ಶಿವಮೊಗ್ಗ : ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಸಕ್ರಿಯ ರಾಜಕಾರಣಕ್ಕೆ ಗುಡ್ ಬೈ ಹೇಳಿದ ಬೆನ್ನಲ್ಲೇ ಶಿವಮೊಗ್ಗ ಜಿಲ್ಲಾ ರಾಜಕೀಯದಲ್ಲಿ ದೊಡ್ಡ ಮಟ್ಟದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿದೆ. ಈಶ್ವರಪ್ಪ ಚುನಾವಣೆಯಿಂದ ಹಿಂದೆ ಸರಿಯುತ್ತಿದ್ದಂತೆಯೇ ಶಿವಮೊಗ್ಗದಲ್ಲಿ ಸಾಮೂಹಿಕ ರಾಜೀನಾಮೆ ಪರ್ವ ಶುರುವಾಗಿದೆ.

ಈವರೆಗೆ ಮೇಯರ್, ಉಪ ಮೇಯರ್ ಸೇರಿದಂತೆ 19 ಸದಸ್ಯರು ವಿವಿಧ ಜವಾಬ್ದಾರಿಗಳಿಗೆ ರಾಜೀನಾಮೆ ನೀಡುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ರಾಜೀನಾಮೆ ನೀಡಿರುವ ಸದಸ್ಯರು ಬೆಂಗಳೂರಿಗೆ ತೆರಳಿ ಯಡಿಯೂರಪ್ಪ ಬಳಿಕ ಈ ಸಂಬಂಧ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ಇದು ಮಾತ್ರವಲ್ಲದೇ ಶಿವಮೊಗ್ಗ ಬಿಜೆಪಿ ಜಿಲ್ಲಾ ಕಚೇರಿ ಆವರಣದಲ್ಲಿ ಪಕ್ಷದ ಕಾರ್ಯಕರ್ತರಿಂದ ಧರಣಿ ಮುಂದುವರಿದಿದ್ದು ಕಾಂತೇಶ್ಗೆ ಈ ಬಾರಿ ಪಕ್ಷದಿಂದ ಟಿಕೆಟ್ ಸಿಗಬೇಕೆಂದು ಒತ್ತಾಯಿಸಿದ್ದಾರೆ.