ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತ ಮಹಿಳೆಯನ್ನ ಕಿಡ್ನಾಪ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಚಿವ ಹಾಗೂ ಹೊಳೆನರಸೀಪುರ ಶಾಸಕ ಹೆಚ್.ಡಿ ರೇವಣ್ಣ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 6 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದ ಹೆಚ್.ಡಿ ರೇವಣ್ಣ ಅವರ ಜೈಲುವಾಸ ಇಂದು ಅಂತ್ಯವಾಗಿದೆ. ಹೆಚ್.ಡಿ ರೇವಣ್ಣಗೆ ನಿನ್ನೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಷರತ್ತುಬದ್ದ ಜಾಮೀನು ಮಂಜೂರು ಮಾಡಿತ್ತು.
ಈ ಹಿನ್ನೆಲೆಯಲ್ಲಿ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಹೆಚ್.ಡಿ ರೇವಣ್ಣ ಬಿಡುಗಡೆಯಾಗಿದ್ದಾರೆ. ಇನ್ನು ಹೆಚ್.ಡಿ ರೇವಣ್ಣ ಬಿಡುಗಡೆ ಹಿನ್ನೆಲೆ ಪರಪ್ಪನ ಅಗ್ರಹಾರ ಜೈಲು ಬಳಿ ಜೆಡಿಎಸ್ ಕಾರ್ಯಕರ್ತರು ಜಮಾಯಿಸಿದ್ದರು. ಈ ವೇಳೆ ಪೊಲೀಸರು ಲಾಠಿಚಾರ್ಜ್ ನಡೆಸಿ ಕಾರ್ಯಕರ್ತರನ್ನ ಚದುರಿಸಿದ್ದಾರೆ ಎನ್ನಲಾಗಿದೆ.
ಸೆ. 28 ರಿಂದ 30ರವರೆಗೆ ಬ್ಯಾಂಕ್ ಮುಷ್ಕರ : ಗ್ರಾಹಕರು ಮುಂಚಿತವಾಗಿ ಮಾಡಬೇಕಾದ 3 ಮುಖ್ಯ ಕೆಲಸಗಳು
ನವದೆಹಲಿ : ದೇಶಾದ್ಯಂತ ಬ್ಯಾಂಕಿಂಗ್ ಸೇವೆಗಳಲ್ಲಿ ಸತತ ಮೂರು ದಿನಗಳ ಕಾಲ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ವಾರಕ್ಕೆ 5 ದಿನಗಳ ಕೆಲಸ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ...
Read moreDetails





