ಕರ್ನಾಟಕ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಕೆ. ಎಲ್ ಮಂಜುನಾಥ್ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಜಸ್ಟೀಸ್ ಕೆ.ಎಲ್.ಮಂಜುನಾಥ್ 13-09-1974 ರಂದು ವಕೀಲರಾಗಿ ಕರ್ನಾಟಕದ ಉಚ್ಚ ನ್ಯಾಯಾಲಯದಲ್ಲಿ ಸೇವೆ ಶುರು ಮಾಡಿದ್ದರು. 11-12-2000 ರಂದು ಕರ್ನಾಟಕ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶರಾಗಿ ಮತ್ತು 27-10-2001 ರಂದು ಖಾಯಂ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು.
ಗಡಿ ಸಂರಕ್ಷಣಾ ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ನ್ಯಾ. ಮಂಜುನಾಥ್ ಪಾರ್ಥೀವ ಶರೀರವನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಮಧ್ಯಾಹ್ನ 12 ಗಂಟೆವರೆಗೆ ಪಾರ್ಥಿವ ಶರೀರದ ಅಂತಿಮ ದರ್ಶನ ಇರಲಿದ್ದು, ಮಧ್ಯಾಹ್ನ 3 ಗಂಟೆಗೆ ನೆಲಮಂಗಲದ ತೋಟದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎನ್ನಲಾಗಿದೆ. ಇವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಪ್ರಧಾನ ಮಂತ್ರಿ ಹೆಚ್ ಡಿ ದೇವೇಗೌಡ, ಕೆಪಿಸಿಸಿ ಆದ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.