ಬೆಂಗಳೂರು: ಹಳೇ ದ್ವೇಷದ ಹಿನ್ನೆಲೆ ರೌಡಿ ಶೀಟರ್ ಮೊಹಮ್ಮದ್ ಶಬ್ಬೀರ್ ಎಂಬಾತನನ್ನ ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬಂಡೆಪಾಳ್ಯ ಠಾಣಾ ವ್ಯಾಪ್ತಿಯ ಮಂಗಮ್ಮನಪಾಳ್ಯದಲ್ಲಿ ನಡೆದಿದೆ.
38 ವರ್ಷದ ಮೊಹಮ್ಮದ್ ಶಬ್ಬೀರ್ ಕೊಲೆಯಾದ ರೌಡಿ ಶೀಟರ್ ಆಗಿದ್ದಾನೆ
ಸೋಮವಾರ ರಾತ್ರಿ 10.30ರ ಸುಮಾರಿಗೆ ಶಬ್ಬೀರ್ ಮತ್ತು ಐವರು ಸ್ನೇಹಿತರು ಆಟೋದಲ್ಲಿ ಬರುತ್ತಿದ್ದರು. ಈ ವೇಳೆ ಮಂಗಮ್ಮನಪಾಳ್ಯ ಮುಳ್ಯರಸ್ತೆಯ ತಿರುವಿನಲ್ಲಿ ಎದುರಾದ ಆರು ಮಂದಿ ದುಷ್ಕರ್ಮಿಗಳು ಏಕಾಏಕಿ ಆಟೋದಲ್ಲಿದ್ದವರ ಮೇಲೆ ಕಾರದ ಪುಡಿ ಎರಚಿ ಮಚ್ಚು, ಲಾಂಗ್ ನಿಂದ ಹಲ್ಲೆ ಮಾಡಿದ್ದಾರೆ. ಈ ವೇಳೆ ಮೊಹಮ್ಮದ್ ಶಬ್ಬೀರ್ ಮೇಲೆಯೆ ತೀವ್ರ ದಾಳಿ ನಡೆಸಿದ್ದರಿಂದ ಆತ ಸ್ಥಳದಲ್ಲೇ ಮೃತಪಟ್ಟಿದ್ದ. ಉಳಿದ ಐವರಿಗೂ ಗಾಯವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇನ್ನು ಕೃತ್ಯ ನಡೆಸಿರೋದು ಪರಿಚಯಸ್ಥರೇ ಎನ್ನುವುದು ಗೊತ್ತಾಗಿದ್ದು, ಗಾಯಗೊಂಡ ವ್ಯಕ್ತಿ ದೂರಿನ ಆಧಾರದ ಮೇಲೆ 6 ಜನರ ವಿರುದ್ಧ ಬಂಡೇಪಾಳ್ಯ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗ್ತಿದೆ
ಕೊಲೆಯಾದ ಶಬ್ಬೀರ್ ವಿರುದ್ಧ ಕೊಲೆ ಯತ್ನ, ರಾಬರಿ ಸೇರಿದಂತೆ ಸುಮಾರು 15 ಪ್ರಕರಣಗಳಿದ್ದವು. ಆದರೆ ಏರಿಯಾ ಹುಡುಗರ ಜೊತೆ ಹಳೇ ದ್ವೇಷದ ಹಿನ್ನಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.








