ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಜೂನ್ 11ರ ವರೆಗೆ ವ್ಯಾಪಕವಾಗಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಕಲಬುರಗಿ, ಉಡುಪಿಯಲ್ಲಿ ಹೆಚ್ಚಿನ ಮಳೆಯಾಗುವ ಸಾದ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಜೂನ್ 11ರವರೆಗೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಗದಗ, ಧಾರವಾಡ, ಹಾವೇರಿ, ವಿಜಾಪುರ, ಬಾಗಲಕೋಟೆ, ಕೊಪ್ಪಳ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡುಗು ಜಿಲ್ಲೆಯ ಕೆಲವು ಕಡೆ ಭಾರಿ ಮಳೆ ಸಾಧ್ಯತೆ ಹಿನ್ನೆಲೆ ಇಂದಿನಿಂದ 11ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ (Bangaluru) ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸುಚನೆ ನೀಡಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಭರ್ಜರಿಯಾಗಿ ಮಳೆಯಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ 23 ಸೆಂ.ಮೀ, ಕಾರವಾರ 22 ಸೆಂ.ಮೀ, ಗೋಕರ್ಣ 20 ಸೆಂ. ಮೀ, ಕುಮಟಾ 20 ಸೆಂ.ಮೀ ಮಳೆಯಾಗಿದೆ. ಉತ್ತರ ಕರ್ನಾಟಕದಲ್ಲಿ 3.1 ರಿಂದ 7.6 ಕಿ.ಮೀ ಎತ್ತರದಲ್ಲಿ ಸುಳಿಗಾಳಿ ಇದ್ದು, ಜೂನ್. 11ರವರೆಗೆ ಗುಡುಗು, ಮಿಂಚಿನೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.