ಸ್ಯಾಂಡಲ್‌ವುಡ್‌ನ ಖ್ಯಾತ ನಟ ಕೋಮಲ್ ಕುಮಾರ್ ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಸಂದರ್ಭದಲ್ಲಿ, ಅವರ ಬಹುನಿರೀಕ್ಷಿತ ‘ರೋಲೆಕ್ಸ್’ ಚಿತ್ರದ ತಂಡ ಅಭಿಮಾನಿಗಳಿಗೆ ವಿಶೇಷ ಉಡುಗೊರೆಯೊಂದನ್ನು ನೀಡಿದೆ. ಚಿತ್ರದ ಮೊದಲ ಗ್ಲಿಂಪ್ಸ್ ಹಾಗೂ ಹೊಸ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಕೋಮಲ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ಅಪ್‌ಡೇಟ್‌ಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಬಿಡುಗಡೆಯಾದ ಗ್ಲಿಂಪ್ಸ್ ಮತ್ತು ಪೋಸ್ಟರ್‌ನಲ್ಲಿ ಕೋಮಲ್ ಕುಮಾರ್ ಇದುವರೆಗೆ ಕಾಣಿಸದ ವಿಭಿನ್ನ ಹಾಗೂ ಸ್ಟೈಲಿಷ್ ಲುಕ್‌ನಲ್ಲಿ ಮಿಂಚಿದ್ದಾರೆ. ಅವರ ಹೊಸ ಗೆಟಪ್ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ್ದು, ಸಿನಿಮಾ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.
‘ರೋಲೆಕ್ಸ್’ ಚಿತ್ರವನ್ನು ಅಂಬಟಿ ಮಧು ಮೋಹನ್ ನಿರ್ಮಿಸುತ್ತಿದ್ದು, ಶ್ರೀನಿವಾಸ್ ಮಂಡ್ಯ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರವು ಸಂಪೂರ್ಣ ಕೌಟುಂಬಿಕ ಮನರಂಜನಾ ಕಾಮಿಡಿ ಕಥಾಹಂದರ ಹೊಂದಿದ್ದು, ಕುಟುಂಬ ಸಮೇತರಾಗಿ ನೋಡಬಹುದಾದ ಮನರಂಜನೆಯ ಚಿತ್ರವಾಗಲಿದೆ ಎಂದು ಚಿತ್ರತಂಡ ತಿಳಿಸಿದೆ. ಹಾಸ್ಯದ ಜೊತೆಗೆ ಭಾವನಾತ್ಮಕ ಅಂಶಗಳನ್ನೂ ಒಳಗೊಂಡಿರುವ ಈ ಸಿನಿಮಾ ಎಲ್ಲ ವಯೋಮಾನದ ಪ್ರೇಕ್ಷಕರನ್ನು ರಂಜಿಸುವ ವಿಶ್ವಾಸ ಚಿತ್ರತಂಡಕ್ಕಿದೆ.
ಸಂಗೀತ ನಿರ್ದೇಶಕ ಜೆಸ್ಸಿ ಗಿಫ್ಟ್ ಚಿತ್ರದ ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದು, ಛಾಯಾಗ್ರಹಣದ ಜವಾಬ್ದಾರಿಯನ್ನು ರಾಕೇಶ್ ತಿಲಕ್ ನಿರ್ವಹಿಸಿದ್ದಾರೆ. ಸಂಕಲನವನ್ನು ಅರವಿಂದ್ ರಾಜ್ ಮಾಡಿದ್ದು, ಕಾರ್ಯಕಾರಿ ನಿರ್ಮಾಪಕರಾಗಿ ಮುರಳಿಕೃಷ್ಣ ಹಾಗೂ ಕ್ರಿಯೇಟಿವ್ ಹೆಡ್ ಆಗಿ ರಾಜೇಶ್ ವರ್ಮ ಕಾರ್ಯನಿರ್ವಹಿಸುತ್ತಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿರುವ ಕೋಮಲ್ ಕುಮಾರ್, ಈ ಬಾರಿ ‘ರೋಲೆಕ್ಸ್’ ಚಿತ್ರದ ಮೂಲಕ ಮತ್ತೊಮ್ಮೆ ತಮ್ಮ ಕಾಮಿಡಿ ಮ್ಯಾಜಿಕ್ ಪ್ರದರ್ಶಿಸಲು ಸಜ್ಜಾಗಿದ್ದಾರೆ. ಹುಟ್ಟುಹಬ್ಬದ ವಿಶೇಷವಾಗಿ ಬಿಡುಗಡೆಯಾದ ಗ್ಲಿಂಪ್ಸ್ ಈಗಾಗಲೇ ಸಿನಿಪ್ರಿಯರ ಗಮನ ಸೆಳೆದಿದ್ದು, ಚಿತ್ರದ ಮುಂದಿನ ಅಪ್‌ಡೇಟ್‌ಗಳಿಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.ಜ






