
ಬೆಂಗಳೂರು: ಇಂದು ಚಿತ್ರದುರ್ಗ ರೇಣುಕಸ್ವಾಮಿ ಭೀಕರ ಹತ್ಯೆ ಪ್ರಕರಣದಲ್ಲಿ (Renukaswamy Murder Case) ಜೈಲುವಾಸ ಅನುಭವಿಸುತ್ತಿರುವ ಆರೋಪಿ ದರ್ಶನ್ (Actor Darshan) ಜಾಮೀನು ಅರ್ಜಿ ವಿಚಾರಣೆಯನ್ನು ನಡೆಸಿದ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ, ಅರ್ಜಿ ವಿಚಾರಣೆಯನ್ನು ಮತ್ತೊಮ್ಮೆ ಮುಂದೂಡಿದೆ.

ಈ ಹಿಂದೆ ಸೆ.30ಕ್ಕೆ ಆರೋಪಿ ದರ್ಶನ್ ಜಾಮೀನು ಅರ್ಜಿ ಮುಂದೂಡಿದ್ದ ಕೋರ್ಟ್, ಅ.04ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿತ್ತು. ಅದರ ಅನ್ವಯ ಇಂದು ಸುದೀರ್ಘ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ, ಇದೀಗ ಅರ್ಜಿ ವಿಚಾರಣೆಯನ್ನು ಮತ್ತೊಮ್ಮೆ ಮುಂದೂಡಿಕೆ ಮಾಡಿದ್ದು, ಅ.05ರ ಮಧ್ಯಾಹ್ನ 12:30ಕ್ಕೆ ವಿಚಾರಣೆ ಕರೆದಿದೆ.



