ಕೇಂದ್ರ ಸರ್ಕಾರದ (Central government) ಲೋಕಸಭಾ ಕ್ಷೇತ್ರಗಳ (parliament) ಮರು ವಿಂಗಡಣೆ ಕುರಿತು ಆರಂಭದಿಂದಲೂ ತೀವ್ರ ವಿರೋಧ ವ್ಯಕ್ತಪಡಿಸಿರುವ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್, (MK Stalin) ನಿರಂತರವಾಗಿ ಇದರ ವಿರುದ್ಧ ತಮ್ಮ ನಿಲುವನ್ನು ಪ್ರತಿಪಾದಿಸಿದ್ದಾರೆ.

ಈಗಾಗಲೇ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಕುರಿತು ಚೆನ್ನೈನಲ್ಲಿ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ನೇತೃತ್ವದಲ್ಲಿ ಸಭೆ ನಡೆದಿದೆ.ಎಂ.ಕೆ. ಸ್ಟಾಲಿನ್ ನೇತೃತ್ವದ ಜಂಟಿ ಕ್ರಿಯಾ ಸಮಿತಿಯು, ಸೀಮಾ ನಿರ್ಣಯ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕೋರುವ ನಿರ್ಣಯವನ್ನು ಅಂಗೀಕರಿಸಲಾಗಿದೆ.
1971ರ ಜನಗಣತಿಯ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳನ್ನ ಮರು ವಿಂಗಡಣೆ ಮಾಡುವುದನ್ನ ಇನ್ನೂ 25 ವರ್ಷಗಳ ಕಾಲ ವಿಸ್ತರಿಸುವಂತೆ ಜೆಎಸಿ ಸದಸ್ಯರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ರು.

ಈ ನಿರ್ಣಯ ದಕ್ಷಿಣ ರಾಜ್ಯಗಳ ರಾಜಕೀಯ ಹಾಗೂ ಆರ್ಥಿಕ ಭವಿಷ್ಯದ ಮೇಲೆ ಬೀರುವ ಪರಿಣಾಮ ಬೀರುವ ಬಗ್ಗೆ ಈ ಸಭೆಯಲ್ಲಿ ದಕ್ಷಿಣ ಭಾರತದ ನಾಯಕರು ಕಳವಳ ವ್ಯಕ್ತಪಡಿಸಿದ್ದಾರೆ.ಈ ಸಭೆಯಲ್ಲಿ ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್,ಕೇರಳ ಸಿಎಂ ಪಿಣರಾಯಿ ವಿಜಯನ್ ಸೇರಿದಂತೆ ಹಲವು ರಾಜ್ಯಗಳ ಪ್ರತಿನಿಧಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.