
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.
ತಂದೆ ನಿಧನರಾದ ಹಿನ್ನೆಲೆ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಎಸಿಎಂ ಕೋರ್ಟ್ ಗೆ
ಕೋರ್ಟ್ ಗೆ ಪ್ರದೋಶ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ಪರಿಗಣಿಸಿದ ನ್ಯಾಯಾಲು ನಾಳೆ ನಡೆಯಲಿರುವ
ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅನುಮತಿ ನೀಡಿದ್ದು, ಬೆಂಗಾವಲು ನೀಡುವಂತೆ ಕಾಮಾಕ್ಷಿಪಾಳ್ಯ ಪೊಲೀಸರಿಗೆ ಇ-ಮೇಲ್ ಮೂಲಕ ಸೂಚನೆ ನೀಡಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ ಮತ್ತು 17 ಆರೋಪಿಗಳನ್ನ ಕಾಮಾಕ್ಷಿ ಪಾಳ್ಯ ಪೊಲೀಸರು ಬಂಧಿಸಿದ್ದರು. ಜಾಮೀನಿನ ಮೇಲೆ ಹೊರಬಂದಿದ್ದ ಪ್ರದೋಶ್ ಜಾಮೀನು ಸುಪ್ರೀಂಕೋರ್ಟ್ ನಲ್ಲಿ ರದ್ದುಗೊಂಡಿತ್ತು. ಹೀಗಾಗಿ ಕೊಲೆ ಕೇಸ್ 14 ಆರೋಪಿಯಾಗಿರೋ ಪ್ರದೋಶ್ ಎರಡನೇ ಬಾರಿ ಬಂಧನವಾಗಿ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ನಾಳೆ ಜೈಲಿನಿಂದ ಕರೆತರಲಿರುವ ಕಾಮಾಕ್ಷಿಪಾಳ್ಯ ಪೊಲೀಸರು












