• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಿಷಿ ಮುಡಿಗೇರಿದ ಒಟಿಟಿ ಅವಾರ್ಡ್ ಪ್ರಶಸ್ತಿ

ಪ್ರತಿಧ್ವನಿ by ಪ್ರತಿಧ್ವನಿ
November 2, 2023
in Top Story, ಸಿನಿಮಾ
0
ರಿಷಿ ಮುಡಿಗೇರಿದ ಒಟಿಟಿ ಅವಾರ್ಡ್ ಪ್ರಶಸ್ತಿ
Share on WhatsAppShare on FacebookShare on Telegram

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ತಾರೆ ರಿಷಿ ಅಪರೇಷನ್ ಅಲಮೇಲಮ್ಮ, ಕವಲುದಾರಿ, ನೋಡಿ ಸ್ವಾಮಿ ನಾವು ಇರೋದು ಹೀಗೆ ಪ್ರತಿ ಸಿನಿಮಾದಲ್ಲೊಂದು ಹೊಸ ಬಗೆಯ ಪಾತ್ರದ ಮೂಲಕ ಅವರು ಪ್ರೇಕ್ಷಕರನ್ನು ರಂಜಿಸಿಕೊಂಡು ಬರ್ತಿದ್ದಾರೆ. ಶೈತನ್ ವೆಬ್ ಸೀರೀಸ್ ಮೂಲಕ ಒಟಿಟಿ ಪ್ರಪಂಚಕ್ಕೂ ಪರಿಚಿತರಾಗಿದ್ದ ರಿಷಿ ಇದೇ ಸೀರಿಸ್ ಗಾಗಿ ಅತ್ಯುತ್ತಮ ಖಳನಾಯಕ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ADVERTISEMENT

ಕಿರುತೆರೆ ಹಾಗೂ ಸಿನಿಮಾ ರಂಗಕ್ಕೆ ಪ್ರಶಸ್ತಿಗಳಿರುವಂತೆ ಒಟಿಟಿ ವೇದಿಕೆಗೂ ಪ್ರಶಸ್ತಿ ಇದೆ. ಪ್ರತಿ ವರ್ಷ ಬಹಳ ಅದ್ಧೂರಿಯಾಗಿ ನಡೆಯುವ ಈ ಅವಾರ್ಡ್ ಕಾರ್ಯಕ್ರಮ ಮೊನ್ನೆ ಮುಂಬೈನಲ್ಲಿ ನೆರವೇರಿದೆ. ಇದೇ ವೇದಿಕೆಯಲ್ಲಿ ಬಾಲಿವುಡ್, ಕಾಲಿವುಡ್, ಮಾಲಿವುಡ್ ಹಾಗೂ ಸ್ಯಾಂಡಲ್ ವುಡ್ ಕಲಾವಿದರ ಸಮ್ಮುಖದಲ್ಲಿ ರಿಷಿ ಗಾಗಿ ಅತ್ಯುತ್ತಮ ಖಳನಾಯಕ ಪ್ರಶಸ್ತಿಗೆ ಮುತ್ತಿಟ್ಟಿದ್ದಾರೆ.

ಹಾಗ್ ನೋಡಿದ್ರೆ ಈ ವರ್ಷ ಬಹಳಷ್ಟು ವೆಬ್ ಸೀರಿಸ್ ಗಳು ಬಿಡುಗಡೆಯಾಗಿವೆ. ಆ ಎಲ್ಲಾ ವೆಬ್ ಸೀರಿಸ್ ಹಿಂದಿಕ್ಕಿ ಸೈತನ್ ಜೂರಿಗಳ ಮನಗೆದ್ದಿದೆ. ರಿಷಿ ಅಭಿನಯವೂ ಎಲ್ಲರ ಮೆಚ್ಚುಗೆ ಪಡೆದುಕೊಂಡಿದೆ. ನೆಗೆಟಿವ್ ರೋಲ್ ನಲ್ಲಿ ಅಬ್ಬರಿಸಿ ಬೊಬ್ಬಿರಿಸಿದ್ದ ಕನ್ನಡದ ತಾರೆ ರಿಷಿ ಅವರಿಗೆ 2023 ಒಟಿಟಿ ಅತ್ಯುತ್ತಮ ಖಳನಾಯಕ ಪ್ರಶಸ್ತಿ ಸಂದಿದೆ.

ತೆಲುಗಿನಲ್ಲಿ ಬ್ಯುಸಿಯಾದ ರಿಷಿ ಶೈತನ್ ವೆಬ್ ಸೀರಿಸ್ ಮೂಲಕ ತೆಲುಗು ಪ್ರೇಕ್ಷಕರಿಗೆ ರಿಷಿ ಹತ್ತಿರವಾಗಿದ್ದಾರೆ. ಅವರ ಸಹಜ ನಟನೆ ಗಮನಸೆಳೆದಿದ್ದು, ಹೊಸ ಹೊಸ ಅವಕಾಶಗಳು ಅವರನ್ನು ಅರಸಿ ಬರ್ತಿವೆ. ಅದರ ಮುಂದುವರೆದ ಭಾಗ ಎನ್ನುವಂತೆ ತೆಲುಗಿನಲ್ಲಿ ಹೊಸ ಚಿತ್ರವೊಂದರಲ್ಲಿ ರಿಷಿ ನಟಿಸುತ್ತಿದ್ದಾರೆ. ಹೈದ್ರಾಬಾದ್ ನಲ್ಲಿ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದೆ. ನೈಜ ಘಟನೆಯ ಪ್ರೇರೆಪಿತ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ರಿಷಿ ಪ್ರಮುಖ ಪಾತ್ರವೊಂದರಲ್ಲಿ ಅಭಿನಯಿಸುತ್ತಿದ್ದಾರೆ. ಒಂದೊಳ್ಳೆ ಬಜೆಟ್ ನಲ್ಲಿ ತಯಾರಾಗ್ತಿರುವ ಈ ಸಿನಿಮಾ ಗೋಪಿ ವಿಹಾನಿ ಎಂಬುವವರು ಆಕ್ಷನ್ ಕಟ್ ಹೇಳ್ತಿದ್ದು, ಇದು ಇವರ ಚೊಚ್ಚಲ ಹೆಜ್ಜೆ.. ಬಯೋಪಾಟಿ ಸಿನಿಮಾಗಳಿಗೆ ಬರಹಗಾರರಾಗಿ ದುಡಿದಿರುವ ಗೋಪಿ ಡೈರೆಕ್ಟರ್ ಕ್ಯಾಪ್ ತೊಟ್ಟು ನಿರ್ದೇಶನದ ಅಖಾಡಕ್ಕೆ ಇಳಿದಿದ್ದಾರೆ.

ತೆಲುಗಿನಲ್ಲಿ ಒಂದಿಷ್ಟು ವರ್ಷಗಳ ಕಾಲ ಮಾರ್ಕೆಟಿಂಗ್ ಹಾಗೂ ಪಿಆರ್ ಆಗಿ ಕೆಲಸ ಮಾಡಿರುವ ಅನುಭವಿರುವ ರವಿ ಪನಸ ತಮ್ಮದೇ ರವಿ ಪಸನ ಫಿಲ್ಮಂ ಕಾರ್ಪೊರೇಷನ್ ನಡಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ತಿರುವೀರ್, ಫರಿಯಾ ಅಬ್ದುಲ್ಲಾ, ರವೀಂದರ್ ವಿಜಯ್, ಶೆಲ್ಲಿ ಕಿಶೋರ್, ಕಾಲಕೇಯ ಪ್ರಭಾಕರ್, ಚಿರಾಗ್ ಜಾನಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಹೊಸ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ರಿಷಿ ರಾಮನ ಅವತಾರ ಸಿನಿಮಾ ರಿಲೀಸ್ ಗೆ ಎದುರು ನೋಡುತ್ತಿದ್ದಾರೆ. ‘ರಾಮನ ಅವತಾರ’ ಸಿನಿಮಾದಲ್ಲಿ ಪ್ರಣೀತಾ ಸುಭಾಷ್ ಹಾಗೂ ಶುಭ್ರ ಅಯ್ಯಪ್ಪ ನಾಯಕಿಯರಾಗಿ ನಟಿಸಿದ್ದು, ಅರುಣ್ ಸಾಗರ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ವಿಕಾಸ್ ಪಂಪಾಪತಿ ‘ರಾಮನ ಅವತಾರ’ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ.

ಸ್ಟಾರ್ ಫ್ಯಾಬ್ ಪ್ರೊಡಕ್ಷನ್‌ನಡಿ ‘ಆಪರೇಷನ್ ಅಲಮೇಲಮ್ಮ’ ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಚಿತ್ರ ನಿರ್ಮಾಣ ಮಾಡಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ಜಾನರ್ ಈ ಸಿನಿಮಾಗೆ ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶ್ ಪಾಂಡೇ ಕ್ಯಾಮೆರಾ ಕೈಚಳಕವಿದ್ದು, ಜೂಡಾ ಸ್ಯಾಂಡಿ ಟ್ಯೂನ್ ಹಾಕಿದ್ದು, ಅಮರನಾಥ್ ಸಂಲಕನವಿದೆ. ಉಡುಪಿ, ಬೆಂಗಳೂರು ಸುತ್ತುಮುತ್ತ ಶೂಟಿಂಗ್ ನಡೆಸಲಾಗಿದೆ.

Tags: CinemaOTTOTT AwardRISHI
Previous Post

ನ.10ಕ್ಕೆ ಬಿಡುಗಡೆಯಾಗ್ತಿದೆ ಎಸ್ತರ್ ನರೋನ್ಹಾ ನಿರ್ದೇಶಿಸಿ ನಟಿಸಿರುವ ‘ದಿ ವೆಕೆಂಟ್ ಹೌಸ್’

Next Post

Sonal Monteiro | ರಾಬರ್ಟ್ ಆದ್ಮೇಲೆ ಮತ್ತೆ ದರ್ಶನ್ ಸರ್ ಜೊತೆ ಸ್ಕ್ರೀನ್ ಶೇರ್ ಮಾಡೋ ಅವಕಾಶ ಸಿಕ್ತು

Related Posts

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?
Top Story

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

by ಪ್ರತಿಧ್ವನಿ
April 14, 2026
0

ಬೆಂಗಳೂರು : ಪಂಚಮಸಾಲಿ ಸಮಾಜದ ಎರಡು ಟ್ರಸ್ಟ್ ಸ್ವಂತ ಆಸ್ತಿಯಾಗಿವೆ, ಇದರಿಂದ ಸಮಾಜ ಹಾಗೂ ಜನರಿಂದ ನಂಬಿಕೆಗೆ ಅನರ್ಹವಾಗಿವೆ. ವಚನಾನಂದ ಶ್ರೀಗಳ ಉಚ್ಚಾಟನೆ ಅಷ್ಟೇನೂ ವಿಶೇಷ ಎಂದು...

Read moreDetails
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..

ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..

April 13, 2026
ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬಳಕೆದಾರರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಗುಡ್‌ನ್ಯೂಸ್‌ ಏನದು?

ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬಳಕೆದಾರರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಗುಡ್‌ನ್ಯೂಸ್‌ ಏನದು?

April 13, 2026
Next Post

Sonal Monteiro | ರಾಬರ್ಟ್ ಆದ್ಮೇಲೆ ಮತ್ತೆ ದರ್ಶನ್ ಸರ್ ಜೊತೆ ಸ್ಕ್ರೀನ್ ಶೇರ್ ಮಾಡೋ ಅವಕಾಶ ಸಿಕ್ತು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada