ಮಂಗಳೂರು: ಮೇ.೨೬: ಕಾಂಗ್ರೆಸ್ ನಾಯಕರು ಬಜರಂಗದಳ, ಆರೆಸ್ಸೆಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಪಕ್ಷವೇ ರಾಜ್ಯದಲ್ಲಿ ಇರಲ್ಲ ಎಂದು ಬಿಜೆಪಿ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮುಂದುವೆರದು ಮಾತನಾಡಿದ ಅವರು, ಆರ್ ಎಸ್ ಎಸ್, ಬಜರಂಗದಳದ ವಿಷಯಕ್ಕೆ ಕೈ ಹಾಕಿದ್ರೆ, ಸಿದ್ದರಾಮಯ್ಯ ರಾಜಕೀಯ ಮುಗಿಯುತ್ತೆ ಎಂದ ನಳಿನ್ ಕುಮಾರ್ ಕಟೀಲ್ ಅವರು, ಸಿದ್ದರಾಮಯ್ಯ ಮತ್ತು ಪ್ರಿಯಾಂಕ್ ಖರ್ಗೆಗೆ ತಾಕತ್ತಿದ್ದರೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರನ್ನ ಬಂಧಿಸಲಿ ಎಂದು ಸವಾಲೆಸೆದರು.


ಆರೆಸ್ಸೆಸ್ ನಿಷೇಧದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರದ ಕುರಿತು ಮಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಕಟೀಲ್, ಆರೆಸ್ಸೆಸ್ ಈ ದೇಶದಲ್ಲಿ ರಾಷ್ಟ್ರ ಭಕ್ತಿ ಕಲಿಸಿದೆ, ಈ ದೇಶದ ಪ್ರಧಾನಿ ಮೋದಿ ಆರ್ಎಸ್ಎಸ್ ಸ್ವಯಂ ಸೇವಕ. ಕೇಂದ್ರದ ಸಚಿವರು, ನಾವೆಲ್ಲರೂ ಆರೆಸ್ಸೆಸ್ ಸ್ವಯಂಸೇವಕರು. ನೆಹರೂ, ಇಂದಿರಾ ಗಾಂಧಿ ಎಲ್ಲರೂ ನಿಷೇಧಕ್ಕೆ ಕೈ ಹಾಕಿ ಕೈ ಸುಟ್ಟುಕೊಂಡಿದ್ದಾರೆ. ಅಲ್ಲದೆ, ಆರೆಸ್ಸೆಸ್ ರಾಷ್ಟ್ರಭಕ್ತಿ ಸಂಕೇತ ಅಂತ ಕಾಂಗ್ರೆಸ್ ನಲ್ಲೇ ಹೇಳಿದ್ದಾರೆ ಎಂದರು.