ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡ ಭಾಸ್ಕರ್ ರಾವ್ ಅವರು ಬುಧವಾರ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ.
ಈ ವಿಚಾರವನ್ನು ಭಾಸ್ಕರ್ ರಾವ್ ಖಚಿತ ಪಡಿಸಿದ್ದು, ತಾವು ಬಿಜೆಪಿ ಸೇರುತ್ತಿರುವುದು ನಿಜ. ನಾಳೆಯೇ ಸೇರ್ಪಡೆಗೊಳ್ಳಲಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಮಂಗಳವಾರ ಕಂದಾಯ ಸಚಿವ ಆರ್.ಅಶೋಕ ಅವರನ್ನು ಭೇಟಿ ಮಾಡಿದ್ದರು. ಬಳಿಕ ಅವರು ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಅಣ್ಣಾಮಲೈ ಸೇರಿ ಹಲವು ನಾಯಕರ ಜತೆ ಮಾತುಕತೆ ನಡೆಸಿದರು.
ರಾಜಕೀಯ ಪಕ್ಷ ಸೇರಿ ಚುನಾವಣೆ ಸ್ಪರ್ಧಿಸುವ ಉದ್ದೇಶದಿಂದ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ಸ್ವೀಕಾರಗೊಂಡ ಬಳಿಕ ಅವರು ಆಮ್‌ಆದ್ಮಿ ಪಕ್ಷ ಸೇರಿದ್ದರು. ಬಸವನಗುಡಿಯಿಂದ ಸ್ಪರ್ಧಿಸುವ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಮೊದ ಮೊದಲು ಪಕ್ಷದಲ್ಲಿ ಸಕ್ರಿಯರಾಗಿದ್ದ ಭಾಸ್ಕರ್ ರಾವ್ ಕಳೆದ ಒಂದೆರಡು ತಿಂಗಳಿಂದ ಪಕ್ಷದಲ್ಲಿ ಅಷ್ಟಾಗಿ ಸಕ್ರಿಯರಾಗಿರಲಿಲ್ಲ.






