• Home
  • About Us
  • ಕರ್ನಾಟಕ
Tuesday, December 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

CM Siddaramaiah: RSS ನವರು ಅಂಬೇಡ್ಕರ್ ಸಂವಿಧಾನವನ್ನು ವಿರೋಧಿಸಿದ್ದರು..!!

ಪ್ರತಿಧ್ವನಿ by ಪ್ರತಿಧ್ವನಿ
October 18, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಅಂಬೇಡ್ಕರ್ ಅವರು ತಮ್ಮ ಜ್ಞಾನವನ್ನು ಸಮಾಜದ ಬದಲಾವಣೆಗೆ ಬಳಸಿದ ಮಹಾನ್ ಚೇತನ: ಸಿ.ಎಂ.ಸಿದ್ದರಾಮಯ್ಯ(CM Siddaramaiah)

ADVERTISEMENT

ಸಂಘ ಪರಿವಾರ ಮತ್ತು RSS ನವರು ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ್ದರು. ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಎಚ್ಚರಿಕೆ ಇಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆಕೊಟ್ಟರು. ಮೈಸೂರು ವಿಶ್ವ ವಿದ್ಯಾಲಯದ ರಜತ ಮಹೋತ್ಸವ ಹಾಗೂ ನೂತನ ಜ್ಞಾನ ದರ್ಶನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

ಅಂಬೇಡ್ಕರ್ (Ambedkar) ಅವರು ತಮ್ಮ ಜ್ಞಾನವನ್ನು ಸಮಾಜದ ಬದಲಾವಣೆಗೆ ಬಳಸಿದ ಮಹಾನ್ ಚೇತನ. ಇವರು ಸಮಾಜವನ್ನು ಅರ್ಥ ಮಾಡಿಕೊಳ್ಳಲು ಜ್ಞಾನ‌ ಸಂಪಾದನೆ ಮಾಡಿದರು. ಬಳಿಕ ತಮ್ಮ ಜ್ಞಾನವನ್ನು ಬದುಕಿನುದ್ದಕ್ಕೂ ಸಮಾಜದ ಬದಲಾವಣೆಗೆ ಬಳಸಿದರು ಎಂದು ಮೆಚ್ಚುಗೆ ಸೂಚಿಸಿದರು.

ಅಂಬೇಡ್ಕರ್ ಅವರ ಹೆಸರಲ್ಲಿ ಬಿಜೆಪಿಯವರು, ಸಂಘ ಪರಿವಾರದವರು ಅಪಪ್ರಚಾರ ಮಾಡುತ್ತಿದ್ದಾರೆ. ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಕಾಂಗ್ರೆಸ್ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಸತ್ಯ ಏನೆಂದರೆ “ನನ್ನನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಮತ್ತು ಡಾಂಗೆ” ಎಂದು ಸ್ವತಃ ಅಂಬೇಡ್ಕರ್ ಅವರೇ ತಮ್ಮದೇ ಹಸ್ತಾಕ್ಷರದಲ್ಲಿ ಬರೆದಿದ್ದಾರೆ. ಇಂಥಾ ಸತ್ಯಗಳನ್ನು ಸಮಾಜದ ಮುಂದಿಟ್ಟು ಸಂಘ ಪರಿವಾರದ ಸುಳ್ಳುಗಳನ್ನು ಬಹಿರಂಗಗೊಳಿಸಬೇಕು ಎಂದು ಕರೆ ನೀಡಿದರು.

ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (Ambedkar School of Economics) ಅನ್ನು ನಾನು ಸ್ಥಾಪಿಸಿದ್ದು ಏಕೆಂದರೆ ಅವರನ್ನು ಓದಿಕೊಂಡವರು ಅವರ ಮಾರ್ಗದಲ್ಲಿ ನಡೆಯಲಿ ಉದ್ದೇಶದಿಂದ. ಅಂಬೇಡ್ಕರ್ ಅವರಿಗೆ ಅಂಬೇಡ್ಕರ್ ಅವರೇ ಸಾಟಿ. ಮತ್ತೊಬ್ಬ ಅಂಬೇಡ್ಕರ್ ಬರಲು ಸಾಧ್ಯವಿಲ್ಲ. ಆದರೆ ಪ್ರತಿಯೊಬ್ಬರೂ ಅವರ ಆದರ್ಶಗಳನ್ನು ಪಾಲಿಸಿ ಅವರ ಹಾದಿಯಲ್ಲಿ ನಡೆಯಬೇಕು ಎಂದರು.

ವಿಶ್ವದ ಎಲ್ಲಾ ಸಂವಿಧಾನಗಳನ್ನು ಓದಿ, ಜೀರ್ಣಿಸಿಕೊಂಡು ಭಾರತೀಯ ಸಮಾಜಕ್ಕೆ ಅನ್ವಯ ಆಗುವ ವಿಶ್ವ ಶ್ರೇಷ್ಠ ಸಂವಿಧಾನವನ್ನು ಅಂಬೇಡ್ಕರ್ ಅವರು ಭಾರತಕ್ಕೆ ಕೊಟ್ಟರು ಎಂದು ವಿವರಿಸಿದರು. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರ ಮೇಲೆ ಸನಾತನಿ ಒಬ್ಬ ಶೂ ಎಸೆದಿರುವುದು ಸನಾತನಿಗಳು , ಪಟ್ಟಭದ್ರರು ಸಮಾಜದಲ್ಲಿ ಇನ್ನೂ ಇದ್ದಾರೆ ಎನ್ನುವುದಕ್ಕೆ ಸಾಕ್ಷಿ ಎಂದರು.

ಶೂ ಎಸೆತವನ್ನು ದಲಿತರಷ್ಟೇ ಅಲ್ಲ. ಪ್ರತಿಯೊಬ್ಬರೂ ವಿರೋಧಿಸಬೇಕು. ಹೀಗಾದಾಗ ಮಾತ್ರ ಸಮಾಜ ಬದಲಾವಣೆಯ ಹಾದಿಯಲ್ಲಿದೆ ಎಂದು ಸಮಾಧಾನ ಪಟ್ಟುಕೊಳ್ಳಬಹುದು ಎಂದರು. ನಾನು ಬುದ್ದ, ಬಸವ, ಅಂಬೇಡ್ಕರ್ ವಿಚಾರದಲ್ಲಿ ನಂಬಿಕೆ ಇಟ್ಟುಕೊಂಡಿದ್ದೀನಿ. ಈ ಕಾರಣಕ್ಕೇ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯಬೇಕು ಎಂದು ಆಶಿಸುತ್ತೇನೆ. ವಿಜ್ಞಾನ ಓದಿಯೂ ಮೂಢ ನಂಬಿಕೆ ಆಚರಿಸುವವರಾಗಬೇಡಿ ಎಂದರು.

ಮೈಸೂರು ವಿವಿಯಲ್ಲಿ (Mysure University) ಅಂಬೇಡ್ಕರ್ ಅಧ್ಯಯನ‌ ಕೇಂದ್ರ ಆಗಿ 25 ವರ್ಷಗಳಾಗಿವೆ. ಈ ಸಂದರ್ಭದಲ್ಲಿ “ವಿಶ್ವ ಜ್ಞಾನಿ ಅಂಬೇಡ್ಕರ್ ಸಭಾ ಭವನ” ಲೋಕಾರ್ಪಣೆ ಆಗುತ್ತಿರುವುದು ಸ್ವಾಗತಾರ್ಹ ಎಂದರು. ಎಲ್ಲರಿಗೂ ಸಮಾನ ಅವಕಾಶಗಳು ಸಿಗದೇ ಇದ್ದುದರಿಂದ ಅಸಮಾನತೆ ಸೃಷ್ಟಿಯಾಗಿದೆ. ವಿದ್ಯೆ ಯಾರಪ್ಪನ ಮನೆ ಆಸ್ತಿ ಅಲ್ಲ. ಅವಕಾಶಗಳು ಸಿಗಬೇಕು ಅಷ್ಟೆ. ಅವಕಾಶ ಸಿಕ್ಕಾಗ ವಿದ್ವಾಂಸರಾಗುತ್ತಾರೆ, ಜ್ಞಾನಿ ಆಗುತ್ತಾರೆ. ಅಂಬೇಡ್ಕರ್ ಅವರು ತಮ್ಮ ಜ್ಞಾನವನ್ನು ಸಮಾಜದ ಬದಲಾವಣೆಗೆ ಬಳಸಿದ ಮಹಾನ್ ಚೇತನ ಎಂದರು.

ನಿಮ್ಮ ಸಹವಾಸ ಸರಿಯಾಗಿರಲಿ
ಸಮಾಜದ ಪರವಾಗಿ ಇರುವವರ ಜೊತೆ ನಿಮ್ಮ ಸಹವಾಸ ಇರಲಿ. ಸಮಾಜ ಬದಲಾವಣೆಯ ವಿರೋಧಿಗಳ, ಸನಾತನಿಗಳ ಸಹವಾಸ ಬೇಡ ಎಂದು ಕರೆ ನೀಡಿದರು.

Tags: c m siddaramaiahCM Siddaramaiahcm siddaramaiah budgetcm siddaramaiah cabinetcm siddaramaiah dancecm siddaramaiah dasaracm siddaramaiah latest newscm siddaramaiah livecm siddaramaiah newscm siddaramaiah patriotic momentcm siddaramaiah press meetcm siddaramaiah speechcm siddaramaiah speech 2025cm siddaramaiah statuscm siddaramaiah today newscm siddaramaiah videokarnataka cm siddaramaiahkarnataka next cm siddaramaiahSiddaramaiah CMsiddaramaiah karnataka cm
Previous Post

Udala Kannada Cinema: ನವೆಂಬರ್ 14 ರಂದು ತೆರೆಗೆ ಬರಲಿದ್ದಾನೆ “ಉಡಾಳ” .

Next Post

Nirmala Sitharaman: ಸಾರ್ವಭೌಮತ್ವಕ್ಕೆ ಸಾಕ್ಷಿ ಮೋದಿಜೀ- ನಿರ್ಮಲಾ ಸೀತಾರಾಮ್

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

December 23, 2025
Next Post

Nirmala Sitharaman: ಸಾರ್ವಭೌಮತ್ವಕ್ಕೆ ಸಾಕ್ಷಿ ಮೋದಿಜೀ- ನಿರ್ಮಲಾ ಸೀತಾರಾಮ್

Recent News

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada