
IPL ಕಪ್ ಜೊತೆಗೆ ಬೆಂಗಳೂರಿಗೆ ಬರ್ತಿರೋ ಆರ್‌ಸಿಬಿ ತಂಡವನ್ನು ವಿಧಾನಸೌಧದಿಂದ ಚಿನ್ನಸ್ವಾಮಿ ಸ್ಟೇಡಿಯಂ ತನಕ ತೆರೆದ ವಾಹನದಲ್ಲಿ ಮೆರವಣಿಗೆ ಮಾಡುವ ಸಿದ್ಧತೆ ಭರದಿಂದ ಆಗಿದೆ. ಈ ನಡುವೆ ಸರ್ಕಾರದ ವತಿಯಿಂದಲೂ ಆಟಗಾರರಿಗೆ ಸನ್ಮಾನ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಆರ್‌ಸಿಬಿ ತಂಡಕ್ಕೆ ಅಭಿನಂಧಿಸುವ ವಿಚಾರವಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಮಾತನಾಡಿ, ನಮ್ಮ ಕರ್ನಾಟಕಕ್ಕೆ ಆರ್ ಸಿಬಿ ಹುಡುಗರು ಗೌರವ, ಹೆಮ್ಮೆ ತಂದಿದ್ದಾರೆ. ಅವರನ್ನ ಅಭಿನಂದಿಸುತ್ತೇನೆ, ಅವರಿಗೆ ನಾವು ಗೌರವ ಸಲ್ಲಿಸಬೇಕು. ಯಾವ ರೀತಿ ಅವರನ್ನು ಗೌರವಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದಿದ್ದಾರೆ.
ಸರ್ಕಾರವೇ ಅಭಿನಂದನೆ ಸಲ್ಲಿಸಲು ಮುಂದಾಗಿರುವ ಕಾರಣಕ್ಕೆ ಹೆಚ್ಚಿನ ಸಮಸ್ಯೆ ಆಗಬಹುದು ಅನ್ನೋ ಕಾರಣಕ್ಕೆ ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ. ಟ್ರಾಫಿಕ್ ಸಮಸ್ಯೆ ಆಗಬಾರದು, ಸಾಕಷ್ಟು ಯುವಕರು ಭಾಗವಹಿಸುತ್ತಾರೆ.

ಆರ್‌ಸಿಬಿಯವ್ರು ಅವರು ಶೆಡ್ಯೂಲ್ ಹಾಕಿರ್ತಾರೆ. ಆದರೆ ಕಂಟ್ರೋಲ್ ಮಾಡೋದು ಯಾರು ನಾವಲ್ವ, ಸರ್ಕಾರ ನಮ್ಮ ಪೊಲೀಸರು ಅಲ್ವ..? ಹೋಂ ಮಿನಿಸ್ಟರ್ , ಪೊಲೀಸ್ ಕಮೀಷನರ್ ಎಲ್ಲಾ ಕೂತು ಮಾತನಾಡಿ, ನಿರ್ಧಾರ ಮಾ ಡ್ತಾರೆ. ನಾನು ಕೂಡ ಸಂಪೂರ್ಣ ಮ್ಯಾಚ್ ನೋಡಿದ್ದೇನೆ. ಆರ್‌ಸಿಬಿ ಟೀಂ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅವರಿಗೆ ಸನ್ಮಾನ ನಡೆಸೋ ಬಗ್ಗೆ ಮಾತಾಡುತ್ತಿದ್ದೇವೆ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ನಗರ ಪೊಲೀಸ್ ಆಯುಕ್ತ ದಯಾನಂದ್ ಭೇಟಿ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಜೊತೆ ಹಿರಿಯ ಅಧಿಕಾರಿಗಳ ಸಭೆ ಮಾಡುತ್ತಿದ್ದಾರೆ. ವಿಧಾನಸೌಧದಲ್ಲಿ ಆಟಗಾರರಿಗೆ ಸನ್ಮಾನ ಮಾಡುವುದಕ್ಕೆ ಸಾಧ್ಯವಿದೆಯೇ ಎನ್ನುವ ಬಗ್ಗೆ ಚರ್ಚೆ ನಡೆಯುತ್ತಿದೆ. ಸಿದ್ದರಾಮಯ್ಯ ನಿವಾಸದಲ್ಲಿ ಸಭೆ ನಡೆಸುತ್ತಿರುವ ಹಿರಿಯ ಪೊಲೀಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್, ನಗರ ಪೊಲೀಸ್ ಆಯುಕ್ತ ದಯಾನಂದ್, CS ಶಾಲಿನಿ ರಜನೀಶ್, ಹಾಗೂ ಸಂಚಾರಿ ಆಯುಕ್ತ ಅನುಚೇತ್. ಇಂದು ನಡೆಯುವ ವಿಕ್ಟರಿ ಪೆರೇಡ್ ಬಗ್ಗೆ ಸಿಎಂ ಜೊತೆಗೆ ಮೀಟಿಂಗ್ ಮಾಡುತ್ತಿರುವ ಅಧಿಕಾರಿಗಳು, ಸಭೆ ಬಳಿಕ ಮಹತ್ವದ ನಿರ್ಧಾರ ಹೊರ ಬೀಳಲಿದೆ ಎನ್ನಲಾಗ್ತಿದೆ.