ರಾಜ್ಯ ಸರ್ಕಾರದ ಗುತ್ತಿಗೆ ಕಾಮಗಾರಿಗಳಲ್ಲಿ (Contract works) ಮುಸ್ಲಿಂರಿಗೆ ಮೀಸಲಾತಿ (Muslim reservation) ನೀಡುವ ವಿಧೇಯಕ ತರಲು ಸಂಪುಟ (Cabinet) ಸಭೆ ಒಪ್ಪಿಗೆ ನೀಡಿದೆ. ಕಳೆದ ವಾರ ಸಿಎಂ ಸಿದ್ದರಾಮಯ್ಯ (Cm Siddaramaiah) ಬಜೆಟ್ ನಲ್ಲಿ ಘೋಷಣೆ ಮಾಡಿದ್ದಂತೆ ಈ ವಿಧೇಯಕ ತರಲು ಸಂಪುಟ ಸಭೆ ಸಮ್ಮತಿ ಸೂಚಿಸಿದೆ.

ಈ ವಿಧೇಯಕದ ಪ್ರಕಾರ ರಾಜ್ಯ ಸರ್ಕಾರದ ಗುತ್ತಿಗೆ ಕಾಮಗಾರಿಗಳಲ್ಲಿ ಒಂದು ಕೋಟಿಯವರೆಗಿನ ಮಿತಿಗೆ ಮುಸ್ಲಿಂರಿಗೆ ಮೀಸಲಾತಿ ಒದಗಿಸಲಾಗುತ್ತದೆ. ಹಿಂದುಳಿದ ವರ್ಗ, ಇತರೇ ಹಿಂದುಳಿದ ವರ್ಗಗಳಿಗೆ ಮಾತ್ರ ಇದ್ದ ಕಾಮಗಾರಿ ಮೀಸಲಾತಿಯನ್ನು ಮುಸ್ಲಿಮರಿಗೂ ಅನ್ವಯವಾಗುವಂತೆ ಈ ವಿಧೇಯಕ ಅವಕಾಶ ಕಲ್ಪಿಸುತ್ತದೆ.
ಇನ್ನು ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಈ ಹಿಂದೆ ಇದ್ದ 1 ಕೋಟಿಯವರೆಗಿನ ಮೊತ್ತವನ್ನು ವಿಸ್ತರಿಸಿ ಈಗ 2 ಕೋಟಿಯವರೆಗೆ ಮೀಸಲಾತಿಗೆ ಅವಕಾಶ ಕಲ್ಪಿಸಲಾಗಿದೆ. ಇನ್ನು ಈ ವಿಧೇಯಕವನ್ನು ಇದೇ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆಯಿದೆ.











