ಹುಬ್ಬಳ್ಳಿ : ನಾನು ಯಾವುದೇ ಸಂದರ್ಭದಲ್ಲಿಯೂ ರಾಜಕೀಯ ನಿವೃತ್ತಿ ಘೋಷಣೆ ಮಾಡೋಕೆ ಸಿದ್ಧನಿದ್ದೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ದೆಹಲಿಗೆ ತೆರಳುವ ಮುನ್ನ ಮಾತನಾಡಿದ ಜಗದೀಶ್ ಶೆಟ್ಟರ್, ರಾಜಕೀಯ ನಿವೃತ್ತಿ ಪಡೆದು ಹೋಗುವಾಗ ಗೌರವದಿಂದ ಹೋಗಬೇಕು ಎಂದು ಹೇಳಿದ್ದಾರೆ.

ಬಿಜೆಪಿ ರಾಷ್ಟ್ರಾಧ್ಯಕ್ಷರು ಫೋನ್ ಮಾಡಿ ಚರ್ಚೆ ಮಾಡೋಣ ಬನ್ನಿ ಎಂದರು. ಹೀಗಾಗಿ ಹೋಗ್ತಿದ್ದೇನೆ. ಪಾಸಿಟಿವ್ ಹೋಪ್ಸ್ ಇದೆ ಎಂದು ಶೆಟ್ಟರ್ ಹೇಳಿದ್ದಾರೆ.
ನಾನು ಪಕ್ಷ ಯಾವುದೇ ಸ್ಥಾನಮಾನ ನೀಡದೇ ಇದ್ದರೂ 2 ವರ್ಷಗಳಿಂದ ಪಕ್ಷದಲ್ಲಿದ್ದೇನೆ. ಇಂದು ನಾನು ಯಡಿಯೂರಪ್ಪರನ್ನು ಭೇಟಿ ಮಾಡಬೇಕಿತ್ತು. ಆದರೆ ಆಗಲಿಲ್ಲ. ದೆಹಲಿಯಿಂದ ವಾಪಸ್ಸಾದ ಬಳಿಕ ಅವರೊಂದಿಗೆ ಮಾತನಾಡುತ್ತೇನೆ ಎಂದು ಹೇಳಿದ್ರು.