ಐಪಿಎಲ್ನ(IPL 2024) ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು(Royal Challengers Bengaluru) ತಂಡ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್(Chennai Super Kings) ತಂಡವನ್ನು ಮಣಿಸಿ ಪ್ಲೇ ಆಫ್ಗೆ ಪ್ರವೇಶಿಸಿತು. ಆರ್ಸಿಬಿಯ ಗೆಲುವಿಗೆ ಫ್ರಾಂಚೈಸಿಯ ಮಾಜಿ ಮಾಲಿಕ ವಿಜಯ್ ಮಲ್ಯ(Vijay Mallya) ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಈ ಮೂಲಕ ಆರ್ಸಿಬಿ ಜತೆಗಿನ ನಂಟನ್ನು ಮುಂದುವರಿಸಿದ್ದಾರೆ.

ಆರ್ಸಿಬಿ ಗೆಲುವು ಸಾಧಿಸುತ್ತಿದ್ದಂತೆ ವಿಜಯ್ ಮಲ್ಯ ಟ್ವೀಟ್ ಮಾಡಿ, “ಆರ್ಸಿಬಿ ಪ್ಲೇ ಆಫ್ಗೆ ಎಂಟ್ರಿ ಕೊಟ್ಟಿದ್ದಕ್ಕೆ ತುಂಬಾ ಸಂತೋಷವಾಗುತ್ತಿದೆ. ತಂಡಕ್ಕೆ ಹೃದಯ ಪೂರಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸತತ ಸೋಲುಗಳಿಂದ ಗೆಲುವಿನ ಟ್ರ್ಯಾಕ್ಗೆ ಮರಳಿರುವುದು ಅದ್ಭುತ. ಟ್ರೋಫಿ ಗೆಲ್ಲುವ ಕಡೆಗೆ ಆರ್ಸಿಬಿ ಇನ್ನಷ್ಟು ಆಕ್ರಮಣಕಾರಿಯಾಗಿ ಆಡಬೇಕು” ಎಂದು ಮುಂದಿನ ಪಂದ್ಯಗಳಿಗೂ ಶುಭ ಹಾರೈಸಿದ್ದಾರೆ. ಇದೇ ವರ್ಷ ಆರ್ಸಿಬಿ ಮಹಿಳಾ ತಂಡ ಡಬ್ಲ್ಯುಪಿಎಲ್ (WPL) ಟೂರ್ನಿಯ ಕಪ್ ಗೆದ್ದಾಗಲೂ ಕೂಡ ವಿಜಯ್ ಮಲ್ಯ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದರು.

ಶನಿವಾರ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಮಳೆ ಪೀಡಿತ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಆಹ್ವಾನ ಪಡೆದ ಆರ್ಸಿಬಿ ವಿರಾಟ್ ಕೊಹ್ಲಿ ಮತ್ತು ಫಾಫ್ ಡುಪ್ಲೆಸಿಸ್ ಮೊದಲ ವಿಕೆಟ್ಗೆ ನಿರ್ಮಿಸಿದ ಭದ್ರ ಅಡಿಪಾಯದ ನೆರವಿನಿಂದ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 218 ರನ್ ಬಾರಿಸಿತು. ಜವಾಬಿತ್ತ ಚೆನ್ನೈ ಈ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ ಹಲವು ಏರಿಳಿತ ಕಂಡು ಕೊನೆಗೆ ತನ್ನ ಪಾಲಿನ ಆಟದಲ್ಲಿ 7 ವಿಕೆಟ್ಗೆ 191 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲಿಗೆ ಶರಣಾಯಿತು.