• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮಳೆ ಪೀಡಿತ ಪ್ರದೇಶಗಳಲ್ಲಿ ನನ್ನ ಭೇಟಿಗಿಂತ ಪರಿಹಾರ ಕಾರ್ಯ ಮುಖ್ಯ:ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
October 22, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು“ಕಳೆದ 48 ಗಂಟೆಗಳಿಂದ ನಮ್ಮ ಅಧಿಕಾರಿಗಳ ತಂಡ ಮಳೆ ಪೀಡಿತ ಪ್ರದೇಶಗಳಲ್ಲಿ ನಿರಂತರವಾಗಿ ಪರಿಹಾರ ಕಾರ್ಯದಲ್ಲಿ ನಿರತರಾಗಿದ್ದಾರೆ.ಈಗ ಪರಿಹಾರ ಕಾರ್ಯ ನಡೆಯುವುದು ಮುಖ್ಯವೇ ಹೊರತು, ನಾನು ಸ್ಥಳಕ್ಕೆ ಭೇಟಿ ನೀಡುವುದಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ADVERTISEMENT

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯಿಸಿದರು.

ಬೆಂಗಳೂರಿನಲ್ಲಿ ಮಳೆಯಿಂದ ಹೆಚ್ಚಿನ ಹಾನಿಯಾಗಿದ್ದು, ನೀವು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡುತ್ತಿಲ್ಲ ಎನ್ನುವ ವಿರೋಧ ಪಕ್ಷಗಳ ಆರೋಪದ ಬಗ್ಗೆ ಕೇಳಿದಾಗ, “ನಾನು ಭೇಟಿ ನೀಡುವುದಷ್ಟೇ ಮುಖ್ಯವಲ್ಲ. ಕೆಲಸಗಳು ಆಗಬೇಕು. ನಾನು ಭೇಟಿ ಮಾಡಿದರೆ ಪ್ರಚಾರ ಸಿಗುತ್ತದೆ. ನಮಗೆ ಪ್ರಚಾರ ಮುಖ್ಯವಲ್ಲ.ಇಂತಹ ಪರಿಸ್ಥಿತಿ ಎದುರಿಸುತ್ತಿರುವ ಸ್ಥಳಗಳನ್ನು ಗುರುತಿಸಿ ಶಾಶ್ವತ ಪರಿಹಾರ ನೀಡಲು ನಾವು ಸಮಿತಿ ರಚಿಸಲಾಗಿದೆ.ಆ ಸಮಿತಿ ವರದಿ ನೀಡಲಿದೆ” ಎಂದು ತಿಳಿಸಿದರು.

“ನಾನು ಕೂಡ ಸೋಮವಾರ ಸಂಜೆ ಮಳೆಯಲ್ಲಿ ಸಿಲುಕಿದ್ದೆ. ಚಳ್ಳಕೆರೆಯಿಂದ ಬರುವಾಗ ನೆಲಮಂಗಲದ ಬಳಿ ಸೇತುವೆ ಮೇಲೆ 2 ಅಡಿ ನೀರಿತ್ತು. ನಮ್ಮ ಅಧಿಕಾರಿಗಳು ದಿನದ 24 ಗಂಟೆಗಳ ಕಾಲ ಶ್ರಮಿಸುತ್ತಿದ್ದು, ಕಳೆದ 48 ಗಂಟೆಗಳಿಂದ ಅವರು ಮಳೆ ಪೀಡಿತ ಪ್ರದೇಶಗಳಲ್ಲಿ ಇದ್ದಾರೆ.ಈ ಸಮಯದಲ್ಲಿ ಅವರನ್ನು ಮುಜುಗರಕ್ಕೀಡು ಮಾಡಲು ನನಗೆ ಇಷ್ಟವಿಲ್ಲ” ಎಂದು ತಿಳಿಸಿದರು.

“ಚೌಡೇಶ್ವರಿ ನಗರದಲ್ಲಿ 150 ಎಂಎಂ ಮಳೆಯಾಗಿದೆ. ಇನ್ನು ಕೆಲವು ಕಡೆಗಳಲ್ಲಿ ವಾಡಿಕೆಗಿಂತ ಶೇ 300ರಷ್ಟು ಹೆಚ್ಚಿನ ಮಳೆಯಾಗಿದೆ. ಈ ವಿಚಾರವಾಗಿ ಅಧಿಕಾರಿಗಳು ವರದಿ ನೀಡಿದ್ದಾರೆ. ಕೆಲವು ಪ್ರದೇಶದ ಜನರಿಗೆ ಸ್ಥಳಾಂತರ ಮಾಡಲು ಹೇಳಿದ್ದೇವೆ. ಕೇಂದ್ರಿಯ ವಿದ್ಯಾಲಯ ಹಾಗೂ ಟಾಟಾನಗರದಿಂದ ಸುಮಾರು 600 ಕುಟುಂಬಗಳನ್ನು ಸ್ಥಳಾಂತರಗೊಳಿಸಲು ಹೇಳಿದ್ದೇವೆ. 5 ಎಸ್ ಡಿಆರ್ ಎಫ್ ಹಾಗೂ ಎನ್ ಡಿಆರ್ ಎಫ್ ತಂಡಗಳ ನಿಯೋಜನೆ ಮಾಡಲಾಗಿದೆ” ಎಂದು ಮಾಹಿತಿ ನೀಡಿದರು.

“ಕೆಲವು ಅಪಾರ್ಟ್ಮೆಂಟ್ ಗಳನ್ನು 8 ದಿನಗಳ ಕಾಲ ಮುಚ್ಚಲು ಸೂಚನೆ ನೀಡಲಾಗಿದೆ. 20-25 ಹೆಚ್ ಪಿ ಯಂತ್ರಗಳನ್ನು ಹಾಕಿ ಚರಂಡಿ ಸ್ವಚ್ಛಗೊಳಿಸಲಾಗುತ್ತಿದೆ. 20 ಕಡೆಗಳಲ್ಲಿ ನೀರನ್ನು ತೆಗೆಯಲಾಗುತ್ತಿದೆ. ಪ್ರಕೃತಿಯನ್ನು ತಡೆದು ನಿಲ್ಲಿಸಲು ಆಗುವುದಿಲ್ಲ. ದುಬೈನಲ್ಲಿ ಪ್ರವಾಹ, ದೆಹಲಿಯಲ್ಲಿ ಮಾಲಿನ್ಯದ ವಿಚಾರ ನೀವು ನೋಡುತ್ತಿದ್ದೀರಿ. ನಮ್ಮ ತಂಡ ಹಗಲಿರುಳು ಶ್ರಮಿಸುತ್ತಿದೆ. ನಾನು ಕೂಡ ಪರಿಹಾರ ಕಾರ್ಯಗಳ ಪರಿಶೀಲನೆ ಮಾಡಿದ್ದೇನೆ. ಪಶ್ಚಿಮ ಮತ್ತು ದಕ್ಷಿಣ ಭಾಗದಲ್ಲಿ ಹೆಚ್ಚು ಸಮಸ್ಯೆಯಾಗಿದೆ. ದಾಸರಹಳ್ಳಿಯಲ್ಲಿ ಟ್ಯಾಂಕ್ ಒಡೆದಿದೆ. ಮಹದೇವಪುರ ವಲಯದಲ್ಲಿ 5 ಬಡಾವಣೆಗಳು ಸಮಸ್ಯೆಗೆ ಸಿಲುಕಿವೆ. ಈ ಎಲ್ಲಾ ಸಮಸ್ಯೆಗಳನ್ನು ನಾವು ಬಗೆಹರಿಸುತ್ತೇವೆ” ಎಂದರು.

ಇಬ್ಬರು ಮಕ್ಕಳು ಕೆರೆಯಲ್ಲಿ ಕೊಚ್ಚಿ ಹೋಗಿರುವ ಬಗ್ಗೆ ಕೇಳಿದಾಗ, “ನಾನು ಈ ವಿಚಾರ ನೋಡಿದೆ. ಆ ತಾಯಿಯ ಗೋಳು ಕಂಡೆ.ಮಕ್ಕಳ ಶೋಧ ಕಾರ್ಯ ನಡೆಯುತ್ತಿದೆ” ಎಂದು ತಿಳಿಸಿದರು.

ಬಿಜೆಪಿ ತೊರೆದ ನಂತರ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚೆ:

ಸಿ.ಪಿ ಯೋಗೇಶ್ವರ್ ಅವರು ಕಾಂಗ್ರೆಸ್ ಗೆ ಬಂದರೆ ಸ್ವಾಗತ ಎಂದು ಸಿಎಂ ಹಾಗೂ ಮಾಜಿ ಸಂಸದ ಸುರೇಶ್ ಅವರು ಹೇಳಿರುವ ಬಗ್ಗೆ ಕೇಳಿದಾಗ, “ಈ ವಿಚಾರ ನನಗೆ ಗೊತ್ತಿಲ್ಲ.ಅವರು ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮಾಧ್ಯಮಗಳಲ್ಲಿ ಓದಿದ್ದೇನೆ. ಚನ್ನಪಟ್ಟಣದಲ್ಲಿ ಇಂದು ಸಭೆ ನಡೆಸುತ್ತಿದ್ದಾರೆ ಎಂದು ನಮ್ಮ ಮುಖಂಡರು ಕರೆ ಮಾಡಿ ತಿಳಿಸಿದರು. ಬಿಜೆಪಿಯವರು ಕೂಡ ಯೋಗೇಶ್ವರ್ ಅವರ ಜತೆ ಚರ್ಚೆ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಅವರು ಬಿಜೆಪಿ ಬಿಟ್ಟ ನಂತರ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಸಿಎಂ ಜತೆ ಚರ್ಚೆ ಮಾಡುತ್ತೇನೆ. ಈಗ ಅವರು ಬಿಜೆಪಿಯಲ್ಲೇ ಇದ್ದಾರೆ, ಬಿಜೆಪಿಯಲ್ಲಿರುವವರ ಬಗ್ಗೆ ನಾನೇಕೆ ಮಾತನಾಡಲಿ” ಎಂದು ತಿಳಿಸಿದರು.

Tags: BJPCongress PartyDCM D.K. Shivakumar.more important than my visitMP Suresh saying that CP Yogeshwar is welcomerain affected areasRelief work
Previous Post

ರಾಜಕೀಯ ಕುಟುಂಬಗಳೂ ಕುಟುಂಬ ರಾಜಕಾರಣವೂ..!!

Next Post

ನಾಯಿಯಿಂದ ತಪ್ಪಿಸಿಕೊಳ್ಳಲು 3ನೇ ಮಹಡಿಯಿಂದ ಜಿಗಿದು ಯುವಕ ಸಾವು

Related Posts

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?
Top Story

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

by ಪ್ರತಿಧ್ವನಿ
December 3, 2025
0

ಈ ಬಾರಿಯ ಬಿಗ್‌ ಬಾಸ್‌(Bigg Boss) ಕನ್ನಡದಲ್ಲಿ ಒಂದಾದ ಮೇಲೊಂದು ಮೆಗಾ ಟ್ವಿಸ್ಟ್‌ಗಳು ಇದ್ದೇ ಇದೆ. ಹಿಂದಿನ ಎಲ್ಲಾ ಸೀಸನ್‌ಗಳಿಗಿಂತ ಈ ಬಾರಿಯ ಸೀಸನ್‌ ಅತಿ ಹೆಚ್ಚು...

Read moreDetails
Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

December 3, 2025
ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

December 2, 2025
ಬೆಂಗಳೂರಲ್ಲಿ ಮತ್ತೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್

ಬೆಂಗಳೂರಲ್ಲಿ ಮತ್ತೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್

December 2, 2025
ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

December 2, 2025
Next Post

ನಾಯಿಯಿಂದ ತಪ್ಪಿಸಿಕೊಳ್ಳಲು 3ನೇ ಮಹಡಿಯಿಂದ ಜಿಗಿದು ಯುವಕ ಸಾವು

Recent News

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?
Top Story

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

by ಪ್ರತಿಧ್ವನಿ
December 3, 2025
Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!
Top Story

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

by ಪ್ರತಿಧ್ವನಿ
December 3, 2025
ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!
Top Story

ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

by ಪ್ರತಿಧ್ವನಿ
December 2, 2025
ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF
Top Story

ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF

by ಪ್ರತಿಧ್ವನಿ
December 2, 2025
ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ
Top Story

ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

by ಪ್ರತಿಧ್ವನಿ
December 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

December 3, 2025
Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!