ಆರ್‌ಟಿಐ ಕಾರ್ಯಕರ್ತ ಸಾಕೇತ್ ಗೋಖಲೆರವರು ಗುರವಾರ ನವದೆಹಲಿಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಯಾದರು.
ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷವು ಸಮಸ್ಯೆಗಳ ಬಗ್ಗೆ “ಆಕ್ರಮಣಕಾರಿ” ನಿಲುವನ್ನು ತೆಗೆದುಕೊಳ್ಳುತ್ತದೆ ಎಂದು ಅವರು ಪಕ್ಷ ಸೇರ್ಪಡೆಯಾದ ನಂತರ ಹೇಳಿದ್ದಾರೆ.
ಸಂಸತ್ತಿನಲ್ಲಿ ಟಿಎಂಸಿ ಪಕ್ಷವು ಎರಡನೇ ಅತಿದೊಡ್ಡ ವಿರೋಧ ಪಕ್ಷವಾಗಿದೆ ಮತ್ತು ಇದು ನನ್ನ ಸ್ಪಷ್ಟ ಆಯ್ಕೆಯಾಗಿದೆ. ನೀವು ಎಲ್ಲಾ ರಾಷ್ಟ್ರೀಯ ಪಕ್ಷಗಳನ್ನು ನೋಡಿದರೆ, ಟಿಎಂಸಿ ಆಕ್ರಮಣಕಾರಿ ನಿಲುವನ್ನು ತೆಗೆದುಕೊಳ್ಳುತ್ತದೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯು ಮುಂಚೂನಿಯಲ್ಲಿ ನಿಂತು ಹೋರಾಡುತ್ತಿರುವ ರೀತಿ ನೋಡಿಯೆ ನಾನು ಟಿ.ಎಂ.ಸಿ ಪಕ್ಷಕ್ಕೆ ಸೇರ್ಪಡೆಯಾದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.





