ಡಾ.ವಿಷ್ಣುವರ್ಧನ್ (Dr Vishnuvardhan) ಹಾಗೂ ಬಿ.ಸರೋಜಾದೇವಿ (B sarojadevi) ಅವರಿಗೆ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ (Karnataka rathna) ನೀಡಿದ ಬೆನ್ನಲ್ಲೇ ಇದೀಗ ರೆಬಲ್ ಸ್ಟಾರ್ ಅಂಬರೀಷ್ ಗೂ ಕರ್ನಾಟಕ ರತ್ನ ನೀಡಬೇಕು ಎಂಬ ಆಗ್ರಹ ಜೋರಾಗಿ ಕೇಳಿಬರುತ್ತಿದೆ.

ಈ ವಿಚಾರವಾಗಿ ಹಿರಿಯ ನಟಿ ತಾರಾ ಅನುರಾಧ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಬೆಂಗಳೂರಿನ ಸದಾಶಿವನಗರದ ಡಿಕೆ ಶಿವಕುಮಾರ್ ನಿವಾಸದಲ್ಲಿ ತಾರಾ ಅನುರಾಧ ಡಿಕೆ ಶಿವಕುಮಾರ್ ರನ್ನು ಭೇಟಿಯಾಗಿದ್ದಾರೆ.

ಮಂಡ್ಯದ ಗಂಡು ಅಂಬರೀಷ್ ಗೆ ಕರ್ನಾಟಕ ರತ್ನ ನೀಡಬೇಕು ಎಂಬುದು ಅವರ ಅಭಿಮಾನಿಗಳ ಒತ್ತಾಸೆಯಾಗಿದೆ. ನೀವು ಅವರನ್ನು ಹತ್ತಿರದಿಂದ ಕಂಡಿದ್ದೀರಿ. ಹೀಗಾಗಿ ಕರ್ನಾಟಕ ರತ್ನ ನೀಡಿ ಹಿರಿಯ ಕಲಾವಿದರಿಗೆ ಗೌರವ ಸಲ್ಲಿಸಿ ಎಂದು ಪತ್ರ ಬರೆದು ನಟಿ ತಾರಾ ಆಗ್ರಹಿಸಿದ್ದಾರೆ.










