ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತ ಮಹಿಳೆಯನ್ನ ಕಿಡ್ನಾಪ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಚಿವ ಹಾಗೂ ಹೊಳೆನರಸೀಪುರ ಶಾಸಕ ಹೆಚ್.ಡಿ ರೇವಣ್ಣ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 6 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದ ಹೆಚ್.ಡಿ ರೇವಣ್ಣ ಅವರ ಜೈಲುವಾಸ ಇಂದು ಅಂತ್ಯವಾಗಿದೆ. ಹೆಚ್.ಡಿ ರೇವಣ್ಣಗೆ ನಿನ್ನೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಷರತ್ತುಬದ್ದ ಜಾಮೀನು ಮಂಜೂರು ಮಾಡಿತ್ತು.
ಈ ಹಿನ್ನೆಲೆಯಲ್ಲಿ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಹೆಚ್.ಡಿ ರೇವಣ್ಣ ಬಿಡುಗಡೆಯಾಗಿದ್ದಾರೆ. ಇನ್ನು ಹೆಚ್.ಡಿ ರೇವಣ್ಣ ಬಿಡುಗಡೆ ಹಿನ್ನೆಲೆ ಪರಪ್ಪನ ಅಗ್ರಹಾರ ಜೈಲು ಬಳಿ ಜೆಡಿಎಸ್ ಕಾರ್ಯಕರ್ತರು ಜಮಾಯಿಸಿದ್ದರು. ಈ ವೇಳೆ ಪೊಲೀಸರು ಲಾಠಿಚಾರ್ಜ್ ನಡೆಸಿ ಕಾರ್ಯಕರ್ತರನ್ನ ಚದುರಿಸಿದ್ದಾರೆ ಎನ್ನಲಾಗಿದೆ.
ಅಜಿತ್ ಪವಾರ್ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?
ಬೆಂಗಳೂರು : ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ. ಇಂದು ಬೆಳಿಗ್ಗೆ ಮುಂಬೈಯಿಂದ ತಮ್ಮ ಸ್ವಕ್ಷೇತ್ರ ಬಾರಾಮತಿಗೆ ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗಿಯಾಗಲು...
Read moreDetails











