ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 196 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ 3,428ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 4,46,77,302ಕ್ಕೆ ಏರಿಕೆಯಾಗಿದ್ದು ಸಾವಿನ ಸಂಖ್ಯೆ 5,30,695ಕ್ಕೆ ಏರಿಕೆ ಆಗಿದೆ.
ಕಳೆದ 24 ಘಂಟೆಗಳಲ್ಲಿ ದೇಶಾದ್ಯಂತ ಒಟ್ಟು 35,173 ಪರೀಕ್ಷೆಗಳನ್ನ ನಡೆಸಲಾಗಿದ್ದು ಪಾಸಿಟಿವಿಟ ದರ 0.56 ರಷ್ಟಿದೆ ಎಂದು ತಿಳಿದು ಬಂದಿದೆ. ಸಕ್ರಿಯ ಸೋಂಕಿತರ ಪ್ರಮಾಣ ಶೇ.0.01ರಷ್ಟಿದ್ದು ಚೇತರಿಕೆ 98.80ರಷ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
