ರಾಜ್ಯದಲ್ಲಿ ಮೊದಲನೇ ಹಂತದ ಮತದಾನ ಆರಂಭವಾಗಿದ್ದು ಬೆಳಿಗ್ಗೆಯಿಂದಲೇ ಮತದಾರರು ಭರ್ಜರಿ ರೆಸ್ಪಾನ್ಸ್ ಕೊಟ್ಟಿದಾರೆ. ಜನಸಾಮಾನ್ಯರು, ಶಾಸಕರು, ಸಚಿವರ ಹಾದಿಯಾಗಿ, ಸಿನಿಮಾ ನಟರು ಕೂಡ ಸರತಿ ಸಾಲಲ್ಲಿ ನಿಂತು ಮತ ಚಲಾವಣೆಗೆ ಮುಂದಾಗಿದ್ದಾರೆ.
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸಚಿವ ರಾಮಲಿಂಗಾ ರೆಡ್ಡಿ, ಪುತ್ರಿ ಹಾಗೂ ಅಭ್ಯರ್ಥಿ ಸೌಮ್ಯ ರೆಡ್ಡಿ ಹಾಗೂ ಇಡೀ ಕುಟುಂಬ ಸಮೇತ ಮತಗಟ್ಟೆಗೆ ಬಂದು ಮತಚಲಾಯಿಸಿದ್ದಾರೆ.
ಬೆಂಗಳೂರು ದಕ್ಷಿಣ ಕ್ಷೇತ್ರ ಬಾರಿ ಜಿದ್ದಾ ಜಿದ್ದಿಗೆ ಕಾರಣವಾಗಿದ್ದು , ಫಲಿತಾಂಶ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.