• Home
  • About Us
  • ಕರ್ನಾಟಕ
Wednesday, July 9, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ. 2 ಮೀಸಲಾತಿಗೆ ತೀರ್ಮಾನ: ಸಿಎಂ ಬೊಮ್ಮಾಯಿ

Any Mind by Any Mind
August 29, 2022
in ಕರ್ನಾಟಕ
0
ಬೆಲೆ ಏರಿಕೆ ಖಂಡಿಸಿ ಪ್ರತಿಭಟಿಸಲು ಕಾಂಗ್ರೆಸ್ ಗೆ ನೈತಿಕ ಹಕ್ಕಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ. 2 ರ ಮೀಸಲಾತಿ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ ಸೋಮವಾರ  ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ  ಗ್ರಾಮೀಣ ಕ್ರೀಡೋತ್ಸವ ಹಾಗೂ ಯೋಗಾಥಾನ್ ಗೆ ಚಾಲನೆ ನೀಡಿ  2020ನೇ ಸಾಲಿನ  ಏಕಲವ್ಯ, ಜೀವಮಾನ ಸಾಧನೆ , ಕರ್ನಾಟಕ ಕ್ರೀಡಾ ರತ್ನ ಹಾಗೂ 2021- 22ನೇ ಸಾಲಿನ ಕ್ರೀಡಾ ಪೋಷಕ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

ಮುಂದಿನ ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾಗವಹಿಸಲು ರಾಜ್ಯದ ಆಯ್ದ 75 ಕ್ರೀಡಾಪಟುಗಳಿಗೆ ವಿಶ್ವಮಟ್ಟದ ತರಬೇತಿ ನೀಡಲಾಗುತ್ತಿದೆ. ಇವರಲ್ಲಿ ಹಲವರು ಒಲಂಪಿಕ್ಸ್‌ ನಲ್ಲಿ ಪದಕಗಳನ್ನು ಗೆಲ್ಲಬೇಕೆಂಬುದು ಸರ್ಕಾರದ ಗುರಿ ಎಂದು ಅವರು ಹೇಳಿದರು.

 ಗ್ರಾಮೀಣ ಮಟ್ಟದಲ್ಲಿಯೂ ಕ್ರೀಡಾ ಸಾಧನೆಗಳಾಗಬೇಕು ಹಾಗೂ ಗ್ರಾಮೀಣ ಕ್ರೀಡೆಗಳನ್ನು ಸರ್ಕಾರದ ವತಿಯಿಂದ ವ್ಯವಸ್ಥಿತವಾಗಿ ನಡೆಸುವ ಉದ್ದೇಶದಿಂದ ಗ್ರಾಮೀಣ ಕ್ರೀಡಾಕೂಟವನ್ನು ಪ್ರಾರಂಭಿಸಲಾಗಿದೆ ಎಂದು ಅವರು ನುಡಿದರು.

ಕಬ್ಬಡಿ, ಕೋಕೋ, ಕಂಬಳ, ಎತ್ತಿನಗಾಡಿ ಸ್ಪರ್ಧೇ, ಹೀಗೆ ಹಲವು ಕ್ರೀಡೆಗಳು ಗ್ರಾಮೀಣ ಪ್ರದೇಶದ ಸೊಗಡನ್ನು ಸೂಸುತ್ತದೆ. ಗ್ರಾಮಪಂಚಾಯತಿ, ತಾಲ್ಲೂಕು,ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಕ್ರೀಡೆಗಳು ನಡೆಯುತ್ತವೆ. ಗ್ರಾಮಮಟ್ಟದಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗುತ್ತಿದೆ ಎಂದು ಸಿಎಂ ವಿವರಿಸಿದರು.

ಸ್ವಯಂಉದ್ಯೋಗದಿಂದ ಇತರರಿಗೆ ಉದ್ಯೋಗ:

ಯುವಜನ ಸಬಲೀಕರಣಕ್ಕಾಗಿ ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣ ಬಹಳ ಮುಖ್ಯ.  ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯನ್ನು ಆಗಸ್ಟ್ 15ಕ್ಕೆ ಚಾಲನೆ ನೀಡಲಾಗಿದೆ. ಪ್ರತಿ ಗ್ರಾಮದಲ್ಲಿ 30 ಜನರ ಯುವಜನರ ಸಂಘವನ್ನು ಗುರುತಿಸಿ, 7.5 ಲಕ್ಷದಿಂದ 10 ಲಕ್ಷದವರೆಗೆ ಯೋಜನೆಗಳನ್ನು ನೀಡಿ, ಸಂಘಕ್ಕೆ 1.5 ಲಕ್ಷದ ಅನುದಾನವನ್ನು ಸರ್ಕಾರವೇ ಭರಿಸಿ, ಉತ್ಪನ್ನಗಳ ತಯಾರಿಕೆಗೆ ತರಬೇತಿ, ತಯಾರಿಕೆ ಹಾಗೂ ಮಾರುಕಟ್ಟೆ ಜೋಡಣೆಯನ್ನು ಕಲ್ಪಿಸುವ ಯೋಜನೆಯಾಗಿದೆ. ಸ್ವಯಂಉದ್ಯೋಗ ಮಾಡಿ ಇತರರಿಗೆ ಉದ್ಯೋಗ ನೀಡುವ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯಿಂದ ಒಂದು ವರ್ಷಕ್ಕೆ ಸುಮಾರು 5 ಲಕ್ಷ ಯುವಕರಿಗೆ ಉದ್ಯೋಗ ಸೃಷ್ಟಿಸಿದಂತಾಗುತ್ತದೆ. ಇದು ವಿನೂತನವಾದ ಯೋಜನೆ. ಆರ್ಥಿಕವಾಗಿ, ಸಾಮಾಜಿಕವಾಗಿ ಯುವಕರ ಸಾಮಥ್ರ್ಯವನ್ನು ಹೆಚ್ಚಿಸುವಂತಹ ಕೆಲಸವನ್ನು ಸರ್ಕಾರ ನಿರಂತರವಾಗಿ ಮಾಡುತ್ತದೆ ಎಂದರು.

ಕ್ರೀಡಾ ಕರ್ನಾಟಕ ಮಾಡುವ ಗುರಿ:

ಕರಾವಳಿಯ ಕಂಬಳ, ಉತ್ತರ ಕರ್ನಾಟಕದ ಚಕ್ಕಡಿ ಹೊಡೆಯುವ ಸ್ಪರ್ಧೆ, ಕುಸ್ತಿ, ಸೈಕಲ್, ಮೋಟರ್ ಸೈಕಲ್, ಕಾರ್ ರ್ಯಾಲಿಗಳು, ಗಾಲ್ಫ್, ವಾಲಿಬಾಲ್ ಕ್ರೀಡೆಗಳನ್ನು ಪ್ರೋತ್ಸಾಹಿಸಲಾಗುತ್ತಿದೆ. ಕನ್ನಡದ ಯುವಕರು ಯಶಸ್ಸಿನ ಉತ್ತುಂಗಕ್ಕೆ ಏರಬೇಕು. ಸೀನಿಯರ್ ಒಲಂಪಿಕ್ಸ್ ಏರ್ಪಡಿಸಲು ರಾಜ್ಯ ಸರ್ಕಾರ 8 ಕೋಟಿ ರೂಗಳನ್ನು ನೀಡಿದೆ. ಕರ್ನಾಟಕವನ್ನು ಕ್ರೀಡಾ ಕರ್ನಾಟಕವನ್ನಾಗಿ ಮಾಡುವ ಗುರಿ ರಾಜ್ಯ ಸರ್ಕಾರಕ್ಕಿದೆ. ಕ್ರೀಡೆಯ ತರಬೇತುದಾರರಿಗೆ ಎಲ್ಲ ಸಹಕಾರವನ್ನು ನೀಡಲಾಗುವುದು ಎಂದರು.

ಭಾರತದ ಭವಿಷ್ಯ ಯುವಜನತೆಯ ಮೇಲಿದೆ :

ಕರ್ನಾಟಕದಲ್ಲಿ ನೀಡಲಾಗುವ ಏಕಲವ್ಯ ಪ್ರಶಸ್ತಿ , ಕ್ರೀಡಾರತ್ನ ಪ್ರಶಸ್ತಿ, ನಗದು ಪ್ರಶಸ್ತಿ ನೀಡಲಾಗುತ್ತಿದೆ. ಕ್ರೀಡಾಕ್ಷೇತ್ರದಲ್ಲಿನ ತಮ್ಮ ಶ್ರಮ, ಸಾಧನೆಯನ್ನು ಗುರುತಿಸಿ ರಾಜ್ಯ ಸರ್ಕಾರ ನಿಮ್ಮ ಬೆನ್ನುತಟ್ಟಿ ಪ್ರೋತ್ಸಾಹಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಭಾರತದಲ್ಲಿ ಶೇ. 46 ರಷ್ಟು ಜನಸಂಖ್ಯೆ ಯುವಜನರಿದ್ದಾರೆ. ಮುಂದಿನ 25 ವರ್ಷಗಳು ಭಾರತದ ಭವಿಷ್ಯ ಈ ಯುವಜನತೆಯ ಮೇಲಿದೆ ಎಂದು ತಿಳಿಸಿದರು.

ಯಶ ಸಾಧಿಸಲು ಧೃಡ ನಿಶ್ಚಯ ಬೇಕು

ಯುವಕರಲ್ಲಿ ಶಿಸ್ತು, ವ್ಯಕ್ತಿತ್ವದಿಂದ ಯಶಸ್ಸು ಬರುತ್ತದೆ. ಕಠಿಣ ಪರಿಶ್ರಮಗಳಿಂದ ಹೆಚ್ಚಿನ ಗುರಿಗಳನ್ನು ಸಾಧಿಸುತ್ತಿರಬೇಕು. ಗೆಲ್ಲಬೇಕೆಂದು ಆಡಬೇಕೇ ಹೊರತು ಸೋಲಬಾರದು ಎಂದು ಆಟವಾಡಬಾರದು. ಗೆಲ್ಲಬೇಕೆಂಬ ಹುರುಪಿನಿಂದ ಸಕಾರಾತ್ಮಕವಾಗಿ ಆಡಬೇಕು ಆತ್ಮವಿಶ್ವಾಸದಿಂದ ನಿಮ್ಮ ಮೇಲೆ ನಂಬಿಕೆಯಿರಿಸಿ. ಯುವಕರು ಸಾಧನೆಗಳನ್ನು ಮಾಡಿದಾಗ ಹುರಿದುಂಬಿಸಿದರೆ, ಇನ್ನಷ್ಟು ಸಾಧನೆಗಳಿಗೆ ಪ್ರೋತ್ಸಾಹಿಸಿದಂತಾಗುತ್ತದೆ ಎಂದು ಬೊಮ್ಮಾಯಿ ಹೇಳಿದರು.

ಜಗತ್ತಿನ ಅತಿ ಎತ್ತರದ ಶಿಖರ ಮೌಂಟ್ ಎವರೆಸ್ಟ್, ಹಿಮಾಲಯದ ತಪ್ಪಲಿನಲ್ಲಿ ಕುರಿ ಕಾಯುವವರ ಜನಾಂಗದಲ್ಲಿ ಕುರಿ ಕಾಯುತ್ತಿದ್ದ  ಸಣ್ಣ ಹುಡುಗ ತೇನ್ ಸಿಂಗ್, ತನ್ನ 42ನೇ ವಯಸ್ಸಿನಲ್ಲಿ ಮೌಂಟ್ ಎವರೆಸ್ಟ್ ನ್ನು ಹತ್ತಿ ಭಾರತದ ಧ್ವಜವನ್ನು ನೆಟ್ಟ ಕೀರ್ತಿ ಅವರದು. ಅತಿ ಚಿಕ್ಕ ವಯಸ್ಸಿನಲ್ಲಿ ಅವರು ಮಾಡಿದ ಸಂಕಲ್ಪವನ್ನು ಯಶಸ್ವಿಯಾಗಿ ಸಾಕಾರಗೊಳಿಸಿದ್ದರು.  ಕ್ರೀಡಾ ಕ್ಷೇತ್ರದಲ್ಲಿ ಯಶ ಸಾಧಿಸಲು ಮೊದಲು ಧೃಡ ನಿಶ್ಚಯ, ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಮುಖ್ಯಮಂತ್ರಿಗಳು ಯುವಕರಿಗೆ ಕಿವಿಮಾತು ಹೇಳಿದರು.

Previous Post

ಕೇರಳದಲ್ಲಿ ಭೂಕುಸಿತಕ್ಕೆ ಒಂದೇ ಕುಟುಂಬದ 5 ಮಂದಿ ಬಲಿ

Next Post

ಮುರುಘಾ ಶ್ರೀಗಳ ಪ್ರಕರಣ | ನದಿ ಮೂಲ, ಋಷಿ ಮೂಲ ಹುಡುಕಬಾರದು : ಸಿಟಿ ರವಿ

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
ಮುರುಘಾ ಶ್ರೀಗಳ ಪ್ರಕರಣ | ನದಿ ಮೂಲ, ಋಷಿ ಮೂಲ ಹುಡುಕಬಾರದು : ಸಿಟಿ ರವಿ

ಮುರುಘಾ ಶ್ರೀಗಳ ಪ್ರಕರಣ | ನದಿ ಮೂಲ, ಋಷಿ ಮೂಲ ಹುಡುಕಬಾರದು : ಸಿಟಿ ರವಿ

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada