• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶೀಘ್ರದಲ್ಲೇ 15,000 ಶಿಕ್ಷಕರ ನೇಮಕಾತಿ : ಸಚಿವ ಮಧು ಬಂಗಾರಪ್ಪ ಬಿಗ್‌ ಅಪ್ಡೇಟ್..!

ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗೆ ಆದ್ಯತೆ ನೀಡುವ ಭರವಸೆ ನೀಡಿದ ಸಚಿವ ಮಧು ಬಂಗಾರಪ್ಪ..

ಪ್ರತಿಧ್ವನಿ by ಪ್ರತಿಧ್ವನಿ
March 17, 2026
in Top Story, ಇದೀಗ, ಕರ್ನಾಟಕ, ರಾಜಕೀಯ
0
ಶೀಘ್ರದಲ್ಲೇ 15,000 ಶಿಕ್ಷಕರ ನೇಮಕಾತಿ : ಸಚಿವ ಮಧು ಬಂಗಾರಪ್ಪ ಬಿಗ್‌ ಅಪ್ಡೇಟ್..!
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯದಲ್ಲಿ ನೇಮಕಾತಿಗಾಗಿ ಯುವಕರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದ ವತಿಯಿಂದ ನೇಮಕಾತಿಯ ಪ್ರಕ್ರಿಯೆ ನಡೆಯುತ್ತಿಲ್ಲ ಎಂದು ಲಕ್ಷಾಂತರ ಉದ್ಯೋಗಾಕಾಂಕ್ಷಿಗಳು ಕಾದು ಕೆಂಡವಾಗಿದ್ದಾರೆ. ಹೀಗಾಗಿ ಹಂತ ಹಂತವಾಗಿ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ.

ADVERTISEMENT
Nanjunde gowda B M Principal:ಒಕ್ಕಲಿಗ ಸಂಘದ ITI ಕಾಲೇಜಿನ ಪ್ರಾಂಶುಪಾಲರನ್ನು ಕ್ಷಮೆ ಕೇಳಿದ ಪೋಷಕರು

ಕರ್ನಾಟಕ ಸರ್ಕಾರವು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಬರೋಬ್ಬರಿ 56,432 ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಇತ್ತಿಚಿಗೆ ನಡೆದ ಸಚಿವ ಸಂಪುಟ (Cabinet Meeting) ಸಭೆಯಲ್ಲಿ ಒಪ್ಪಿಗೆ ನೀಡಿದೆ. 30 ದಿನಗಳ ಒಳಗೆ ಅಧಿಸೂಚನೆ ಹೊರಡಿಸಿ, ಶೇ. 50ರಷ್ಟು ಮೀಸಲಾತಿ ನಿಯಮದಡಿ ನೇಮಕಾತಿ ಪ್ರಕ್ರಿಯೆ ಆರಂಭಿಸಲು ನಿರ್ಧರಿಸಲಾಗಿದೆ. ಈ ನಿರ್ಧಾರವು ನಿರುದ್ಯೋಗಿ ಯುವಕರಿಗೆ ದೊಡ್ಡ ಅವಕಾಶವಾಗಿದೆ. 

ಹೀಗಾಗಿ ವಿವಿಧ ಇಲಾಖೆಗಳ ನೇಮಕಾತಿಗಾಗಿ ಗ್ರೀನ್‌ ಸಿಗ್ನಲ್‌ ನೀಡಿದ್ದು, ಈ ಕುರಿತು ಶಿಕ್ಷಣ ಇಲಾಖೆಯ ನೇಮಕಾತಿಯ ವಿಚಾರದಲ್ಲಿ ಸಚಿವ ಮಧು ಬಂಗಾರಪ್ಪ ಮಹತ್ವದ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ 15,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಕೈಗೆತ್ತಿಕೊಳ್ಳಲಾಗುವುದು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಬೇಸಿಗೆಯಲ್ಲಿ ದೇಹಕ್ಕೆ ನೀರಿನ ಅವಶ್ಯಕತೆ: ಇರಲಿ ಈ ಅಪಾಯದ ಬಗ್ಗೆ ಎಚ್ಚರಿಕೆ

ವಿಧಾನಪರಿಷತ್‌ನಲ್ಲಿ ಬಿಜೆಪಿಯ ಚಿದಾನಂದಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಧು ಬಂಗಾರಪ್ಪ, ಹಲವಾರು ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಕ ಮಾಡಿಕೊಂಡಿಲ್ಲ. ಶನಿವಾರದಂದು ನಡೆಸಲಾಗುತ್ತಿದ್ದ ಸಾಮೂಹಿಕ ದೈಹಿಕ ವ್ಯಾಯಾಮಗಳನ್ನು ಇನ್ನು ಮುಂದೆ ಶಾಲೆಗಳ ಬದಲಿಗೆ, ದೈಹಿಕ ಶಿಕ್ಷಣದ ಅವಧಿಯಲ್ಲಿ ನೈತಿಕ ಶಿಕ್ಷಣವನ್ನು ನೀಡಲಾಗುವುದು ಎಂದು ಹೇಳಿದ್ದಾರೆ.

ಈ ವೇಳೆ ದೈಹಿಕ ಶಿಕ್ಷಣದ ಅವಧಿಯಲ್ಲಿ ನೈತಿಕ ಶಿಕ್ಷಣವನ್ನು (Moral Education) ಹೇಳಿಕೊಡುತ್ತಿರುವುದೇಕೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಸರ್ಕಾರವನ್ನು ಪ್ರಶ್ನಿಸಿದ್ದರು. ನೈತಿಕ ಶಿಕ್ಷಣವನ್ನು ಪ್ರತ್ಯೇಕ ಅವಧಿಯಲ್ಲಿ ಕಲಿಸಬೇಕೆಂದು ಅವರು ಸಲಹೆ ನೀಡಿದ್ದಾರೆ.  ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಮಧು ಬಂಗಾರಪ್ಪ,ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳಲ್ಲಿ 3,361 ಪಿಯು ಶಿಕ್ಷಕರ ಹುದ್ದೆಗಳು ಮತ್ತು ಪ್ರೌಢಶಾಲೆಗಳಲ್ಲಿ 1,841 ಹುದ್ದೆಗಳು ಖಾಲಿ ಇವೆ. ಮುಂಬರುವ 15,000 ಶಿಕ್ಷಕರ ನೇಮಕಾತಿಯಲ್ಲಿ ಪಿಯು ಶಿಕ್ಷಕರಿಗೆ ಆದ್ಯತೆ ನೀಡಲಾಗುವುದು ಎಂದು ಸದನಕ್ಕೆ ಭರವಸೆ ನೀಡಿದ್ದಾರೆ.

ದೈಹಿಕ ಶಿಕ್ಷಣದ ಅವಧಿಯಲ್ಲಿ ನೈತಿಕ ಶಿಕ್ಷಣವನ್ನು ಬೋಧಿಸಲಾಗುವುದು ಎಂದು ಸ್ಪಷ್ಟಪಡಿಸಿ, “ನೈತಿಕ ಶಿಕ್ಷಣಕ್ಕಾಗಿ ಪ್ರತ್ಯೇಕ ಸಮಯವನ್ನು ನಿಗದಿಪಡಿಸಲು ನಿರ್ದೇಶನಗಳನ್ನು ನೀಡಲಾಗಿದೆ ಎಂದು ಶಾಲಾ ಸಾಕ್ಷರತಾ ಮತ್ತು ಸುಧಾರಣಾ ಇಲಾಖೆ (ಶಿಕ್ಷಣ) ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

Tags: Budget Session 2026CM SiddaramaiahCouncil SessionEducation MinisterGovernment DepatmentsGovernment jobsGovernment of KarnatakaKPSCMadhu BangarappaPhysical EducationPratidhvaniTeachers Recruitement
Previous Post

ಮುಸ್ಲಿಮರಿಂದಲೇ ವಕ್ಫ್‌ ಆಸ್ತಿ ಕಬಳಿಕೆ : ಸಚಿವ ಜಮೀರ್‌ ಅಹ್ಮದ್‌ ಖಾನ್‌ ಶಾಕಿಂಗ್‌ ಹೇಳಿಕೆ

Next Post

“BJP ಸಿದ್ದಮಾದರಿಯ ಚುನಾವಣಾ ಕುತಂತ್ರಕ್ಕೆ ಹರಿಯಾಣದ ಜನತೆ ಮಣ್ಣು ಮುಕ್ಕಿಸಿದ್ದಾರೆ”

Related Posts

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು
Top Story

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

by ಪ್ರತಿಧ್ವನಿ
May 21, 2026
0

ತಮಿಳುನಾಡಿನ ರಾಜಕೀಯದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಕೇವಲ ಆರು ಗಂಟೆಗಳ ಅವಧಿಯಲ್ಲಿ ನೀಡಲಾಗಿದ್ದ ₹17 ಲಕ್ಷ ಮೌಲ್ಯದ...

Read moreDetails
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

May 20, 2026
Next Post
“BJP ಸಿದ್ದಮಾದರಿಯ ಚುನಾವಣಾ ಕುತಂತ್ರಕ್ಕೆ ಹರಿಯಾಣದ ಜನತೆ ಮಣ್ಣು ಮುಕ್ಕಿಸಿದ್ದಾರೆ”

"BJP ಸಿದ್ದಮಾದರಿಯ ಚುನಾವಣಾ ಕುತಂತ್ರಕ್ಕೆ ಹರಿಯಾಣದ ಜನತೆ ಮಣ್ಣು ಮುಕ್ಕಿಸಿದ್ದಾರೆ"

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada