ಬೀದರ್: ಬಿಜೆಪಿ (BJP) ರೆಬಲ್ಸ್ ತಂಡದಿಂದ ವಕ್ಫ್ ವಿರುದ್ಧ ಹೋರಾಟ ಆರಂಭವಾಗಿದೆ. ʻವಕ್ಫ್ ಹಠಾವೋ ಭಾರತ್ ದೇಶ್ ಬಚಾವೋʼ ಘೋಷವಾಕ್ಯದಡಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಮತ್ತು ಅವರ ತಂಡದಿಂದ ಹೋರಾಟ ಆರಂಭವಾಗಿದೆ.
ಈ ಹೋರಾಟ ಡಿಸೆಂಬರ್ 1ರ ವರೆಗೆ ಐದು ಜಿಲ್ಲೆಗಳಲ್ಲಿ ನಡೆಯಲಿದೆ. ಈ ಪ್ರತಿಭಟನೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಕುಮಾರ್ ಬಂಗಾರಪ್ಪ, ಮಾಜಿ ಸಂಸದ ಪ್ರತಾಪ್ ಸಿಂಹ, ಜಿ.ಎಂ ಸಿದ್ದೇಶ್ವರ್, ಹೊಳಲ್ಕೆರೆ ಚಂದ್ರಪ್ಪ ಸೇರಿದಂತೆ ಹಲವರು ರೆಬೆಲ್ ನಾಯಕರು ಭಾಗಿಯಾಗಲಿದ್ದಾರೆ.
ಬೀದರ್ ನ ನರಸಿಂಹ ದೇವಸ್ಥಾನದಲ್ಲಿ ಪೂಜೆ ನಡೆದ ನಂತರ ಬೀದರ್ ತಾಲೂಕಿನ ಧರ್ಮಾಪುರ, ಚಟ್ನಳ್ಳಿ ಗ್ರಾಮಗಳಿಗೆ ಪ್ರತಿಭಟನೆ ಸಾಗಲಿದೆ. ಇಲ್ಲಿಯ ಜನರೊಂದಿಗೆ ಚರ್ಚೆ ನಡೆಸಿ, ಸಮಸ್ಯೆ ಆಲಿಸಲಿದ್ದಾರೆ.
ಮಧ್ಯಾಹ್ನ ಬೀದರ್‌ನ ಗಣೇಶ ಮೈದಾನದಲ್ಲಿ ಸಭೆ ನಡೆಸಿ ರೈತರ ಅಹವಾರು ಸ್ವೀಕರಿಸಲಾಗುತ್ತದೆ. ನಂತರ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆ ನಡೆಸಿ ಕಚೇರಿಗೆ ಮುತ್ತಿಗೆ ಹಾಕುವ ಸಾಧ್ಯತೆಗಳಿವೆ. ಸಂಜೆ 4 ಗಂಟೆಗೆ ಬೀದರ್ ತಾಲೂಕಿನ ಚಟ್ನಳ್ಳಿ ಗ್ರಾಮಕ್ಕೆ ಭೇಟಿ ನೀಡಿ ರೈತರೊಂದಿಗೆ ಸಂವಾದ ನಡೆಸಲಿದೆ. ಆದರೆ, ಈ ಹೋರಾಟಕ್ಕೆ ಬಿಜೆಪಿಯ ಇನ್ನಿತರ ನಾಯಕರು ಭಾಗವಹಿಸುವ ಸಾಧ್ಯತೆ ಕಡಿಮೆ ಇದೆ.