• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Serial

ಬಿಡಿಎಯಿಂದ ಯೋಜನಾ ಪ್ರಾಧಿಕಾರದ ಜವಾಬ್ದಾರಿ ಜಿಬಿಎಗೆ ಹಸ್ತಾಂತರ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
October 10, 2025
in Serial, ಕರ್ನಾಟಕ, ರಾಜಕೀಯ
0
ಬಿಡಿಎಯಿಂದ ಯೋಜನಾ ಪ್ರಾಧಿಕಾರದ ಜವಾಬ್ದಾರಿ ಜಿಬಿಎಗೆ ಹಸ್ತಾಂತರ: ಡಿಸಿಎಂ ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

ಜಿಬಿಎ ಜಾರಿಗೆ ಶ್ರಮಿಸಿದವರಿಗೆ ಅಭಿನಂದಿಸಲು ನಿರ್ಣಯ

ADVERTISEMENT

ಪಾಲಿಕೆಗಳ ನೂತನ ಕಟ್ಟಡ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ, ಎಲ್ಲಾ ಕಟ್ಟಡ ವಿನ್ಯಾಸ ಒಂದೇ ರೀತಿ ಇರಲಿದೆ

ಪಾಲಿಕೆ ಆಯುಕ್ತರು, ಸ್ಥಾಯಿ ಸಮಿತಿ ಹಾಗೂ ಮೇಯರ್ ಗಳ ವೆಚ್ಚದ ಮಿತಿ ಏರಿಕೆ

ಜಿಬಿಎ ವಿರೋಧಿಸುವವರು ಪಾಲಿಕೆ ಚುನಾವಣೆಗಳನ್ನು ಬಹಿಷ್ಕರಿಸಲಿ: ಡಿಸಿಎಂ ಸವಾಲು

ಬೆಂಗಳೂರು, ಅ.10

ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ನಗರದ ಯೋಜನಾ ಪ್ರಾಧಿಕಾರದ ಜವಾಬ್ದಾರಿ, ಟಿಡಿಆರ್ ನೀಡುವ ಅಧಿಕಾರವನ್ನು ನೀಡಲಾಗಿದೆ. ಬಿಡಿಎಯಿಂದ ಈ ಅಧಿಕಾರವನ್ನು ಜಿಬಿಎಗೆ ಹಸ್ತಾಂತರಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಜಿಬಿಎ ಸಭಾಂಗಣದಲ್ಲಿ ಶುಕ್ರವಾರ ನಡೆದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸಮಿತಿಯ ಮೊದಲ ಸಭೆಯಲ್ಲಿ ಹಾಗೂ ಸಭೆಗೂ ಮುನ್ನ ಹಾಗೂ ಸಭೆ ನಂತರ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.

ಜಿಬಿಎ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ನಡೆದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೊದಲ ಸಭೆಯಲ್ಲಿ ಸಚಿವರಾದ ರಾಮಲಿಂಗಾ ರೆಡ್ಡಿ, ಕೆ.ಜೆ. ಜಾರ್ಜ್, ಜಮೀರ್ ಅಹ್ಮದ್ ಖಾನ್, ಬಿಡಿಎ ಅಧ್ಯಕ್ಷರಾದ ಎನ್.ಎ. ಹ್ಯಾರೀಸ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕೆ. ಗೋವಿಂದರಾಜು, ಶಾಸಕರಾದ ಎಂ. ಕೃಷ್ಣಪ್ಪ, ಎ.ಸಿ. ಶ್ರೀನಿವಾಸ್, ರಿಜ್ವಾನ್ ಅರ್ಷದ್, ಬಿ.ಶಿವಣ್ಣ, ಪರಿಷತ್ ಸದಸ್ಯರಾದ ಯತೀಂದ್ರ ಸಿದ್ದರಾಮಯ್ಯ, ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ತುಷಾರ್ ಗಿರಿನಾಥ್, ನೂತನ ಐದು ಪಾಲಿಕೆಗಳ ಆಯುಕ್ತರಾದ ರಾಜೇಂದ್ರ ಚೋಳನ್ (ಕೇಂದ್ರ), ರಮೇಶ್ ಜಿ.ಎಸ್ (ಪೂರ್ವ), ರಮೇಶ್ ಕೆ.ಎನ್ (ದಕ್ಷಿಣ), ಪೊಮ್ಮಳ ಸುನೀಲ್ ಕುಮಾರ್ (ಉತ್ತರ), ಡಾ.ಕೆ.ವಿ ರಾಜೇಂದ್ರ (ಪಶ್ಚಿಮ) ಅವರು ಉಪಸ್ಥಿತರಿದ್ದರು.

“ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಜಿಬಿಎ ಸಮಿತಿಯ ಮೊದಲ ಸಭೆ ನಡೆದಿದ್ದು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಮೊದಲಿಗೆ ಜಿಬಿಎ ಜಾರಿಗೆ ತರುವಲ್ಲಿ ಶ್ರಮಿಸಿದ ಬಿ.ಎಸ್ ಪಾಟೀಲ್, ರವಿಚಂದ್ರನ್, ಸಿದ್ದಯ್ಯ ಅವರನ್ನೊಳಗೊಂಡ ಸಮಿತಿಗೆ ಅಭಿನಂದನೆ ಸಲ್ಲಿಸಲು ತೀರ್ಮಾನಿಸಲಾಗಿದೆ. ಅಧಿಕಾರಿಗಳಾದ ತುಷಾರ್ ಗಿರಿನಾಥ್ ಹಾಗೂ ಮಹೇಶ್ವರ್ ರಾವ್ ಅವರ ತಂಡದ ಪರಿಶ್ರಮಕ್ಕೆ ಅಭಿನಂದನೆ ಸಲ್ಲಿಸುವುದು ಹಾಗೂ ವಿರೋಧ ಪಕ್ಷಗಳ ಸಲಹೆ ಮೇರೆಗೆ ಜಂಟಿ ಸದನ ಸಮಿತಿ ಮಾಡಿದೆವು. ರಿಜ್ವಾನ್ ಅರ್ಷದ್ ಅವರ ನೇತೃತ್ವದ ಸಮಿತಿ ಜನರು, ಜನಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸಲು ತೀರ್ಮಾನಿಸಲಾಗಿದೆ. ಇನ್ನು ವಿಧಾನಸಭೆ ಹಾಗೂ ಪರಿಷತ್ ಸದಸ್ಯರು ಇದಕ್ಕೆ ಸಹಕಾರ ನೀಡಿದ್ದು, ಎಲ್ಲಾ ಪಕ್ಷದ ಶಾಸಕರಿಗೆ ಅಭಿನಂದಿಸುವ ನಿರ್ಣಯ ಕೈಗೊಳ್ಳಲಾಗಿದೆ” ಎಂದು ತಿಳಿಸಿದರು.

Brand Bengaluru : ಮಹಾಲಕ್ಷ್ಮಿ  ಲೇಔಟ್ ಜನರ ಗೋಳು ಕೇಳೋರ್ಯಾರು ಸ್ವಾಮಿ..! #pratidhvani #mahalakshmilayout

“ಉಳಿದಂತೆ ಐದು ಪಾಲಿಕೆಗಳ ಕಟ್ಟಡ ನಿರ್ಮಾಣಕ್ಕೆ ಜಾಗಗಳನ್ನು ಗುರುತಿಸಲಾಗಿದೆ. ಬಿಬಿಎಂಪಿ ಮುಖ್ಯಕಚೇರಿಯಾಗಿದ್ದ ಕಟ್ಟಡವು ಜಿಬಿಎ ಕಚೇರಿಯಾಗಿರುತ್ತದೆ. ಬೆಂಗಳೂರು ಕೇಂದ್ರ ಸೇರಿದಂತೆ ನೂತನ ಕಟ್ಟಡ ನಿರ್ಮಾಣ ಆಗುವವರೆಗೂ ಬೇರೆ ಪಾಲಿಕಾಗಳ ಸಭೆಗೆ ಇದೇ ಕಟ್ಟಡದಲ್ಲಿ ಅವಕಾಶ ಮಾಡಿಕೊಡಲಾಗುವುದು. ಇನ್ನು ಎಲ್ಲಾ ಐದು ಪಾಲಿಕೆಗಳ ಕಟ್ಟಡ ವಿನ್ಯಾಸ ಒಂದೇ ರೀತಿ ಇರಲಿದೆ” ಎಂದು ತಿಳಿಸಿದರು.

“ಇಂದು ಪಾಲಿಕೆ ಸಮಿತಿಯ ವೆಚ್ಚದ ಹಣಕಾಸಿನ ಮಿತಿ ಹೆಚ್ಚಿಸಲಾಗಿದೆ. ಪಾಲಿಕೆ ಆಯುಕ್ತರುಗಳ ವೆಚ್ಚದ ಮಿತಿಯನ್ನು 1 ಕೋಟಿ ರೂಪಾಯಿಯಿಂದ 3 ಕೋಟಿ ರೂ. ಏರಿಸಲಾಗಿದೆ. ಆಮೂಲಕ ಐದು ಪಾಲಿಕೆಗಳ ಆಯುಕ್ತರಿಗೆ 15 ಕೋಟಿ ರೂ. ನೀಡಲಾಗುವುದು. ಸ್ಥಾಯಿ ಸಮಿತಿ ವೆಚ್ಚದ ಮಿತಿಯನ್ನು 3 ಕೋಟಿ ರೂಪಾಯಿಯಿಂದ 5 ಕೋಟಿ ರೂಪಾಯಿಗೆ ಏರಿಕೆ ಮಾಡಲಾಗಿದೆ. ಐದು ಪಾಲಿಕೆಗಳ ಸ್ಥಾಯಿ ಸಮಿತಿಗಾಗಿ 25 ಕೋಟಿ ನೀಡಲಾಗುವುದು. ಇನ್ನು ಪಾಲಿಕೆ ಮೇಯರ್ ಅವರ ವೆಚ್ಚದ ಮಿತಿಯನ್ನು 5 ಕೋಟಿಯಿಂದ 10 ಕೋಟಿಗೆ ಏರಿಸಲಾಗಿದ್ದು, ಐದು ಪಾಲಿಕೆಗಳಿಂದ 50 ಕೋಟಿ ರೂ. ಆಗಲಿದೆ. ಇದೊಂದು ಐತಿಹಾಸಿಕ ತೀರ್ಮಾನ” ಎಂದು ತಿಳಿಸಿದರು.

ಬೆಂಗಳೂರಿಗೆ ಹೊಸ ರೂಪ ನೀಡಲು ಜಿಬಿಎ:

“ಬೆಂಗಳೂರಿಗೆ ಹೊಸ ರೂಪ ನೀಡಲು ನಮ್ಮ ಸರ್ಕಾರ ವಿರೋಧ ಪಕ್ಷ ಮತ್ತು ಆಡಳಿತ ಪಕ್ಷದ ಶಾಸಕರು ಹಾಗೂ ಜನರ ಅಭಿಪ್ರಾಯ ಸಂಗ್ರಹಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾಯ್ದೆಯನ್ನು ರೂಪಿಸಿ ವಿಧಾನ ಸಭೆ ಹಾಗೂ ವಿಧಾನ ಪರಿಷತ್ ನಲ್ಲಿ ಅನುಮೋದನೆ ಪಡೆಯಿತು. ಏ.23ರಂದು ರಾಜ್ಯಪಾಲರು ಜಿಬಿಎ ಕಾಯ್ದೆಗೆ ಒಪ್ಪಿಗೆ ನೀಡಿದ್ದು, ಸರ್ಕಾರ ಹಾಗೂ ಬೆಂಗಳೂರಿನ ನಾಗರೀಕರ ಪರವಾಗಿ ಘನವೆತ್ತ ರಾಜ್ಯಪಾಲರಿಗೆ ಧನ್ಯವಾದ ತಿಳಿಸುತ್ತೇನೆ. ಮೇ 15ರಂದು ಸರ್ಕಾರ ಜಿಬಿಎ ಕಾಯ್ದೆ ಜಾರಿಗೆ ತಂದು, ಜು.25ರಂದು ಜಿಬಿಎ ಅಡಿಯಲ್ಲಿ ಬೆಂಗಳೂರಿನಲ್ಲಿ ಐದು ಪಾಲಿಕೆ ರಚಿಸಲು ಅಧಿಸೂಚನೆ ಹೊರಡಿಸಲಾಯಿತು” ಎಂದು ಹೇಳಿದರು.

“ಸೆ.2ರಂದು ಈ ಪಾಲಿಕೆಗಳ ರಚನೆ ಆದೇಶ ಹೊರಡಿಸಲಾಗಿದ್ದು, ನಂತರ ಐದು ಪಾಲಿಕೆಗಳಿಗೆ ಆಯುಕ್ತರನ್ನು ನೇಮಿಸಲಾಗಿದೆ. ಬೆಂಗಳೂರು ಕೇಂದ್ರ ಪಾಲಿಕೆಯಲ್ಲಿ 50, ಬೆಂಗಳೂರು ದಕ್ಷಿಣಕ್ಕೆ 72, ಬೆಂಗಳೂರು ಪೂರ್ವಕ್ಕೆ 63, ಬೆಂಗಳೂರು ಪಶ್ಚಿಮದಲ್ಲಿ 111, ಬೆಂಗಳೂರು ಉತ್ತರದಲ್ಲಿ 72 ವಾರ್ಡ್ ಸೇರಿ ಒಟ್ಟು 368 ವಾರ್ಡ್ ಗಳನ್ನು ರಚಿಸಲಾಗಿದೆ. ಈ ಹಿಂದೆ 198 ವಾರ್ಡ್ ಇದ್ದವು, ಈಗ 368 ವಾರ್ಡ್ ಆಗಿವೆ. ಈ ವಾರ್ಡ್ ವಿಂಗಡಣೆ ಬಗ್ಗೆ ಸಾರ್ವಜನಿಕರ ಆಕ್ಷೇಪಣೆಗೆ ಅವಕಾಶ ಕಲ್ಪಿಸಲಾಗಿದೆ” ಎಂದು ತಿಳಿಸಿದರು.

“74ನೇ ತಿದ್ದುಪಡಿ ಉಲ್ಲಂಘನೆ ಆಗದಂತೆ ನಾವು ಈ ಪಾಲಿಕೆಗಳನ್ನು ರಚಿಸಿದ್ದೇವೆ. ಬೆಂಗಳೂರಿನಲ್ಲಿ ಉತ್ತಮ ಆಡಳಿತ ನೀಡಿ, ಸರ್ಕಾರವನ್ನು ಜನರ ಬಳಿಗೆ ತೆಗೆದು ಕೊಂಡುಹೋಗಬೇಕು. ಬೆಂಗಳೂರು ರಾಜ್ಯದ ಹೃದಯ ಭಾಗ. ಇಲ್ಲಿ 1.40 ಕೋಟಿ ಜನಸಂಖ್ಯೆ ಇದೆ. ಸಂಚಾರ ದಟ್ಟಣೆ ಸೇರಿದಂತೆ ಅನೇಕ ಸಮಸ್ಯೆ ಬಗೆಹರಿಸಲು ಈ ಜಿಬಿಎ ರಚಿಸಲಾಗಿದೆ ಮಾಡಲಾಗಿದೆ. ಸರ್ಕಾರದ ಸಹಕಾರ ಇಲ್ಲದೆ ಯಾವುದೇ ಪಾಲಿಕೆ ಯಶಸ್ವಿಯಾಗಿ ಆಡಳಿತ ಮಾಡಲು ಸಾಧ್ಯವಿಲ್ಲ. ಹೀಗಾಗಿ ಈ ತೀರ್ಮಾನ ಮಾಡಿದ್ದೇವೆ. ಆಮೂಲಕ ಬೆಂಗಳೂರು ಹೊಸ ಇತಿಹಾಸ ಪುಟಕ್ಕೆ ಸೇರಿದೆ” ಎಂದರು.

ಪಾಲಿಕೆಗಳಿಗೆ ಸರ್ಕಾರದ ಶ್ರೀರಕ್ಷೆಗಾಗಿ ಜಿಬಿಎ ಸಮಿತಿದೆ ಸಿಎಂ ನೇತೃತ್ವ:

“ಪಾಲಿಕೆ ಆಡಳಿತ ವ್ಯವಸ್ಥೆಯಲ್ಲಿ ಯಾವುದೇ ಪಕ್ಷ ಗೆದ್ದರು ಸರ್ಕಾರದ ಶ್ರೀರಕ್ಷೆ ಸದಾ ಪಾಲಿಕೆ ಮೇಲೆ ಇರಬೇಕು. ಎಲ್ಲಾ ಸಂದರ್ಭಗಳಲ್ಲಿ ಅನುದಾನದ ನೆರವು ಇರಬೇಕು ಎಂದು ಮುಖ್ಯಮಂತ್ರಿಗಳನ್ನು ಜಿಬಿಎ ಸಮಿತಿ ಅಧ್ಯಕ್ಷರನ್ನಾಗಿ ಮಾಡಿದ್ದೇವೆ. ಜಿಬಿಎ ಸಮಿತಿಯಲ್ಲಿ ಬಿಡಿಎ, ಬಿಎಂಆರ್ ಡಿಎ, ಬೆಸ್ಕಾಂ, ಬಿಡಬ್ಯೂಎಸ್ ಎಸ್ ಬಿ ಸೇರಿದಂತೆ ಇನ್ನು ಅನೇಕ ಸಂಸ್ಥೆಗಳ ಕಮಿಷನರ್, ಪೊಲೀಸ್ ಆಯುಕ್ತರು, ಸಂಚಾರಿ ಪೊಲೀಸ್ ಕಮಿಷನರ್, ಎಲ್ಲಾ ಅಧಿಕಾರಿಗಳು ಸದಸ್ಯರಾಗಿ ಇರುತ್ತಾರೆ. ಬೆಂಗಳೂರಿನ ಜನಪ್ರತಿನಿಧಿಗಳು ಹಾಗೂ ಬೆಂಗಳೂರಿನಲ್ಲಿ ಮತದಾನದ ಹಕ್ಕು ಹೊಂದಿರುವ ಎಲ್ಲಾ ಜನಪ್ರತಿನಿಧಿಗಳ ಜೊತೆಗೆ ಬೆಂಗಳೂರಿನಲ್ಲಿ ವಾಸಿಸುವ ಲೋಕಸಭಾ ಸದಸ್ಯರು, ಮುಖ್ಯ ಕಾರ್ಯದರ್ಶಿ ಹಾಗೂ ಎಸಿಎಸ್ ಅಧಿಕಾರಿಗಳನ್ನು ಈ ಸಮಿತಿಯಲ್ಲಿ ಸೇರಿಸುವ ಬಗ್ಗೆ ಇಂದು ತೀರ್ಮಾನ ಮಾಡಲಾಗಿದೆ” ಎಂದು ತಿಳಿಸಿದರು.

“ಮುಂದಿನ ದಿನಗಳಲ್ಲಿ ಬೆಂಗಳೂರಿಗೆ ಹೊಸ ದಿಕ್ಕು ನೀಡಲು, ಈ ಸಭೆಯಲ್ಲಿ ಜಿಬಿಎ ಸಮಿತಿ ಸದಸ್ಯರು ತಮ್ಮ ಅಭಿಪ್ರಾಯ ತಿಳಿಸಬಹುದು. ಇಲ್ಲಿ ರಾಜಕಾರಣ ಮಾಡುವ ಅಗತ್ಯವಿಲ್ಲ. ನಿಮ್ಮ ಸಲಹೆಗಳನ್ನು ಸ್ವೀಕರಿಸಲು ಸರ್ಕಾರ ಸಿದ್ಧವಿದೆ. ನಾವು ಎಲ್ಲಾ ಆಸ್ತಿ ಡಿಜಿಟಲೀಕರಣ ಮಾಡಲಾಗುತ್ತಿದ್ದು, ಸುಮಾರು 2 ಸಾವಿರ ಕೋಟಿ ಆದಾಯ ಹೆಚ್ಚಳದ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಈ ವರ್ಷ 6200 ಕೋಟಿ ಆದಾಯ ಬಂದಿದ್ದು, ದೆಹಲಿಯಲ್ಲಿ ಕೇವಲ 2 ಸಾವಿರ ಕೋಟಿ ಮಾತ್ರ ಆದಾಯವಿದೆ” ಎಂದು ಹೇಳಿದರು.

“ವಿಧಾನಸಭೆ, ವಿಧಾನ ಪರಿಷತ್ ನಲ್ಲಿ ಹಾಗೂ ಜಂಟಿ ಸದನ ಸಮಿತಿ ಮೂಲಕ ನಡೆದ 21 ಸಭೆಗಳಲ್ಲಿ ಎಲ್ಲಾ ಪಕ್ಷದವರ ಸಲಹೆ ಸ್ವೀಕರಿಸಿ ಈ ಜಿಬಿಎ ರಚಿಸಲಾಗಿದೆ. ವಿರೋಧ ಪಕ್ಷಗಳ ನಾಯಕರು ಆಂತರಿಕವಾಗಿ ಜಿಬಿಎ ವಿಚಾರವಾಗಿ ಸಂತೋಷವಾಗಿದ್ದಾರೆ. ಆದರೆ ರಾಜಕೀಯ ಉದ್ದೇಶದಿಂದ ಇದನ್ನು ಟೀಕೆ ಮಾಡುತ್ತಿದ್ದಾರೆ” ಎಂದು ತಿಳಿಸಿದರು.

DK Shivakumar: ಮನೆ ಕಟ್ಟೋ ಪ್ಲ್ಯಾನ್ ಮಾಡಿದವ್ರಿಗೆ ಡಿಸಿಎಂ ಡಿಕೆಶಿ ಕೊಟ್ಟ ಗುಡ್​ನ್ಯೂಸ್ ಏನ್ಗೊತ್ತಾ?

ಜಿಬಿಎ ವಿರೋಧಿಸುವವರು ಪಾಲಿಕೆ ಚುನಾವಣೆಗಳನ್ನು ಬಹಿಷ್ಕರಿಸಲಿ:
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಿಬಿಎ ರದ್ದು ಮಾಡಲಾಗುವುದು, ಸಭೆಯ ಅಜೆಂಡಾವನ್ನೇ ತಿಳಿಸಿಲ್ಲ ಎಂಬ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಬಹಳ ಸಂತೋಷ. ಮೊದಲ ಸಭೆಯಲ್ಲಿ ಅಜೆಂಡಾ ಇರುವುದಿಲ್ಲ. ಜಿಬಿಎ ಯಾವ ದಿಕ್ಕಿನಲ್ಲಿ ಸಾಗಬೇಕು ಎಂದು ತೀರ್ಮಾನವನ್ನು ಮೊದಲ ಸಭೆಯಲ್ಲಿ ಮಾಡಲಾಗುವುದು. ಈ ಸಭೆಗೆ ಗೈರಾಗುವ ಮೂಲಕ ಬಿಜೆಪಿ ನಾಯಕರು ಬೆಂಗಳೂರು ನಗರದ ವಿರುದ್ಧವಾಗಿ ನಿಂತಿದ್ದಾರೆ. ಜನರು ಕೊಟ್ಟ ಅಧಿಕಾರಕ್ಕೆ ದ್ರೋಹ ಬಗೆದಿದ್ದಾರೆ. ಜನರ ಪರವಾಗಿ ಧ್ವನಿ ಎತ್ತುವುದಕ್ಕಿಂತ ಅವರಿಗೆ ರಾಜಕಾರಣ ಮುಖ್ಯವಾಗಿದೆ. ಅವರ ಈ ನಡೆಗೆ ವಿಷಾದ ವ್ಯಕ್ತಪಡಿಸುತ್ತೇವೆ. ಇನ್ನು ಜಿಬಿಎ ರದ್ದುಗೊಳಿಸುವ ವಿಚಾರವಾಗಿ ಹೇಳುವುದಾದರೆ, ಕಾಂಗ್ರೆಸ್ ಸರ್ಕಾರದ ತೀರ್ಮಾಣವನ್ನು ಯಾವುದೇ ಬೇರೆ ಸರ್ಕಾರ ಬದಲಾವಣೆ ಮಾಡಲು ಸಾಧ್ಯವಾಗಿಲ್ಲ. ಭೂಸುಧಾರಣಾ ಕಾಯ್ದೆಯಿಂದ ಬ್ಯಾಂಕುಗಳ ರಾಷ್ಟ್ರೀಕರಣ, ಆಹಾರ ಭದ್ರತೆ, ಉದ್ಯೋಗ ಖಾತ್ರಿ, ಶೈಕ್ಷಣಿಕ ಹಕ್ಕು ಸೇರಿದಂತೆ ಗ್ಯಾರಂಟಿ ಯೋಜನೆಗಳವರೆಗೂ ಕಾಂಗ್ರೆಸ್ ಸರ್ಕಾರಗಳ ತೀರ್ಮಾನವನ್ನು ಬದಲಿಸಲು ಸಾಧ್ಯವಾಗಿಲ್ಲ. ಅವರು ಜಿಬಿಎ ವಿರುದ್ಧ ಪ್ರತಿಭಟಿಸುವುದೇ ಆದರೆ, ಅವರು ಚುನಾವಣೆಯಲ್ಲಿ ಭಾಗವಹಿಸುವುದಿಲ್ಲ ಎಂದು ಬಹಿಷ್ಕರಿಸಲಿ. ಅವರು ಏನಾದರೂ ಟೀಕೆ ಮಾಡಲಿ ನಾವು ನಮ್ಮ ಜನಪರ ಕೆಲಸ ಮುಂದುವರಿಸುತ್ತೇವೆ” ಎಂದು ತಿರುಗೇಟು ನೀಡಿದರು.

ಜಿಬಿಎ ಸದಸ್ಯರೇ ಸಭೆಗೆ ಬಂದಿಲ್ಲ ಎಂದು ಕೇಳಿದಾಗ, “ಸಚಿವ ಕೃಷ್ಣಾ ಭೈರೇಗೌಡರು ಹಾಸನದಲ್ಲಿ ಹಾಸನಾಂಬ ದೇವರ ದರ್ಶನ ಕಾರ್ಯಕ್ರಮದ ಉಸ್ತುವಾರಿಯಲ್ಲಿ ನಿರತರಾಗಿದ್ದಾರೆ. ಬೈರತಿ ಸುರೇಶ್ ಅವರಿಗೆ ಶಸ್ತ್ರಚಿಕಿತ್ಸೆಯಾಗಿದೆ. ಇನ್ನು ಕೆಲವರು ಅನಿವಾರ್ಯ ಕಾರಣಗಳಿಂದ ಬಂದಿಲ್ಲ. ಉಳಿದಂತೆ ವಿರೋಧ ಪಕ್ಷದವರು ಎಲ್ಲರೂ ಗೈರಾಗಿದ್ದಾರೆ” ಎಂದು ತಿಳಿಸಿದರು.

ವಾರ್ಡ್ ಮರುವಿಂಗಡಣೆ ವಿಚಾರವಾಗಿ ಕೇಳಿದಾಗ, “ವಾರ್ಡ್ ಮರುವಿಂಗಡಣೆ ನಮ್ಮ ಜವಾಬ್ದಾರಿ ಅಲ್ಲ. ಅದಕ್ಕಾಗಿಯೇ ಸಮಿತಿ ಇದೆ. ಅದು ಸಮಿತಿಯ ಜವಾಬ್ದಾರಿ. ಅದರಲ್ಲಿ ನಮ್ಮ ಹಸ್ತಕ್ಷೇಪ ಇಲ್ಲ” ಎಂದು ತಿಳಿಸಿದರು.

ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದಿಲ್ಲ ಹೀಗಾಗಿ ಐದು ಪಾಲಿಕೆ ಮಾಡಿದ್ದಾರೆ ಎಂದು ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ನಮಗೆ ಯಾರು ಗೆಲ್ಲುತ್ತಾರೆ ಎಂಬುದು ಮುಖ್ಯ ಅಲ್ಲ. ಹೊಸ ನಾಯಕರನ್ನು ಹುಟ್ಟುಹಾಕಬೇಕು. ಮುಂದಿನ ಚುನಾವಣೆ ನಂತರ ಪಾಲಿಕೆಗಳಲ್ಲಿ ಶೇ.50ರಷ್ಟು ಮಹಿಳಾ ಜನಪ್ರತಿನಿಧಿಗಳು ಇರಲಿದ್ದಾರೆ” ಎಂದು ತಿಳಿಸಿದರು.

ಓಸಿ ಮತ್ತು ಸಿಸಿ ವಿನಾಯಿತಿ ವಿಚಾರವಾಗಿ ಕೇಳಿದಾಗ, “ಸಧ್ಯಕ್ಕೆ 30×40 ವರೆಗಿನ ವಿಸ್ತೀರ್ಣದ ಕಟ್ಟಡಗಳಿಗೆ ವಿನಾಯಿತಿ ನೀಡಿದ್ದೇವೆ. ಉಳಿದಂತೆ ಕಾನೂನು ತಂಡಕ್ಕೆ ಸಿಎಂ ಸೂಚನೆ ನೀಡಿದ್ದು, ಅವರ ಸಲಹೆ ಮೇರೆಗೆ ಮುಂದಿನ ಸಚಿವ ಸಂಪುಟದಲ್ಲಿ ತೀರ್ಮಾನ ಮಾಡುತ್ತೇವೆ” ಎಂದು ತಿಳಿಸಿದರು.

Tags: BJPbjp opposes greater bengaluru billCongress Partygreater bengalurugreater bengaluru act 2024greater bengaluru authoritygreater bengaluru authority detailsgreater bengaluru authority newsgreater bengaluru billgreater bengaluru electiongreater bengaluru governancegreater bengaluru governance actgreater bengaluru governance billgreater bengaluru ingreater bengaluru real estategreater bengaluru township projectgreater bengaluru vs bdaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿರುವ ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್

Next Post

DK Shivakumar: ಬಾಂಬೆ ಮಾದರಿಯಲ್ಲಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿನೆ

Related Posts

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
0

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು. ಅವರು...

Read moreDetails

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

October 11, 2025

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

October 11, 2025

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

October 11, 2025
Next Post
DK Shivakumar: ಬಾಂಬೆ ಮಾದರಿಯಲ್ಲಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿನೆ

DK Shivakumar: ಬಾಂಬೆ ಮಾದರಿಯಲ್ಲಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿನೆ

Recent News

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
Top Story

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!
Top Story

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

by ಪ್ರತಿಧ್ವನಿ
October 11, 2025
Top Story

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

by ಪ್ರತಿಧ್ವನಿ
October 11, 2025
Top Story

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

by ಪ್ರತಿಧ್ವನಿ
October 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada