ಹಾಸನ ಅಶ್ಲೀಲ ವಿಡಿಯೋ ಕೇಸ್ ರೇವಣ್ಣ ಅಂಡ್ ಫ್ಯಾಮಿಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಸಂತ್ರಸ್ತ ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಬಂಧಿತರಾಗಿರುವ ಮಾಜಿ ಸಚಿವ ಶಾಸಕ ಹೆಚ್ ಡಿ ರೇವಣ್ಣಗೆ 7 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.ಮೇ 14ರವರೆಗೆ ಹೆಚ್ ಡಿ ರೇವಣ್ಣರಿಗೆ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಸಂತ್ರಸ್ತ ಮಹಿಳೆಯನ್ನ ಕಿಡ್ನಾಪ್ ಮಾಡಿರುವ ಆರೋಪದ ಮೇಲೆ ಹೆಚ್.ಡಿ ರೇವಣ್ಣ ವಿರುದ್ದ ಕೆಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ಹೆಚ್ ಡಿ ರೇವಣ್ಣ ಅವರನ್ನ ಬಂಧಿಸಿದ್ದರು.ಇಂದು 17ನೇ ಎಸಿಎಂಎಂ ಕೋರ್ಟ್ ಹೆಚ್ ಡಿ ರೇವಣ್ಣರಿಗೆ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಈ ನಡುವೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ವಿಚಾರಣೆ ನಾಳೆಗೆ ಮುಂದೂಡಿಕೆಯಾಗಿದೆ
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ
2019ರಲ್ಲಿ ಒಂದು ಕನಸು ಆರಂಭವಾಯಿತು…ಸತ್ಯದ ಧ್ವನಿಯನ್ನು ಜನರಿಗೆ ತಲುಪಿಸುವ ಕನಸು…ಆ ಕನಸಿನ ಹೆಸರು – ಪ್ರತಿಧ್ವನಿ ನ್ಯೂಸ್. ಇಂದು, 2026ರ ಏಪ್ರಿಲ್ 11… ಪ್ರತಿಧ್ವನಿ ತನ್ನ ಏಳು...
Read moreDetails






