಗಿದೆ.






