ಕರ್ನಾಟಕದ ಶಿಖರ ಬೆಳಗಾವಿಯಲ್ಲಿ ದಿನದಿಂದ ದಿನಕ್ಕೆ ಪುಂಡರ ಹಾವಳಿ ಜಾಸ್ತಿಯಾಗುತ್ತಿದ್ದು ಜಿಲ್ಲೆಯ ಗೋಕಾಕ್ ತಾಲ್ಲೂಕಿನ ಖನಗಾಂವದಲ್ಲಿ ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣನ ಬ್ಯಾನರ್ ಹರಿದು ಅಶಾಂತಿ ಸೃಷ್ಟಿಸಲು ಯತ್ನಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ರಾಯಣ್ಣನ ಅಭಿಮಾನಿಗಳು ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು ಮತ್ತು ಗ್ರಾಮದಲ್ಲಿ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿದ್ದರು.
ಖನಗಾಂವದ ಸರ್ಕಲ್ನಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಫ್ಲೆಕ್ಸ್ ಅಳವಡಿಸಲಾಗಿತ್ತು. ಕಿಡಿಗೇಡಿಗಳು ಬ್ಯಾನರ್ ಹರಿದುಹಾಕಿ ಅಶಾಂತಿ ನಿರ್ಮಾಣಕ್ಕೆ ಕಾರಣರಾಗಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ತಪ್ಪಿತಸ್ಥರ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಭರವಸೆ ನೀಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.
ಈ ಕುರಿತು ಪ್ರತಿಕ್ರಿಯಿಸಿರುವ ಗೋಕಾಕ ಗ್ರಾಮೀಣ PSI ಎನ್.ಆರ್.ಖಿಲಾರಿ ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಬ್ಯಾನರ್ ಹರಿದು ಹಾಕಿದ್ದಾನೆ ಎಂಬ ಸಂಶಯವಿದೆ. ತಪ್ಪಿತಸ್ಥರ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದಬಾರದು ಶಾಸಂತಿ ಸುವ್ಯವಸ್ಥೆ ಕಾಪಾಡಲು ನಿಮ್ಮ ಸಹಕಾರ ಅತ್ಯಗತ್ಯ ಎಂದಿದ್ದಾರೆ.