ಮೈಸೂರು: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಇಂದು(ಜ.17) ಮೈಸೂರು ಜಿಲ್ಲಾ ಪ್ರವಾಸಕೈಗೊಂಡಿದ್ದಾರೆ.

ಇಂದು ಬೆಳಗ್ಗೆ 11ಕ್ಕೆ ಮೈಸೂರಿಗೆ ಆಗಮಿಸಲಿರುವ ಕೃಷ್ಣ ಭೈರೇಗೌಡ ಅವರು, 12 ಗಂಟೆಗೆ ಕಾಂಗ್ರೆಸ್ ಕಚೇರಿ ಕಚೇರಿಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ, ಮುಂಬರುವ ಲೋಕಸಭಾ ಚುನಾವಣೆ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಕೆಲಕಾಲ ಮಾತುಕತೆ ನಡೆಸಲಿದ್ದಾರೆ.
ನಂತರ ಮಧ್ಯಾಹ್ನ 1.30ಕ್ಕೆ ಪ್ರಾದೇಶಿಕ ಆಯುಕ್ತರ ಕಚೇರಿ ಆವರಣದಲ್ಲಿರುವ ಚಾಮುಂಡೇಶ್ವರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಜಿಲ್ಲೆಯ ಬರ ಪರಿಸ್ಥಿತಿ ಕುರಿತಂತೆ ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ. ಬಳಿಕ ಸಂಜೆ 6ಕ್ಕೆ ರಸ್ತೆ ಮೂಲಕ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.