ಬೆಂಗಳೂರು : ಪ್ರಧಾನಿ ಮೋದಿ ಬೆಂಗಳೂರು ರೋಡ್ ಶೋ ಸಮಯದಲ್ಲಿ ಮತ್ತೆ ಬದಲಾವಣೆ ಮಾಡಲಾಗಿದೆ. ಹೈಕೋರ್ಟ್ನಿಂದ ರೋಡ್ಶೋ ನಡೆಸಲು ಅನುಮತಿ ಪಡೆದ ಬೆನ್ನಲ್ಲೇ ಶನಿವಾರ ಬೆಳಗ್ಗೆ 9 ರಿಂದ ಮಧ್ಯಾಹ್ನ 1:30 ಹಾಗೂ ಭಾನುವಾರ ಬೆಳಗ್ಗೆ 7 ರಿಂದ 11:30ರವರೆಗೆ ರೋಡ್ ಶೋ ನಡೆಸಲು ತೀರ್ಮಾನಿಸಲಾಗಿದೆ. ಈ ಸಂಬಂಧ ಬೆಂಗಳೂರು ನಗರ ಜಿಲ್ಲಾಧಿಕಾರಿ ತುಷಾರ್ ಗಿರಿನಾಥ್ ಅಧಿಕೃತ ಮಾಹಿತಿ ನೀಡಿದ್ದಾರೆ.

ನಾಳೆ ಪ್ರಧಾನಿ ಮೋದಿ 23 ಕಿಲೋ ಮೀಟರ್ ದೂರದವರೆಗೆ ರೋಡ್ ಶೋ ನಡೆಸಲಿದ್ದು ಭಾನುವಾರ 6.1 ಕಿಮೀ ರ್ಯಾಲಿ ನಡೆಸಲಿದ್ದಾರೆ. ಈ ಸಮಯಕ್ಕಿಂತ ಹೆಚ್ಚಿನ ಅವಧಿಯಲ್ಲಿ ರೋಡ್ ಶೋ ಮುಂದುವರಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ ಅಂತಾ ಬೆಂಗಳೂರು ನಗರ ಜಿಲ್ಲಾಧಿಕಾರಿ ತುಷಾರ್ ಗಿರಿನಾಥ್ ಹೇಳಿದ್ದಾರೆ.
ಭಾನುವಾರ ಮಧ್ಯಾಹ್ನ 1 ಗಂಟೆಗೆ ವಿದ್ಯಾರ್ಥಿಗಳು ನೀಟ್ ಪರೀಕ್ಷಾ ಕೊಠಡಿಗೆ ಹಾಜರಾಗಬೇಕಾಗಿರುವ ಹಿನ್ನೆಲೆಯಲ್ಲಿ ರ್ಯಾಲಿಯನ್ನು 11:30ಕ್ಕೆ ಮುಗಿಸುವಂತೆ ಸೂಚನೆ ನೀಡಲಾಗಿದೆ. ಮಧ್ಯಾಹ್ನ 2 ಗಂಟೆಯಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ಆರಂಭಗೊಳ್ಳಲಿದೆ .