ಪಶ್ಚಿಮ ಬಂಗಾಳದ ವಿಧಾನಸಭೆ ಅಧಿವೇಶನದಲ್ಲಿ ಗದ್ಧಲ ಸೃಷ್ಟಿಸಿದ್ದಕ್ಕಾಗಿ 7 ಬಿಜೆಪಿ ಶಾಸಕರನ್ನು ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ.
ಕಳೆದ ಮಾರ್ಚ್ ನಲ್ಲಿ ನಡೆದ ಅಧಿವೇಶನದ ವೇಳೆ ಗದ್ಧಲ ಸೃಷ್ಟಿಸಿ ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ, ವಿಪ್ ಮುಖ್ಯಸ್ಥ ಮನೋಜ್ ಟಿಗ್ಗಾ ಸೇರಿದಂತೆ 7 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಲಾಗಿತ್ತು.
ತಮ್ಮ ಮೇಲಿನ ಅಮಾನತು ಆದೇಶವನ್ನು ಹಿಂಪಡೆಯಬೇಕು ಎಂದು ಸುವೇಂದು ಅಧಿಕಾರಿ ಮನವಿ ಮಾಡಿದ್ದರು. ಆದರೆ ತಾಂತ್ರಿಕ ಕಾರಣಗಳಿಂದ ಮುಂದೂಡಲಾಗಿದ್ದು, ಇಂದು ಸ್ಪೀಕರ್ ಆದೇಶವನ್ನು ವಾಪಸ್ ಪಡೆದರು.