• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

ಬ್ಯಾಕ್​ ಟು ಬ್ಯಾಕ್ ಎರಡು ಸಿಕ್ಸ್​ ಮತ್ತು ಒಂದು ಬೌಂಡರಿ ಬಾರಿಸಿ ಪಂದ್ಯವನ್ನು ಗೆದ್ದುಕೊಂಡ ಡೆಲ್ಲಿ..

ಪ್ರತಿಧ್ವನಿ by ಪ್ರತಿಧ್ವನಿ
April 18, 2026
in Top Story, ಇದೀಗ, ಕರ್ನಾಟಕ, ಕ್ರೀಡೆ
0
​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Share on WhatsAppShare on FacebookShare on Telegram

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್ 6 ವಿಕೆಟ್‌ಗಳಿಂದ ಜಯಗಳಿಸಿತು.

ADVERTISEMENT
Siddaramaiah : ಸರ್ಕಾರಿ ಶಾಲೆಯಲ್ಲಿ ಓದಿದ ಸಿದ್ದರಾಮಯ್ಯ ಇಂಗ್ಲೀಷ್‌ ಎಷ್ಟು ಚೆನ್ನಾಗಿದೆ ನೋಡಿ.. #pratidhvani

ಆರ್‌ಸಿಬಿ ನೀಡಿದ್ದ 176 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಪರ ಟ್ರಿಸ್ಟಾನ್ ಸ್ಟಬ್ಸ್ ಅಜೇಯ 60 ರನ್‌ಗಳನ್ನು ಕಲೆಹಾಕಿ ಹೈಸ್ಕೋರರ್​ ಎನಿಸಿಕೊಂಡರು. ಚೇಸಿಂಗ್​ ಆರಂಭಿಸಿದ ಕೆಎಲ್ ರಾಹುಲ್ 34 ಎಸೆತಗಳಲ್ಲಿ 57 ರನ್ ಗಳಿಸಿದರೆ, ಡೇವಿಡ್ ಮಿಲ್ಲರ್ ಅಜೇಯ 22 ರನ್ ಗಳಿಸಿದರು. ನಾಯಕ ಅಕ್ಷರ್ ಪಟೇಲ್ 19 ಎಸೆತಗಳಲ್ಲಿ 26 ರನ್ ಗಳಿಸಿ ಗಾಯದಿಂದಾಗಿ ಅರ್ಧದಲ್ಲೇ ನಿರ್ಗಮಿಸಿದರು.

ಆದಾಗ್ಯೂ ಅದ್ಭುತ ಬೌಲಿಂಗ್​ ಪ್ರದರ್ಶನ ನೀಡಿದ್ದ ಆರ್​ಸಿಬಿ ಪಂದ್ಯವನ್ನು ಕೊನೆ ಹಂತಕ್ಕೆ ಕೊಂಡೊಯ್ದಿತು. ಕೊನೆಯ ಓವರ್​ನಲ್ಲಿ ಡೆಲ್ಲಿ ತಂಡಕ್ಕೆ 15 ರನ್​ಗಳು ಬೇಕಾಗಿದ್ದವು. ಆರಂಭಿಕ ಎರಡು ಎಸೆತಗಳಲ್ಲಿ 2 ರನ್​ ಕಲೆಹಾಕಿದ್ದ ಡೆಲ್ಲಿ ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಬ್ಯಾಕ್​ ಟು ಬ್ಯಾಕ್ ಎರಡು ಸಿಕ್ಸ್​ ಮತ್ತು ಒಂದು ಬೌಂಡರಿ ಬಾರಿಸಿ ಪಂದ್ಯವನ್ನು ಗೆದ್ದುಕೊಂಡರು.

ಇದನ್ನೂ ಓದಿ : ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಚೇಸಿಂಗ್‌ನ ಆರಂಭದಲ್ಲಿ ಭುವನೇಶ್ವರ್‌ ಕುಮಾರ್‌ ಮೂರು ವಿಕೆಟ್‌ ಕಿತ್ತು ಡೆಲ್ಲಿ ತಂಡಕ್ಕೆ ಆರಂಭಿಕ ಆಘಾತ ನೀಡಿದ್ದರು. ಆ ಮೂಲಕ ಡಿಸಿ ಕೇವಲ 18 ರನ್‌ಗಳಿಗೆ ಮೂರು ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ, ಕೆಎಲ್‌ ರಾಹುಲ್‌ ಹಾಗೂ ಟ್ರಿಸ್ಟನ್‌ ಸ್ಟಬ್ಸ್‌ 69 ರನ್‌ಗಳ ಜೊತೆಯಾಟವಾಡಿದರು. ರಾಹುಲ್ ತಮ್ಮ ಬ್ಯಾಟಿಂಗ್‌ನಲ್ಲಿ 34 ಎಸೆತಗಳಲ್ಲಿ 57 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರು.

ನಂತರ, ಸ್ಟಬ್ಸ್‌ ಹಾಗೂ ಅಕ್ಷರ್‌ ಪಟೇಲ್‌ ಐದನೇ ವಿಕೆಟ್‌ಗೆ 47 ರನ್‌ ಗಳಿಸಿದರು. ಅಕ್ಷರ್‌ ಪಟೇಲ್‌ 26 ರನ್‌ ಗಳಿಸಿದ ಬಳಿಕ ರಿಟೈರ್ಡ್‌ ಹರ್ಟ್‌ ಆದರು. ಆದರೆ, ಕೊನೆಯವರೆಗೂ ಬ್ಯಾಟ್‌ ಮಾಡಿದ ಟ್ರಿಸ್ಟನ್‌ ಸ್ಟಬ್ಸ್‌ 47 ಎಸೆತಗಳಲ್ಲಿ ಅಜೇಯ 60 ರನ್‌ ಗಳಿಸಿದರು ಹಾಗೂ ಡೇವಿಡ್‌ ಮಿಲ್ಲರ್‌ (22*) ಅವರ ಜೊತೆಗೆ 45 ರನ್‌ ಜೊತೆಯಾಟವಾಡಿದರು. ಇದರೊಂದಿಗೆ ಡೆಲ್ಲಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಆರ್‌ಸಿಬಿ ಪರ ಈ ಸೀಸನ್‌ನಲ್ಲಿ ಫಿಲ್‌ ಸಾಲ್ಟ್‌ ಎರಡನೇ ಅರ್ಧಶತಕವನ್ನು ಬಾರಿಸಿದರು. ಅವರು ಆಡಿದ 38 ಎಸೆತಗಳಲ್ಲಿ 3 ಸಿಕ್ಸರ್‌ ಹಾಗೂ 4 ಬೌಂಡರಿಗಳೊಂದಿಗೆ 63 ರನ್‌ ಗಳಿಸಿದರು ಹಾಗೂ ವಿರಾಟ್‌ ಕೊಹ್ಲಿ ಜೊತೆ 52 ರನ್‌ ಮತ್ತು ದೇವದತ್‌ ಪಡಿಕ್ಕಲ್‌ ಜೊತೆ 47 ರನ್‌ಗಳ ಜೊತೆಯಾಟವನ್ನು ಆಡಿದರು. ಆರ್‌ಸಿಬಿ ಒಂದು ಹಂತದಲ್ಲಿ 10ರ ಸರಾಸರಿಯಲ್ಲಿ ರನ್‌ ಗಳಿಸಿತ್ತು. ಆದರೆ, ಡೆತ್‌ ಓವರ್‌ಗಳಲ್ಲಿ ಆರ್‌ಸಿಬಿ ಬ್ಯಾಟ್ಸ್‌ಮನ್‌ಗಳು ವಿಫಲರಾದರು. ಹಾಗಾಗಿ ಕೊನೆಯಲ್ಲಿ ಕೇವಲ 28 ರನ್‌ಗಳನ್ನು ಮಾತ್ರ ಗಳಿಸಲು ಸೀಮಿತವಾಗಿತ್ತು.

Tags: Akshar PatelBhuvaneshwar KumarChinnaswamy StadiumDelhi capitalsFil SaltIPL2026K L RahulM Chinnaswamy StadiumPratidhvaniRajat PatidarRoyal Challengers Benglore
Previous Post

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

Next Post

ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

Related Posts

ಪ್ಲೇಆಫ್‌ಗೆ ಲಗ್ಗೆ ಇಟ್ಟ ಆರ್‌ಸಿಬಿ : 23 ರನ್‌ಗಳಿಂದ ಪಂಜಾಬ್‌ ಮಣಿಸಿ ಗೆದ್ದು ಬೀಗಿದ ರೆಡ್‌ ಆರ್ಮಿ..
Top Story

ಪ್ಲೇಆಫ್‌ಗೆ ಲಗ್ಗೆ ಇಟ್ಟ ಆರ್‌ಸಿಬಿ : 23 ರನ್‌ಗಳಿಂದ ಪಂಜಾಬ್‌ ಮಣಿಸಿ ಗೆದ್ದು ಬೀಗಿದ ರೆಡ್‌ ಆರ್ಮಿ..

by ಪ್ರತಿಧ್ವನಿ
May 17, 2026
0

ಬೆಂಗಳೂರು : ಪಂಜಾಬ್​ ಕಿಂಗ್ಸ್​ ವಿರುದ್ಧ ನಡೆದ ಐಪಿಎಲ್​ 2026ರ 61ನೇ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಭರ್ಜರಿ ಪ್ರದರ್ಶನ ನೀಡಿದ್ದು ಗೆಲುವಿನ ರಣಕೇಕೆ ಹಾಕಿದೆ...

Read moreDetails
ಚಂಡ ಮಾರುತ ಬರುವ ಮುನ್ನ ಶಾಂತವಾಗಿರುತ್ತೆ : ಇರಾನ್‌ ಮೇಲೆ ಟ್ರಂಪ್ ಮತ್ತೆ ದಾಳಿಯ ಮುನ್ಸೂಚನೆ..!

ಚಂಡ ಮಾರುತ ಬರುವ ಮುನ್ನ ಶಾಂತವಾಗಿರುತ್ತೆ : ಇರಾನ್‌ ಮೇಲೆ ಟ್ರಂಪ್ ಮತ್ತೆ ದಾಳಿಯ ಮುನ್ಸೂಚನೆ..!

May 17, 2026
ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!

ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!

May 17, 2026
ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

May 17, 2026
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
Next Post
ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

ಇರಾನ್‌ - ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada