
ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸದಂತೆ ಅಂದಿನ ಪ್ರಧಾನಮಂತ್ರಿ ಇಂದಿರಾಗಾಂಧಿ ಅವರು ಹೇರಿದ್ದ ನಿಷೇಧವನ್ನು ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರವು ಹಿಂಪಡೆದಿರುವುದು ಅದು ಸಂಘಕ್ಕೆ ನೂರು ವರ್ಷ ತುಂಬುತ್ತಿರುವ ಹಿನ್ನಲೆಯಲ್ಲಿ ಈ ನಿರ್ಣಯ ಸ್ವಾಗತಾರ್ಹವಾಗಿದೆ ಎಂದು ಸಂಘದ ಸ್ವಯಂಸೇವಕ ಯುವಮುಖಂಡ ಗುರುನಾಥ ರಾಜಗೀರಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
.1966 ರಲ್ಲಿ ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ವಿಧಿಸಿದ್ದ ಅಸಂವಿಧಾನಿಕ ನಿಷೇಧವನ್ನು ಮೋದಿ ಸರ್ಕಾರವು ಹಿಂಪಡೆದಿರುವುದರಿಂದ ಸರ್ಕಾರಿ ನೌಕರರು ಈಗ ನಿಸ್ಸಂಕೋಚವಾಗಿ ಯಾವುದೇ ಭಯವಿಲ್ಲದನೆ ಸಂಘದ ಸೇವಾ ಕಾರ್ಯದಲ್ಲಿ ತೊಡಗಿಸಿಕೊಳ್ಳಬಹುದಾಗಿದೆ.ಗುರುನಾಥ ರಾಜಗೀರಾರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕ










