• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, September 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

 “ಮೀಸಲಾತಿ ಭಿಕ್ಷೆಯಲ್ಲ, ಶೋಷಿತರ ಹಕ್ಕು: ಸಿದ್ದರಾಮಯ್ಯ”

ಪ್ರತಿಧ್ವನಿ by ಪ್ರತಿಧ್ವನಿ
August 8, 2026
in ಕರ್ನಾಟಕ
0
 “ಮೀಸಲಾತಿ ಭಿಕ್ಷೆಯಲ್ಲ, ಶೋಷಿತರ ಹಕ್ಕು: ಸಿದ್ದರಾಮಯ್ಯ”
Share on WhatsAppShare on FacebookShare on Telegram

ಬೆಂಗಳೂರು, ಆಗಸ್ಟ್ 7: ಸಮಾಜದಲ್ಲಿ ಅಸಮಾನತೆ ಹಾಗೂ ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ. ಪ್ರತಿಯೊಬ್ಬರಿಗೂ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ನ್ಯಾಯ ದೊರೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.ಲೋಹಿಯಾ ಸಮತಾ ವಿದ್ಯಾಲಯ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಆಶ್ರಯದಲ್ಲಿ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಾಮಾಜಿಕ ನ್ಯಾಯ ದಿನಾಚರಣೆ ಮತ್ತು ಮಂಡಲ್ ವರದಿ ಜಾರಿಯ 36ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ADVERTISEMENT

ಸಾಮಾಜಿಕ ನ್ಯಾಯ ಹಾಗೂ ಮೀಸಲಾತಿಯ ಇತಿಹಾಸವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು.ಅಸಮಾನತೆ ಮುಂದುವರಿಯುತ್ತಿರುವವರೆಗೆ ಮೀಸಲಾತಿಯ ಅಗತ್ಯವೂ ಇರುತ್ತದೆ. “ಮೀಸಲಾತಿ ಭಿಕ್ಷೆಯಲ್ಲ, ಅದು ಶೋಷಿತರ ಹಕ್ಕು” ಎಂಬ ಬಾಬಾಸಾಹೇಬ್ ಅಂಬೇಡ್ಕರ್ ಅವರ ಆಶಯವನ್ನು ಅರ್ಥಮಾಡಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ. ಸಾವಿರಾರು ವರ್ಷಗಳ ಕಾಲ ಶೂದ್ರರು ಶಿಕ್ಷಣದಿಂದ ವಂಚಿತರಾಗಿದ್ದರು. ಇಂತಹ ಸಾಮಾಜಿಕ ಹಿನ್ನೆಲೆಯನ್ನು ಅರ್ಥಮಾಡಿಕೊಳ್ಳದೆ ಸಮಾನತೆಯ ಸಮಾಜ ನಿರ್ಮಿಸಲು ಸಾಧ್ಯವಿಲ್ಲ. ಇತಿಹಾಸವನ್ನು ಅರಿಯದವರು ಭವಿಷ್ಯವನ್ನು ನಿರ್ಮಿಸಲು ಸಾಧ್ಯವಿಲ್ಲ ಎಂಬ ಅಂಬೇಡ್ಕರ್ ಅವರ ಮಾತನ್ನು ಸಿದ್ದರಾಮಯ್ಯ ಉಲ್ಲೇಖಿಸಿದರು.

ಮೀಸಲಾತಿ ಸಾಮಾಜಿಕ ನ್ಯಾಯದ ಒಂದು ಭಾಗ ಮಾತ್ರ. ಎಲ್ಲರಿಗೂ ಸಮಾನ ಅವಕಾಶಗಳು ದೊರೆಯುವಂತಾದಾಗ ಮಾತ್ರ ನಿಜವಾದ ಸಮಾನತೆ ಸಾಧ್ಯ. ಅಸಮಾನತೆ ಹಾಗೂ ಜಾತಿ ವ್ಯವಸ್ಥೆ ಮುಂದುವರಿದಿರುವವರೆಗೆ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟವೂ ಮುಂದುವರಿಯಬೇಕು ಎಂದು ಅವರು ಹೇಳಿದರು.ಮೀಸಲಾತಿ ಶೇ.50ರ ಮಿತಿಯಲ್ಲಿರಬೇಕು ಎಂಬ ವಿಚಾರದ ಬಗ್ಗೆಯೂ ಸಿದ್ದರಾಮಯ್ಯ ಮಾತನಾಡಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ಶೇ.56ಕ್ಕೆ ಹೆಚ್ಚಿಸುವ ಪ್ರಯತ್ನಕ್ಕೆ ತಡೆ ಎದುರಾಗಿದೆ. ಎಸ್‌ಸಿ, ಎಸ್‌ಟಿಗಳಿಗೆ ಈ ಪರಿಸ್ಥಿತಿ ಇರುವಾಗ ಹಿಂದುಳಿದ ವರ್ಗಗಳ ಸ್ಥಿತಿಯೇನು ಎಂದು ಪ್ರಶ್ನಿಸಿದ ಅವರು, ನ್ಯಾಯ ಪಡೆಯಲು ಸಂಘಟಿತರಾಗಿ ಹೋರಾಟ ಮಾಡುವುದು ಅಗತ್ಯ ಎಂದರು.

“ಮೀಸಲಾತಿ ನಮ್ಮ ಜನ್ಮಸಿದ್ಧ ಹಾಗೂ ಸಂವಿಧಾನಬದ್ಧ ಹಕ್ಕು. ಅದನ್ನು ಪಡೆದುಕೊಳ್ಳಲು ಸಂಘಟಿತರಾಗಿ ಹೋರಾಡಬೇಕು” ಎಂದು ಕರೆ ನೀಡಿದರು.ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಕುರಿತು ಕಾಂತರಾಜು ವರದಿ ಹಾಗೂ ಹಿಂದುಳಿದ ವರ್ಗಗಳ ಆಯೋಗದ ವರದಿಗಳ ಬಗ್ಗೆಯೂ ಸಿದ್ದರಾಮಯ್ಯ ಪ್ರಸ್ತಾಪಿಸಿದರು. ತಾವು ಮುಖ್ಯಮಂತ್ರಿಯಾಗಿದ್ದಾಗ ವರದಿಯನ್ನು ಸ್ವೀಕರಿಸಿದ್ದು, ಅದರ ಜಾರಿಗೆ ಹೋರಾಟ ನಡೆಸುವಂತೆ ಕರೆ ನೀಡಿದ್ದಾಗಿ ಹೇಳಿದರು.

 

ತಮ್ಮ ಸರ್ಕಾರ ಜಾರಿಗೆ ತಂದ ಅನ್ನಭಾಗ್ಯ ಹಾಗೂ ಗ್ಯಾರಂಟಿ ಯೋಜನೆಗಳು ಬಡವರು ಸೇರಿದಂತೆ ಎಲ್ಲ ವರ್ಗಗಳಿಗೂ ತಲುಪುವಂತೆ ರೂಪಿಸಲಾಗಿತ್ತು. ಶಕ್ತಿ ಯೋಜನೆಯ ಮೂಲಕ ಮಹಿಳೆಯರು ಸ್ವತಂತ್ರವಾಗಿ ಸಾರ್ವಜನಿಕ ಸಾರಿಗೆಯಲ್ಲಿ ಸಂಚರಿಸುತ್ತಿರುವುದನ್ನು ಕಂಡು ಸಂತೋಷವಾಗುತ್ತದೆ ಎಂದರು. 2013ರಲ್ಲಿ ತಮ್ಮ ಸರ್ಕಾರ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆ ಜಾರಿಗೆ ತಂದಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕರ ಅಭಿವೃದ್ಧಿಗೆ ಪ್ರತಿವರ್ಷ ದೊಡ್ಡ ಪ್ರಮಾಣದಲ್ಲಿ ಅನುದಾನ ಮೀಸಲಿಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.ಸಾಮಾಜಿಕ ನ್ಯಾಯ ಹಾಗೂ ಸಂವಿಧಾನದ ಪರವಾಗಿರುವ ಪಕ್ಷಗಳಿಗೆ ಜನರು ಬೆಂಬಲ ನೀಡಬೇಕು. ಶೋಷಿತ ಹಾಗೂ ಹಿಂದುಳಿದ ವರ್ಗಗಳು ಸಂಘಟಿತರಾಗಿ ತಮ್ಮ ಹಕ್ಕುಗಳ ಕುರಿತು ಅರಿವು ಬೆಳೆಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

Tags: babasaheb ambedkarbackward classesbengaluru newscaste systemCongress Newsconstitution of indiaConstitutional RightsDalit Rightsdr br ambedkarEconomic EqualityKarnataka Congresskarnataka newsKarnataka Politicskarnataka politics newsMandal CommissionMandal ReportOBC ReservationPolitical Equalitypolitical newsReservationReservation Policysc reservationSCSPsiddaramaiahSocial Equalitysocial JusticeSocial Justice DaySocial Justice Movementst reservationTSP
Previous Post

ಎಸ್‌ಐಆರ್‌  ಪ್ರಕ್ರಿಯೆ ಪ್ರಜಾಪ್ರಭುತ್ವ ಮತ್ತು ಸಮಾಜದ ಮೇಲೆ ಪರಿಣಾಮ ಭಾಗ 2

Next Post

ಬೆಳೆ ಹಾನಿಗೆ ಪರಿಹಾರ: ಸರ್ಕಾರಕ್ಕೆ ವರದಿ ಸಲ್ಲಿಸಲು ಕ್ರಮ – ಸಚಿವ ಸಂತೋಷ್ ಲಾಡ್

Related Posts

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ : ಸಮಾಜಘಾತುಕ ಶಕ್ತಿಗಳ ಬಳಕೆ ; ಗುಡುಗಿದ ಸಿಎಂ ಡಿಕೆಶಿ..
Top Story

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ : ಸಮಾಜಘಾತುಕ ಶಕ್ತಿಗಳ ಬಳಕೆ ; ಗುಡುಗಿದ ಸಿಎಂ ಡಿಕೆಶಿ..

by ಪ್ರತಿಧ್ವನಿ
September 13, 2026
0

ಶಾಂತಿಯುತ ಗಣೇಶ ಹಬ್ಬ ಆಚರಣೆ ಖಾತರಿಗೆ ಪೊಲೀಸರಿಗೆ ಸೂಚನೆ.. ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ.. ಬೆಂಗಳೂರು :  ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು,...

Read moreDetails
ನಮ್ಮ ಕಥೆ ಏನು SIR ? ಹೊರಗುಳಿಯುವವರ ಪ್ರಶ್ನೆ

ನಮ್ಮ ಕಥೆ ಏನು SIR ? ಹೊರಗುಳಿಯುವವರ ಪ್ರಶ್ನೆ

September 13, 2026
ಪಂಚಾಯಿತಿಯಿಂದ ಸಂಸತ್ ವರೆಗೆ ಹೊಸ ನಾಯಕತ್ವ ಅಗತ್ಯ : ಸಿಎಂ ಡಿ ಕೆ ಶಿವಕುಮಾರ್..

ಪಂಚಾಯಿತಿಯಿಂದ ಸಂಸತ್ ವರೆಗೆ ಹೊಸ ನಾಯಕತ್ವ ಅಗತ್ಯ : ಸಿಎಂ ಡಿ ಕೆ ಶಿವಕುಮಾರ್..

September 11, 2026
ಬಳ್ಳಾರಿ ಚಲೋ : ವಿಜಯೇಂದ್ರ ನಾಯಕತ್ವಕ್ಕೆ ಅಗ್ನಿಪರೀಕ್ಷೆ!

ಬಳ್ಳಾರಿ ಚಲೋ : ವಿಜಯೇಂದ್ರ ನಾಯಕತ್ವಕ್ಕೆ ಅಗ್ನಿಪರೀಕ್ಷೆ!

September 11, 2026
ಕೆಐಎಡಿಬಿ ಕರ್ಮಕಾಂಡದಲ್ಲಿ ಅಧಿಕಾರಿಗಳ ಸರಮಾಲೆ!

ಕೆಐಎಡಿಬಿ ಕರ್ಮಕಾಂಡದಲ್ಲಿ ಅಧಿಕಾರಿಗಳ ಸರಮಾಲೆ!

September 10, 2026
Next Post
ಬೆಳೆ ಹಾನಿಗೆ ಪರಿಹಾರ: ಸರ್ಕಾರಕ್ಕೆ ವರದಿ ಸಲ್ಲಿಸಲು ಕ್ರಮ – ಸಚಿವ ಸಂತೋಷ್ ಲಾಡ್

ಬೆಳೆ ಹಾನಿಗೆ ಪರಿಹಾರ: ಸರ್ಕಾರಕ್ಕೆ ವರದಿ ಸಲ್ಲಿಸಲು ಕ್ರಮ – ಸಚಿವ ಸಂತೋಷ್ ಲಾಡ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada