ಇಂದು (ಏ.10) ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ (Chinnaswamy stadium) ನಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (Delhi capitals) ವಿರುದ್ಧ ಆರ್‌ಸಿಬಿ (RCB) ತವರು ನೆಲದಲ್ಲಿ ಸೋಲನುಭವಿಸಿದೆ.

ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಡೆಲ್ಲಿ ಕ್ಯಾಪಿಟಲ್ಸ್ ಆರ್.ಸಿ.ಬಿ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಯಶಸ್ವಿಯಾಯ್ತು. ಈ ಪರಿಣಾಮವಾಗಿ 20 ಓವರ್ ಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆನಗಳೂರು 163 ರನ್ ಗಳಿಸಲಷ್ಟೇ ಶಕ್ತವಾಯ್ತು.

ಈ ಸುಲಭದ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಆಘಾತ ಅನುಭವಿಸ್ತು. ಆದ್ರೆ ಡೆಲ್ಲಿ ಕ್ಯಾಪಿಟಲ್ಸ್ ಪರ ನೆಲಕಚ್ಚಿ ನಿಂತ ಕನ್ನಡಿಗ ಕೆಎಲ್ ರಾಹುಲ್ ಕೇವಲ 53 ಎಸೆತಗಳಲ್ಲಿ ಭರ್ಜರಿ 93 ರನ್ ಗಳಿಸಿ ತಂಡವನ್ನು ಗೆಲುವಿನ ದಡ ತಲುಪಿಸಿದರು.

ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಆರ್.ಸಿ.ಬಿ ವಿರುದ್ಧ 6 ವಿಕೆಟ್‌ಗಳಿಂದ ಜಯಗಳಿಸಿದೆ.164 ರನ್‌ಗಳ ಸಾಧಾರಣ ಮೊತ್ತವನ್ನು ಬೆನ್ನಟ್ಟಿದ ಡೆಲ್ಲಿ ಕೇವಲ 17.5 ಓವರ್ ಗಳಲ್ಲಿ ಗೆಲುವು ದಾಖಲಿಸಿತು. ಆ ಮೂಲಕ ಆರ್.ಸಿ.ಬಿ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಎರಡನೇ ಪಂದ್ಯ ಸೋತಿದೆ.