ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಜ್ ರಾವತ್ ಅವರ ಜೊತೆಯಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು 7 ವಿಕೆಟ್ ಗಳಿಂದ ಮಣಿಸಿ ಹ್ಯಾಟ್ರಿಕ್ ಗೆಲುವು ದಾಖಲಿಸಿತು.
ಪುಣೆಯಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್ ಗಳಲ್ಲಿ 6 ವಿಕೆಟ್ ಗೆ 151 ರನ್ ಗಳಿಸಿತು. ಸ್ಪರ್ಧಾತ್ಮಕ ಮೊತ್ತ ಬೆಂಬತ್ತಿದ ಆರ್ ಸಿಬಿ 19 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.

ನಾಯಕ ಫಾಫ್ ಡು ಪ್ಲೆಸಿಸ್ (16) ಮೊದಲ 50 ರನ್ ಗಳ ಜೊತೆಯಾಟ ನಿಭಾಯಿಸಿದ ಅನುಜ್ ರಾವತ್ ಮತ್ತು ವಿರಾಟ್ ಕೊಹ್ಲಿ 2ನೇ ವಿಕೆಟ್ ಗೆ 80 ರನ್ ಜೊತೆಯಾಟ ಆಡಿದರು.
ಅನುಜ್ ರಾವತ್ 47 ಎಸೆತಗಳಲ್ಲಿ 2 ಬೌಂಡರಿ ಮತ್ತು 6 ಸಿಕ್ಸರ್ ನೆರವಿನಿಂದ 66 ರನ್ ಗಳಿಸಿದ್ದಾಗ 2 ರನ್ ಕದಿಯುವ ಆತುರದಲ್ಲಿ ರನೌಟ್ ಆದರು. ವಿರಾಟ್ ಕೊಹ್ಲಿ 36 ಎಸೆತಗಳಲ್ಲಿ 5 ಬೌಂಡರಿ ಸಹಾಯದಿಂದ 48 ರನ್ ಗಳಿಸಿದ್ದಾಗ ಔಟಾಗಿ ಅರ್ಧಶತಕದಿಂದ ವಂಚಿತರಾದರು.













