ಮಂಡ್ಯದಲ್ಲಿ ಮಾಜಿ ಸಚಿವ ಡಾ.ಕೆ. ಸಿ.ನಾರಾಯಣಗೌಡರನ್ನು ಸೆಳೆಯಲು ಯತ್ನಿಸಿದ್ದ ಕಾಂಗ್ರೆಸ್ ನಾಯಕರಿಗೆ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಡಾ.ಸಿ. ಎನ್.ಅಶ್ವತ್ಥ್‌ನಾರಾಯಣ್ ಸಖತ್ ಆಗಿಯೇ ಶಾಕ್ ಕೊಟ್ಟಿ. ಮಂಡ್ಯದಲ್ಲಿ ಆಪರೇಷನ್‌ಗೆ ರಿವರ್ಸ್ ಆಪರೇಷನ್ ಮಾಡಲು ಬಿಜೆಪಿ-ಜೆಡಿಎಸ್ ನಾಯಕರುಗಳು ಮುಂದಾಗಿದ್ದಾರೆ. ಇನ್ನು 2024 ರ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ, ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಯಾಗಿ ಎದುರಿಸಲು ಸಜ್ಜಾದ ಹಿನ್ನೆಲೆಯಲ್ಲಿ, ಮಂಡ್ಯ ಬಿಜೆಪಿಗೆ ಬಿಟ್ಟುಕೊಡಬೇಕೆಂದು ಪಟ್ಟು ಹಿಡಿದಿದ್ದ ಕೆ.ಸಿ. ನಾರಾಯಣಗೌಡರನ್ನು ಮನವೊಲಿಸುವಲ್ಲಿ ಬಿಜೆಪಿ- ಜೆಡಿಎಸ್ ನಾಯಕರು ಸಫಲರಾಗಿದ್ದಾರೆ.

ಕೆ.ಸಿ.ನಾರಾಯಣಗೌಡ. ಮಾಜಿ ಸಚಿವ. ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿ ಟಿಕೆಟ್ ಕೊಡಬೇಕೆಂದು ಪಟ್ಟು ಹಿಡಿದಿದ್ರು. ಕೆ.ಸಿ. ನಾರಾಯಣಗೌಡರ ಮಾತಿಗೆ ಸೊಪ್ಪು ಹಾಕದ ಬಿಜೆಪಿ ಹೈಕಮಾಂಡ್ ನಾಯಕರು, ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಟ್ಟಿತ್ತು. ಈ ಹಿನ್ನಲೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲು ತೆರೆಮರೆಯಲ್ಲಿ ವೇದಿಕೆ ಕೆ.ಸಿ.ನಾರಾಯಣಗೌಡ ಸಿದ್ಧಪಡಿಸಿಕೊಳ್ಳುತ್ತಿದ್ರು.

ನಿನ್ನೆ ತಡರಾತ್ರಿ ದಿಢೀರ್ ಎಂದು ಕೆ. ಸಿ.ನಾರಾಯಣಗೌಡರ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಡಾ.ಸಿ. ಎನ್.ಅಶ್ವತ್ಥ್‌ನಾರಾಯಣ್ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಕೆ.ಸಿ. ನಾರಾಯಣಗೌಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಬಿಜೆಪಿಯಲ್ಲಿಯೇ ಉಳಿಸಿಕೊಳ್ಳುವಲ್ಲಿ ನಾಯಕರು ಸಫಲರಾಗಿದ್ದಾರೆ. ಈ ಮೂಲಕ ಲೋಕಸಭಾ ಚುನಾವಣೆಯ ಹೊಸ್ತಿಲಿನಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲು ನಿಶ್ಚಯಿಸಿದ್ದ ನಾರಾಯಣಗೌಡರನ್ನು ರಿವರ್ಸ್ ಆಪರೇಷನ್ ಮೂಲಕ ಬಿಜೆಪಿ-ಜೆಡಿಎಸ್ ನಾಯಕರುಗಳು ಸೆಳೆದಿದ್ದಾರೆ.





