ಚಿತ್ರದುರ್ಗ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಇಬ್ಬರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗದಲ್ಲಿ ಎ6 ಜಗ್ಗ ಅಲಿಯಾಸ್ ಜಗದೀಶ್ ಹಾಗೂ ಎ7 ಅನಿ ಅಲಿಯಾಸ್ ಅನಿಲ್ ಬಂಧಿತ ಆರೋಪಿಗಳು. ಚಿತ್ರದುರ್ಗ ಡಿವೈಎಸ್ಪಿ ದಿನಕರ್ ಹಾಗೂ ಕಾಮಾಕ್ಷಿಪಾಳ್ಯ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಈಗಾಗಲೇ ದರ್ಶನ್, ಗೆಳತಿ ಪವಿತ್ರಾ (Pavithra Gowda) ಗೌಡ ಸೇರಿದಂತೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಸದ್ಯ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿದ್ದು, ವಿಚಾರಣೆ ನಡೆಯುತ್ತಿದೆ. ಪವಿತ್ರಾ ಗೌಡ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪೋಸ್ಟ್ ಮಾಡಿದ್ದರು ಎಂಬ ಕಾರಣಕ್ಕೆ ರೇಣುಕಾಸ್ವಾಮಿ ಕೊಲೆ ನಡೆದಿದೆ ಎನ್ನಲಾಗಿದೆ.