ಬೆಂಗಳೂರು : ಭೂಮಾಪನ ಮತ್ತ ಕಂದಾಯ ವ್ಯವಸ್ಥೆ ಭೂದಾಖಲೆಗಳ ಇಲಾಖೆಯಲ್ಲಿನ ಭೂಮಾಪಕರ ಹುದ್ದೆಗಳ (Surveyor Post) ನೇಮಕಾತಿ ಪರೀಕ್ಷೆಗಳು (Exam) ಅಕ್ಟೋಬರ್ 02 ರಂದು ನಡೆಯಲಿದೆ.

ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ಅನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.
ನೇಮಕಾತಿ ಪರೀಕ್ಷೆಗಳು ಅಕ್ಟೋಬರ್ 02 ರಂದು ಬೆಳಿಗ್ಗೆ 10.30 ರಿಂದ 12.30 ಗಂಟೆಯವರೆಗೆ ಹಾಗೂ ಮಧ್ಯಾಹ್ನ 2.30 ರಿಂದ 4.30 ರವರೆಗೆ ಎರಡು ಅವಧಿಗಳಲ್ಲಿ ನಡೆಯಲಿವೆ.
ಪರೀಕ್ಷೆಗಳು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಯಲು ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್, ಪೇಜರ್, ಜಿರಾಕ್ಸ್, ಟೈಪಿಂಗ್ ಸೇವೆಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಸಿಬ್ಬಂದಿ, ನಿಯೋಜಿತ ಶಿಕ್ಷಕರು ಹಾಗೂ ಜಾಗೃತ ದಳದವರನ್ನು ಹೊರತುಪಡಿಸಿ ಇತರರಿಗೆ ಪರವಾನಿಗೆ ಇಲ್ಲದೆ ಪರೀಕ್ಷಾ ಕೇಂದ್ರ ಪ್ರವೇಶಕ್ಕೆ ಅವಕಾಶವಿಲ್ಲ. ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತçಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಲಾಗಿದೆ.

ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ.






