ವಿರೋಧ ಪಕ್ಷಗಳ ಒಕ್ಕೂಟ ಮಹಾಘಟ್ ಬಂಧನ್ನ ಶಾಸಕಾಂಗ ಪಕ್ಷದ ನಾಯಕನಾಗಿ ಮಂಗಳವಾರ ಆಯ್ಕೆಯಾಗಿದ್ದ ಜೆಡಿಯು ವರಿಷ್ಠ ನಿತೀಶ್ ಕುಮಾರ್ ಬುಧವಾರ ಬಿಹಾರದ ಮುಖ್ಯಮಂತ್ರಿಯಾಗಿ ದಾಖಲೆ 8ನೇ ಭಾರಿ ಪ್ರಮನ ವಚನ ಸ್ವೀಕರಿಸಿದ್ದಾರೆ.
ಇನ್ನು ನಿತೀಶ್ ಜೊತೆ ಉಪಮುಖ್ಯಮಂತ್ರಿಯಾಗಿ ಆರ್ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಪುತ್ರ ತೇಜಸ್ವಿ ಯಾದವ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಇನ್ನು 35ಕ್ಕೂ ಹೆಚ್ಚು ಮಂದಿ ಒಳಗೊಂಡ ಸಚಿವ ಸಂಪುಟ ರಚನೆಯಾಗಲಿದ್ದು ಜೆಡಿಯು, ಆರ್ಜೆಡಿ, ಕಾಂಗ್ರೆಸ್ ಹಾಗೂ ಎಚ್ಎಎಂಗೆ ಪ್ರಾತಿನಿಧ್ಯ ಸಿಗಲಿದೆ ಎಂದು ಸುದ್ದಿ ಮೂಲಗಳು ತಿಳಿಸಿವೆ.
ಇನ್ನು ಅಧಿಕಾರ ಹಂಚಿಕೆ ಸೂತ್ರದ ವಿವಾರಕ್ಕೆ ಬರುವುದಾದರೆ ಸಚಿವ ಸಂಪುಟದಲ್ಲಿಆರ್ಜೆಡಿಗೆ ಹೆಚ್ಚಿನ ಪ್ರಾತಿನಿಧ್ಯ ಸಿಗಲಿದೆ ಎಂದು ತಿಳಿದು ಬಂದಿದೆ.
ಜೆಡಿಯುನಿಂದ 13 ಮಂದಿ, ಆರ್ ಜೆಡಿಯಿಂದ 16 ಮಂದಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವ ನಿರೀಕ್ಷೆ ಇದೆ.