• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೆರೆಗಳಿಗೆ ನೀರು ತುಂಬಿಸಲು 40 ಸಾವಿರ ಕೋಟಿ ರೂಪಾಯಿ ವೆಚ್ಚ-ಡಿ.ಕೆ ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
December 17, 2025
in Top Story, ಕರ್ನಾಟಕ, ರಾಜಕೀಯ
0
ಕೆರೆಗಳಿಗೆ ನೀರು ತುಂಬಿಸಲು 40 ಸಾವಿರ ಕೋಟಿ ರೂಪಾಯಿ ವೆಚ್ಚ-ಡಿ.ಕೆ ಶಿವಕುಮಾರ್
Share on WhatsAppShare on FacebookShare on Telegram

ಬೆಳಗಾವಿ: ಸುಮಾರು 40 ಸಾವಿರ ಕೋಟಿ ರೂಪಾಯಿಗಳನ್ನು ವಿವಿಧ ರೀತಿಯಲ್ಲಿ ಕೆರೆಗಳನ್ನು(Lake) ತುಂಬಿಸಲು ಖರ್ಚು ಮಾಡಲಾಗುತ್ತಿದೆ. ಅನೇಕ ಕೆರೆಗಳನ್ನು ತುಂಬಿಸಲು ಸುಮಾರು 3 ಸಾವಿರ ಕೋಟಿಯನ್ನು ಇಂಧನ ಇಲಾಖೆಯಿಂದ ಖರ್ಚು ಮಾಡಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್( D.K Shivakumar) ತಿಳಿಸಿದ್ದಾರೆ.

ADVERTISEMENT
Iltija Mufti : ನಿತೀಶ್ ಕುಮಾರ್ ನಡವಳಿಕೆ ನಾಚಿಕೆ ತರಿಸುತ್ತೆ..! #PDPleader #iltijamufti #nitishkumar

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ನಡೆದ ಕೆರೆ ಸಂರಕ್ಷಣೆ ಜಾಗೃತಿ ಮತ್ತು ನೀರಿದ್ದರೆ ನಾಳೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ʼವಿದ್ಯುತ್ ಬಿಲ್ ಕಟ್ಟದೇ ಇದ್ದರೆ ವಿದ್ಯುತ್ ಸರಬರಾಜು ಮಾಡಿದ ಕಂಪನಿಗಳಿಗೆ ಸುಮಾರು ಶೇ.15 ರಷ್ಟು ಬಡ್ಡಿ ಸೇರಿಸಿ ಕೊಡಬೇಕಿದೆ. ಇದರ ಬಗ್ಗೆ ವಿಧಾನಸಭೆಯಲ್ಲಿ ಉತ್ತರ ನೀಡಬೇಕಿದೆ. ಸಿ.ಪಿ.ಯೋಗೇಶ್ವರ್ ಅವರು ಸೇರಿದಂತೆ ಒಂದಷ್ಟು ಜನ ಶಾಸಕರು ಇದರ ಬಗ್ಗೆ ಪ್ರಸ್ತಾವನೆ ಮುಂದಿಟ್ಟಿದ್ದಾರೆʼ ಎಂದು ತಿಳಿಸಿದರು.

Belagavi Winter Session: ಸದನದಲ್ಲಿ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಗಮನ ಸೆಳೆದ ಶಾಸಕ ಕಂದಕೂರ

ʼಅದಕ್ಕೆ ನಾನು ಪಂಪ್ ಮಾಡಿ ನೀರು ತುಂಬಿಸುವ ಕೆರೆಗಳಿಗೆ ಮೀನು ಮರಿಗಳನ್ನು ಬಿಟ್ಟು ಅದನ್ನು ಹರಾಜು ಹಾಕಿ ಅದರ ಆದಾಯದಿಂದ ವಿದ್ಯುತ್ ಬಿಲ್ ಪಾವತಿ ಮಾಡುವ ಆಲೋಚನೆಯಿದೆ. ಬರುವ ಆದಾಯದಿಂದ ಕೆರೆಗಳ ನಿರ್ವಹಣೆ ಮಾಡಬೇಕಿದೆ. ಸುಮಾರು 20 ಸಾವಿರ ಕೋಟಿ ಹಣವನ್ನು ಬೋರ್ ವೆಲ್ ಗಳಿಗೆ ಉಚಿತ ವಿದ್ಯುತ್ ನೀಡಲು ಸರ್ಕಾರ ಖರ್ಚು ಮಾಡುತ್ತಿದೆ. ಎಷ್ಟು ನಾವು ಸಹಾಯಧನ ನೀಡಲು ಸಾಧ್ಯ. ರೈತರು 10 ಹೆಚ್‌ಪಿ ಮೋಟರ್ ಹಾಕಿ ನೀರು ತೆಗೆಯುತ್ತಿದ್ದಾರೆ. 20 ಕಿಮೀ ದೂರಕ್ಕೂ ನೀರು ತೆಗೆದುಕೊಂಡು ಹೋಗುತ್ತಿದ್ದಾರೆʼ ಎಂದು ತಿಳಿಸಿದರು.

Lakshmi Hebbalkar on Gruhalakshmi: ಇದು ಬಿಜೆಪಿಯಲ್ಲ ಕಾಂಗ್ರೆಸ್, ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ..!

ʼಹೆಚ್‌.ಕೆ.ಪಾಟೀಲ್ ಅವರು ನೀರಾವರಿ ಸಚಿವರಾಗಿದ್ದಾಗ ಕೆರೆ ನೀರು ಬಳಕೆದಾರರ ಸಂಘಗಳಿಗೆ ಹೊಸ ರೂಪ ನೀಡಿದರು. ಮಧ್ಯದಲ್ಲಿ ಇದು ನಿಂತು ಹೋಗಿತ್ತು. ಈಗ ನಾನು ಹಾಗೂ ಬೋಸರಾಜು ಅವರು ಸೇರಿ ಹೊಸ ರೂಪ ನೀಡಿದ್ದೇವೆʼ ಎಂದರು.

ʼಕೆರೆ ನೀರು ಬಳಕೆದಾರರ ಸಂಘಗಳಿಗೆ ಶಕ್ತಿ ತುಂಬಬೇಕು. ನಿಮಗೆ ಆರ್ಥಿಕ ಸಹಾಯ ಮಾಡಬೇಕಿದೆ. ನರೇಗಾ ಯೋಜನೆ ಹಾಗೂ ಇತರೇ ಯೋಜನೆಗಳ ಅಡಿ ಕೆರೆ ಹೂಳು ತೆಗೆದು, ಒತ್ತುವರಿ ತೆರವು ಮಾಡಿ ಜಿಲ್ಲಾಡಳಿತ, ಸಣ್ಣ ನೀರಾವರಿ ಇಲಾಖೆ ಪ್ರಯತ್ನ ಮಾಡಿದೆ. ಯಾವುದೇ ಕೆರೆಗಳಾದರೂ ಈ ಸಂಘಗಳು ನಮ್ಮ ಕೆರೆಗಳು ಎಂದು ರಕ್ಷಣೆ ಮಾಡಬೇಕು. ರಾಜ್ಯದಲ್ಲಿ 30 ಲಕ್ಷ ಬೋರ್ ವೆಲ್‌ಗಳಿವೆ. ಇದರಿಂದ ಅಂತರ್ಜಲಕ್ಕೆ ಹೊಡೆತವಾಗುತ್ತಿದೆ. ಇದು ತಪ್ಪಬೇಕು ಎಂದರೆ ಕೆರೆಗಳಿಗೆ ನೀರು ತುಂಬಬೇಕು. ರಕ್ಷಣೆ ಮಾಡಬೇಕುʼ ಎಂದು ಹೇಳಿದರು.

Belagavi Session: MLAಮುನಿರಾಜು ಪ್ರಶ್ನೆ ವೇಳೆ ಎದ್ದು ಅಬ್ಬರಿಸಿದ MLA ಮುನಿರತ್ನಗೆ DCM ಡಿಕೆಶಿ ಟಾಂಗ್!

ʼಕೆರೆಗಳ ರಕ್ಷಣೆಗೆ ಬಳಕೆದಾರರ ಸಂಘ ನೀಡಿರುವ ಮನವಿಗಳನ್ನು ನಾವು ಪರಿಗಣಿಸುತ್ತೇವೆ. ಅನುದಾನವನ್ನು ಹೇಗೆ ಹೆಚ್ಚಿಗೆ ಕೊಡಬಹುದು ಎಂದು ಚಿಂತಿಸುತ್ತೇವೆ. ನಿಮ್ಮ ಪರಪಾವಗಿ ನಾವಿದ್ದೇವೆ. ನೀವುಗಳು ಸ್ವಾರ್ಥವನ್ನು ಬಿಟ್ಟು ಕೆಲಸ ಮಾಡಬೇಕು. ಕೆರೆ ನೀರಿನಲ್ಲಿ ತೇಲುವ ಸೋಲಾರ್ ಪ್ಲಾಂಟ್ ಗಳನ್ನು ಮಾಡುವ ಆಲೋಚನೆಯನ್ನು ಬೋಸರಾಜು ಅವರು ಮಾಡಿದ್ದಾರೆ. ನಾನು ಇದನ್ನು ಪ್ರಯತ್ನ ನಡೆಸಿದೆ.‌ ಆದರೆ ಸುಲಭದ ಕೆಲಸವಲ್ಲ.

ಸಣ್ಣ ನೀರಾವರಿ, ಗ್ರಾಮೀಣಾಭಿವೃದ್ಧಿ, ನಮ್ಮ ಇಲಾಖೆಗೆ ಸೇರಿದ ಕೆರೆಗಳನ್ನು ನಾವೆಲ್ಲರೂ ಸೇರಿ ಸಮಗ್ರವಾಗಿ ಉಳಿಸುವ ಆಲೋಚನೆ ಮಾಡುತ್ತಿದ್ದೇವೆ. ಕಾಲುವೆಗಳ ಕೊನೆ ಭಾಗಕ್ಕೆ ನೀರು ತಲುಪುತ್ತಿಲ್ಲ. ಅದಕ್ಕೆ ಹೊಸ ಕಾನೂನು ತಂದಿದ್ದೇವೆ. ಏಕೆಂದರೆ ಅನೇಕ ರೈತರಿಗೆ ನೀರೆ ಸಿಗುತ್ತಿಲ್ಲ. ಎತ್ತಿನಹೊಳೆ ಯೋಜನೆ ಮೂಲಕ ಬಯಲುಸೀಮೆಗೆ ನೀರು ತರಲಾಗುತ್ತಿದೆ. ಇದಕ್ಕೆ ಈಗಾಗಲೇ 20 ಸಾವಿರ ಕೋಟಿ ಖರ್ಚಾಗಿದೆ. ಇನ್ನು ಎಷ್ಟು ಕೋಟಿ ಖರ್ಚಾಗಲಿದೆ ಎಂಬುದು ಗೊತ್ತಿಲ್ಲ. ಮಳೆಗಾಲದಲ್ಲಿ ನೀರು ತೆಗೆದು ದೊಡ್ಡ ಪ್ರಯೋಗ ಮಾಡಿದ್ದೇವೆʼ ಎಂದರು.

CT Ravi: ಪ್ರಣಾಳಿಕೆಯಲ್ಲಿ ನೀಡಿದ್ದೆಲ್ಲಾ ಮೋಸ ಮಾಡೋಕಾ..? #dkshivakumar #cmsiddaramaiah

ʼಎಲ್ಲರಿಗಿಂತ ಕೋಲಾರ, ಚಿಕ್ಕಬಳ್ಳಾಪುರ ಭಾಗದವರಿಗೆ ನೀರಿನ ಮಹತ್ವ ತಿಳಿದಿದೆ. ಬೋರ್ ವೆಲ್ ನೀರು ಬಳಸಿ ತರಕಾರಿ, ಹಣ್ಣುಗಳನ್ನು ಬೆಳೆಯಿತ್ತಿದ್ದಾರೆ, ವಿದೇಶಗಳಿಗೆ ರಫ್ತು ಮಾಡುತ್ತಿದ್ದಾರೆ. 48,848 ಕೆರೆಗಳನ್ನು ನಾವುಗಳು ಹೇಗೆ ರಕ್ಷಣೆ ಮಾಡಬೇಕು ಎಂಬುದೇ ನಮ್ಮೆಲ್ಲರ ಹೊಣೆ. ಕೆರೆಗಳನ್ನು ಉಳಿಸುವುದು ಮಧ್ಯಮ, ಸಣ್ಣ, ಬೃಹತ್ ನೀರಾವರಿ, ಗ್ರಾಮೀಣಾಭಿವೃದ್ಧಿ ಇಲಾಖೆಗಳ ಜವಾಬ್ದಾರಿಯಾಗಿದೆʼ ಎಂದು ತಿಳಿಸಿದರು.

Shashi Tharoor: ಮನ್ರೇಗಾ ಹೆಸರು ಬದಲಾವಣೆ ಅನೈತಿಕವಾಗಿದೆ..! #pmmodi #NREGA #mahatmagandhi

ಕೇಂದ್ರದ ಇಕ್ಕಳದಲ್ಲಿ ಸಿಲುಕಿದ್ದೇವೆ

ʼಕಾವೇರಿ, ಮಹದಾಯಿ, ತುಂಗಭದ್ರಾ, ಕೃಷ್ಣಾ ಹೀಗೆ ಹಲವಾರು ಹೋರಾಟಗಳನ್ನು ನಾವು ಮಾಡುತ್ತಿದ್ದೇವೆ. ಭದ್ರಾ ಮೇಲ್ದಂಡೆ, ಕೃಷ್ಣಾ, ಮಹದಾಯಿ ಯೋಜನೆಯಡಿ ನಾವು ಕೇಂದ್ರ ಸರ್ಕಾರದ ಇಕ್ಕಳದಲ್ಲಿ ಸಿಲುಕಿ ಕೊಂಡಿದ್ದೇವೆ. ಆಲಮಟ್ಟಿ ಎತ್ತರ ಹೆಚ್ಚಳದ ಬಗ್ಗೆ ಅಧಿಸೂಚನೆ ಹೊರಡಿಸಬೇಕು. ಮಹದಾಯಿಗೆ ಅರಣ್ಯ ಇಲಾಖೆ ಒಪ್ಪಿಗೆ ನೀಡಬೇಕು. ಭದ್ರಾ ಮೇಲ್ದಂಡೆಗೆ ಕೇಂದ್ರ ಹಣ ನೀಡಬೇಕಿದೆ.‌ ತುಂಗಭದ್ರಾ ಯೋಜನೆಯಡಿ ನಾವು ನಮ್ಮ ಪಾಲಿನ ನೀರನ್ನು ಸಮತೋಲಿತ ಜಲಾಶಯ ನಿರ್ಮಾಣ ಮಾಡಿ ಅಥವಾ ಪಂಪ್ ಮಾಡಿ ಬಳಸಿಕೊಳ್ಳಬೇಕಿದೆ. ಇದಕ್ಕೆ ಆಂದ್ರ, ತೆಲಂಗಾಣ ಒಪ್ಪಿಗೆ ಸಿಗಬೇಕು. ಅವರುಗಳು ನೀರು ಸಿಗುತ್ತಿದೆ ಎಂದು ಸುಮ್ಮನಿದ್ದಾರೆʼ ಎಂದರು.

Tags: DCM DK ShivakumarKarnatakaKarnataka PoliticsLakeLakes Develpment
Previous Post

IPL 2026 Mini Auction: ಚಾಣಕ್ಷ್ಯತನದಿಂದ ಬಲಿಷ್ಠ ತಂಡ ಕಟ್ಟಿದ ಆರ್‌ಸಿಬಿ..!

Next Post

KRIDL ಕಚೇರಿ ಮೇಲೆ ಲೋಕಾಯುಕ್ತ ದಾಳಿ

Related Posts

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Top Story

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 18, 2025
0

ಬೆಳಗಾವಿ: ಬೆಂಗಳೂರು ಮೈಸೂರು ಇನ್ಸ್ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್(Supreme Court) ಆದೇಶ ಇರುವ ಹಿನ್ನೆಲೆಯಲ್ಲಿ ಸರ್ಕಾರವು ಯೋಜನೆಯಲ್ಲಿ ಯಾವುದೇ ಬದಲಾವಣೆ ತರಲು ಸಾಧ್ಯವಿಲ್ಲ ಎಂದು...

Read moreDetails
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

December 18, 2025
Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

December 18, 2025
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

December 18, 2025
Next Post
KRIDL ಕಚೇರಿ ಮೇಲೆ ಲೋಕಾಯುಕ್ತ ದಾಳಿ

KRIDL ಕಚೇರಿ ಮೇಲೆ ಲೋಕಾಯುಕ್ತ ದಾಳಿ

Recent News

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Top Story

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ
Top Story

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

by ಪ್ರತಿಧ್ವನಿ
December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!
Top Story

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

by ಪ್ರತಿಧ್ವನಿ
December 18, 2025
Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ
Top Story

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

by ಪ್ರತಿಧ್ವನಿ
December 18, 2025
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ
Top Story

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!