ಬೆಂಗಳೂರು : ಈ ವರ್ಷದ ಐಪಿಎಲ್ ಟೂರ್ನಮೆಂಟ್‌ನಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟಾನ್ಸ್ (GT) ಐಪಿಎಲ್ 2026 ಸೀಸನ್‌ನ ಫೈನಲ್ ಪಂದ್ಯದಲ್ಲಿ ಸೆಣಸಾಡುತ್ತಿವೆ. ಇಂದು ಗುಜರಾತಿನ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಟಾಸ್ ಪ್ರಕ್ರಿಯೆಯಲ್ಲಿ ಆರ್‌ಸಿಬಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆಮಾಡಿಕೊಂಡಿದೆ.
ಸತತ ಎರಡನೇ ಬಾರಿಗೆ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳುವ ಮೂಲಕ ಬೆಂಗಳೂರು ಇತಿಹಾಸ ನಿರ್ಮಿಸುವ ಅವಕಾಶವನ್ನು ಹೊಂದಿದೆ. ಆರ್‌ಸಿಬಿ ಈ ಸಾಧನೆ ಮಾಡಿದರೆ ಐಪಿಎಲ್‌ನಲ್ಲಿ ಸತತ ಎರಡನೇ ಬಾರಿಗೆ ಟ್ರೋಫಿ ಗೆದ್ದ ಮೂರನೇ ತಂಡ ಎನಿಸಿಕೊಳ್ಳಲಿದೆ. ಇತ್ತ ಗುಜರಾತ್ ಕೂಡ 2022 ರ ನಂತರ ಚಾಂಪಿಯನ್ ಪಟ್ಟವನ್ನು ಅಲಂಕರಿಸಲು ನೋಡುತ್ತಿದೆ.






